October 5, 2024

ಸಾಂದರ್ಭಿಕ ಚಿತ್ರ

ಕೊಡಗು ಜಿಲ್ಲೆಯ ಶ್ರೀಮಂಗಲ ವನ್ಯಜೀವಿ ಅಭಯಾರಣ್ಯ ವ್ಯಾಪ್ತಿಯಲ್ಲಿ  ಕಾಡಾನೆ ದಾಳಿಗೆ 63 ವರ್ಷದ ವ್ಯಕ್ತಿಯೊಬ್ಬರು ಸಾವಿಗೀಡಾಗಿದ್ದಾರೆ

ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ಬೀರುಗ ಕಾಫಿ ಎಸ್ಟೇಟ್‌ನಲ್ಲಿ ಬೆಳಗ್ಗೆ 6.30ರ ಸುಮಾರಿಗೆ ಈ ಘಟನೆ ನಡೆದಿದೆ.

ಅರಣ್ಯ ಇಲಾಖೆಯ ಪ್ರಕಾರ, ಅಯ್ಯಮಾಡ ಮಾದಯ್ಯ ಎಂಬುವವರು ಕಾಫಿ ಎಸ್ಟೇಟ್ ಬಳಿ ಬೆಳಗಿನ ವಾಕಿಂಗ್ ಹೋಗಿದ್ದು, ಏಕಾಏಕಿ ಎದುರಿನಿಂದ ಬಂದ ಆನೆ ದಾಳಿ ಮಾಡಿದೆ. ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ಖಾಸಗಿ ಉದ್ಯೋಗದಿಂದ ನಿವೃತ್ತರಾಗಿದ್ದ ಮಾದಯ್ಯ ಅವರು ಇತ್ತೀಚೆಗಷ್ಟೇ ತಮ್ಮ ಗ್ರಾಮದಲ್ಲಿ ಮನೆ ಕಟ್ಟಿಸಲೆಂದು ಬೆಂಗಳೂರಿನಿಂದ ಬಂದಿದ್ದರು.

ಗ್ರಾಮ ಹಾಗೂ ಸುತ್ತಮುತ್ತಲಲ್ಲಿ‌ ಆನೆಗಳ ಹಿಂಡು ಸಂಚಾರ ಮಾಡುತ್ತಿದೆ. ಇದರಿಂದ ಮನೆಯಿಂದ ಹೊರಬೀಳಲೂ ಭಯವಾಗುತ್ತಿದೆ. ಕಾಫಿ ತೋಟಗಳಲ್ಲಿ ಕಾಡಾನೆಗಳು ಬೀಡು ಬಿಟ್ಟಿದ್ದು, ತೋಟದ ಕೆಲಸ ಮಾಡಲು ಕೂಲಿ ಕಾರ್ಮಿಕರು ಭಯಭೀತಿಯಿಂದಾಗಿ ಬರುತ್ತಿಲ್ಲ. ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಅರಣ್ಯ ಇಲಾಖೆ ಸಿಬ್ಬಂದಿಯನ್ನು ಆಗ್ರಹಿಸಿದ್ದಾರೆ.

ಇತ್ತೀಚೆಗೆ ಮಡಿಕೇರಿ ತಾಲೂಕಿನ ನಾಲಡಿ ಗ್ರಾಮದಲ್ಲಿ ಕಂಬೆಯಂಡ ರಾಜ ದೇವಯ್ಯ (59) ಎಂಬ ಕಾಫಿ ಬೆಳೆಗಾರರು ಕಾಫಿ ತೋಟಕ್ಕೆ ಹೋಗಿದ್ದಾಗ ಕಾಡಾನೆ ಏಕಾಏಕಿ ದಾಳಿ ನಡೆಸಿ ಕೊಂದು ಹಾಕಿತ್ತು.

ಕೊಡಗಿನಲ್ಲಿ ಕಾಡುಪ್ರಾಣಿಗಳ ಹಾವಳಿ ದಿನೇ ದಿನೆ ಹೆಚ್ಚಾಗುತ್ತಿದ್ದು, ಜನರು ಜೀವ ಕೈಯಲ್ಲಿ ಹಿಡಿದು ಓಡಾಡುವಂತಾಗಿದೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ