October 5, 2024

ಒಂಟಿ ಮಹಿಳೆಯೊಬ್ಬರನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಚಿಕ್ಕಮಗಳೂರು ತಾಲ್ಲೂಕು ಆಲ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಆಲ್ದೂರು ಠಾಣಾ ವ್ಯಾಪ್ತಿಯ ಹುಣಸೆಮಕ್ಕಿ ಗ್ರಾಮದಲ್ಲಿ ನಡೆದಿದೆ. ಹುಣಸೆಮಕ್ಕಿ ಗ್ರಾಮದಲ್ಲಿ ಒಬ್ಬಂಟಿಯಾಗಿ ಮನೆಯಲ್ಲಿ ವಾಸವಾಗಿದ್ದ ದಲಿತ ಮಹಿಳೆ ಲಲಿತ(43 ವರ್ಷ) ಅವರನ್ನು ದುಷ್ಕರ್ಮಿಗಳು ಕತ್ತಿಯಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.

ಹುಣಸೆಮಕ್ಕಿ ಗ್ರಾಮದಲ್ಲಿ ಕಳೆದ 5 ವರ್ಷಗಳಿಂದ ಒಬ್ಬಂಟಿಯಾಗಿ ವಾಸವಾಗಿದ್ದ ಲಲಿತ ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದರು ಎನ್ನಲಾಗಿದೆ. ಮಂಗಳವಾರ ರಾತ್ರಿ ಯಾರೋ ದುಷ್ಕರ್ಮಿಗಳು ಅವರ ಮನೆಗೆ ನುಗ್ಗಿ ಕತ್ತಿಯಿಂದ ಹಲ್ಲೆ ನಡೆಸಿದ್ದು, ತೀವ್ರ ರಕ್ತಸ್ರಾವದಿಂದ ಲಲಿತ ಸ್ಥಳದಲ್ಲೇ ಮೃತಪಟ್ಟಿರುತ್ತಾರೆ.

ಈ ಬಗ್ಗೆ ಆಲ್ದೂರು ಠಾಣೆಗೆ ಪಕ್ಕದ ಮನೆಯ ಸೀತಮ್ಮ ಎಂಬುವವರು ದೂರು ನೀಡಿರುತ್ತಾರೆ. ಅವರು ನೀಡಿದ ದೂರಿನ ಸಾರಾಂಶ ಏನೆಂದರೆ  ತಮ್ಮ ಮನೆಯಿಂದ ಸುಮಾರು 50 ಮೀಟರ್ ದೂರದಲ್ಲಿ ತಿಪ್ಪಯ್ಯ ನವರ ಮಗಳಾದ ಲಲಿತಾ ರವರು ಸುಮಾರು 5 ವರ್ಷಗಳಿಂದ ಒಬ್ಬರೇ ವಾಸವಾಗಿದ್ದರು. ಮಂಗಳವಾರ ಸಂಜೆ 5-30 ಗಂಟೆ ಸಮಯಕ್ಕೆ ತಮ್ಮ ಮನೆಗೆ ನೀರು ತೆಗೆದುಕೊಂಡು ಹೋಗಲು ಬಂದಿದ್ದರು. ಬುಧವಾರ ಸಂಜೆ 4-30 ರ ಸಮಯದಲ್ಲಿ ತಾನು ಅವರ ಮನೆಯ ಹತ್ತಿರ ಬಂದು ಲಲಿತ, ಲಲಿತ ದು ಕರೆದಿದ್ದು ಬಾಗಿಲು ತೆಗೆಯಲಿಲ್ಲ. ಬಾಗಿಲು ಸ್ವಲ್ಪ ತೆರೆದಿದ್ದು ಕೈ ಮಾತ್ರ ಕಾಣಿಸುತ್ತಿತ್ತು. ತಾನು ಈ ವಿಷಯವನ್ನು ತನ್ನ ಗಂಡನಾದ ಜಯಪ್ಪರವರಿಗೆ ತಿಳಿಸಿದೆ. ನಂತರ ಊರಿನವರೆಲ್ಲಾ ಲಲಿತ ರವರ ಮನೆಯ ಹತ್ತಿರ ಬಂದು ಬಾಗಿಲು ತೆರೆದು ನೋಡಿದಾಗ ಲಲಿತ ರವರು ರಕ್ತದ ಮಡುವಿನಲ್ಲಿ ಬಿದ್ದಿದ್ದು ಅವರನ್ನು ಯಾರೋ ಕೊಲೆ ಮಾಡಿರುತ್ತಾರೆ ಎಂದು ದೂರು ನೀಡಿರುತ್ತಾರೆ.

ಈ ಬಗ್ಗೆ ಆಲ್ದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿರುತ್ತಾರೆ. ಚಿಕ್ಕಮಗಳೂರು ಜಿಲ್ಲಾ ಆಸ್ಪತ್ರೆಯಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿ ಗುರುವಾರ ಶವ ಸಂಸ್ಕಾರ ನೆರವೇರಿಸಲಾಗಿದೆ.

ಲಲಿತ ಅವರನ್ನು ಯಾರು ಕೊಲೆ ಮಾಡಿದರು ಮತ್ತು ಯಾವ ಕಾರಣಕ್ಕೆ ಕೊಲೆ ಮಾಡಲಾಗಿದೆ ಎಂಬುದು ಪೊಲೀಸರ ತನಿಖೆಯಿಂದ ಬಹಿರಂಗವಾಗಬೇಕು. ಕೊಲೆಗಾರರನ್ನು ಆದಷ್ಟು ಬೇಗ ಪತ್ತೆ ಹಚ್ಚಿ ಶಿಕ್ಷೆ ನೀಡಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ