October 5, 2024

ಈ ಬಾರಿ ಕಾಂಗ್ರೇಸ್ ಪರವಾಗಿ ಜನರಲ್ಲಿ ಹಿಂದೆಂದಿಗಿಂತಲೂ ಹೆಚ್ಚಿನ ಒಲವು, ಅಭಿಮಾನ ವ್ಯಕ್ತವಾಗುತ್ತಿದೆ. ಕೇಂದ್ರದ ನರೇಂದ್ರ ಮೋದಿಯವರ ಸರ್ಕಾರದ ವೈಪಲ್ಯ ಜನರಿಗೆ ಅರಿವಾಗಿದೆ. ಬಿ.ಜೆ.ಪಿ. ಕೇವಲ ಧರ್ಮ ಮತ್ತು ಭಾವನಾತ್ಮಕ ವಿಚಾರಗಳನ್ನು ಮುಂದಿಟ್ಟುಕೊಂಡು ಜನರ ಮನಸ್ಸನ್ನು ಕೆರಳಿಸುವ ಕೆಲಸ ಮಾಡುತ್ತಿದ್ದಾರೆ. ಜನರ ನೈಜ ಸಮಸ್ಯೆಗಳ ಬಗ್ಗೆ ಪ್ರಧಾನಿಯವರು ಮಾತನಾಡುತ್ತಿಲ್ಲ ಬಿ.ಜೆ.ಪಿ.ಯವರ ಸುಳ್ಳು ಭರವಸೆಗಳಿಂದ ಜನ ಭ್ರಮನಿರಸರಾಗಿದ್ದಾರೆ ಎಂದು ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ಹೇಳಿದರು.

ಬುಧವಾರ ಮೂಡಿಗೆರೆ ತಾಲ್ಲೂಕಿನ ಗೌಡಹಳ್ಳಿ ಗ್ರಾಮದಲ್ಲಿ ನಡೆದ ಊರುಬಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಂಗ್ರೇಸ್ ಲೋಕಸಭಾ ಚುನಾವಣಾ ಪ್ರಚಾರ ಸಭೆಯಲ್ಲಿ ವಿವಿಧ ಪಕ್ಷಗಳ ಕಾರ್ಯಕರ್ತರನ್ನು  ಕಾಂಗ್ರೇಸ್ ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿದರು.

ಕೇಂದ್ರ ಸರ್ಕಾರ ಎಲ್ಲಾ ಕ್ಷೇತ್ರಗಳಲ್ಲಿಯೂ ವಿಫಲವಾಗಿದೆ. ದೇಶದ ಮೇಲಿನ ಸಾಲದ ಹೊರೆ ಹೆಚ್ಚಾಗಿದೆ. ರಾಜ್ಯದಲ್ಲಿ ಕಾಂಗ್ರೇಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ನೀಡಿದ ಎಲ್ಲಾ ಗ್ಯಾರಂಟಿ ಭರವಸೆಗಳನ್ನು ಅನುಷ್ಠಾನಗೊಳಿಸಿದೆ, ಜನಸಾಮಾನ್ಯರು ನೆಮ್ಮದಿಯಿಂದ ಜೀವನ ನಡೆಸಲು ಸರ್ಕಾರ ಎಲ್ಲಾ ರೀತಿಯ ಸಹಕಾರ ನೀಡುತ್ತಿದೆ. ಕಾಂಗ್ರೇಸ್ ಅಭ್ಯರ್ಥಿ ಲೋಕಸಭಾ ಸದಸ್ಯರಾದರೆ ಮೂಡಿಗೆರೆ ಕ್ಷೇತ್ರದ ಅಭಿವೃದ್ಧಿಗೆ ಇನ್ನಷ್ಟು ಬಲ ಬರುತ್ತದೆ.ಮೂಡಿಗೆರೆ ಕ್ಷೇತ್ರದಾದ್ಯಂತ ವಿವಿಧ ಪಕ್ಷಗಳ ಅನೇಕ ಮುಖಂಡರು ಮತ್ತು ಕಾರ್ಯಕರ್ತರು ಕಾಂಗ್ರೇಸ್ ಪಕ್ಷವನ್ನು ಸೇರ್ಪಡೆಯಾಗುತ್ತಿದ್ದಾರೆ. ಮತದಾರರು ಕಾಂಗ್ರೇಸ್ ಪಕ್ಷವನ್ನು ಬೆಂಬಲಿಸಬೇಕೆಂದು ನಯನಾ ಮನವಿ ಮಾಡಿದರು.

ಮಾಜಿ ಸಚಿವೆ ಶ್ರೀಮತಿ ಮೋಟಮ್ಮ ಮಾತನಾಡಿ ; ಬಿ.ಜೆ.ಪಿ. ಕೇಂದ್ರದಲ್ಲಿ ನೀಡಿದ್ದ ಯಾವ ಭರವಸೆಗಳನ್ನು ಈಡೆರಿಸಿಲ್ಲ. ಕೇವಲ ಪೊಳ್ಳು ಆಶ್ವಾಸನೆಗಳನ್ನು ನೀಡಿ ಜನರನ್ನು ದಿಕ್ಕು ತಪ್ಪಿಸುತ್ತಿದೆ. ಯುವಕರು ನಿರುದ್ಯೋಗದಿಂದ ತಮ್ಮ ಬದುಕು ಕಟ್ಟಿಕೊಳ್ಳಲು ಪರದಾಡುತ್ತಿದ್ದಾರೆ. ನರೇಂದ್ರ ಮೋದಿಯವರು ಕೇವಲ ಪ್ರಚೋದನಾಕಾರಿ ಹೇಳಿಕೆಗಳಿಂದ ಮತದಾರರನ್ನು ಮರುಳು ಮಾಡಲು ಹೊರಟ್ಟಿದ್ದಾರೆ. ಆದರೆ ಈ ಬಾರಿ ಮತದಾರ ಬಿ.ಜೆ.ಪಿ.ಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.

ಮಾಜಿ ಶಾಸಕ ಎಂ.ಪಿ. ಕುಮಾರಸ್ವಾಮಿ ಮಾತನಾಡಿ ; ಹತ್ತು ವರ್ಷಗಳ ಕಾಲ ಆಡಳಿತ ನಡೆಸಿ ಬಿ.ಜೆ.ಪಿ. ಜನಸಾಮಾನ್ಯರ ಬದುಕು ಬದಲಿಸುವ ಯಾವುದೇ ದೂರದೃಷ್ಟಿ ಯೋಜನೆಗಳನ್ನು ಜಾರಿಗೆ ತರಲಿಲ್ಲ. ನಮ್ಮ ದೇಶದ ಸುತ್ತ ಇರುವ ಶತೃಗಳ ಸಂಖ್ಯೆ ಹೆಚ್ಚಾಗಿದೆಯೇ ಹೊರತು ಸಂಬಂಧಗಳಲ್ಲಿ ಯಾವುದೇ ಸುಧಾರಣೆ ಆಗಿಲ್ಲ. ಚೀನಾ ದೇಶ ನಮ್ಮ ಗಡಿಯೊಳಗೆ ನುಸುಳಿ ಕೆಲವು ಗ್ರಾಮಗಳನ್ನು ವಶಕ್ಕೆ ಪಡೆದಿದೆ. ನರೇಂದ್ರ ಮೋದಿಯವರಿಗೆ ಚೀನಾವನ್ನು ಎದುರಿಸುವ ದೈರ್ಯ ಇಲ್ಲ. ಬರೀ ಬಾಯಿ ಮಾತಿನಲ್ಲೇ ಪೌರುಷ ತೋರುತ್ತಿದ್ದಾರೆ. ಯುವಕರು ಅವರ ಬಣ್ಣದ ಮಾತುಗಳಿಗೆ ಮರುಳಾಗುತ್ತಿದ್ದು, ಇದೀಗ ಕೆಲವರಿಗೆ ಜ್ಞಾನೋದಯವಾಗಿದೆ. ಈ ಬಾರಿ ಕಾಂಗ್ರೇಸ್ ಪಕ್ಷದ ಬಗ್ಗೆ ಹೆಚ್ಚಿನ ಬೆಂಬಲ ವ್ಯಕ್ತವಾಗುತ್ತಿದೆ ಎಂದರು.

 

ಇದೇ ಸಂದರ್ಭದಲ್ಲಿ ಊರುಬಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿ.ಜೆ.ಪಿ. ಮತ್ತು ಜೆ.ಡಿ.ಎಸ್ ಪಕ್ಷದ ಹಲವು ಕಾರ್ಯಕರ್ತರು ಕಾಂಗ್ರೇಸ್ ಪಕ್ಷಕ್ಕೆ ಸೇರ್ಪಡೆಯಾದರು.

ಪಕ್ಷಕ್ಕೆ ಸೇರ್ಪಡೆಯಾದ ವಿವಿಧ ಪಕ್ಷಗಳ ಕಾರ್ಯಕರ್ತರನ್ನು ಶಾಸಕಿ ನಯನ ಮೋಟಮ್ಮ, ಮಾಜಿ ಸಚಿವೆ ಶ್ರೀಮತಿ ಮೋಟಮ್ಮ, ಮಾಜಿ ಶಾಸಕ ಎಂ.ಪಿ. ಕುಮಾರಸ್ವಾಮಿ ಅವರು ಕಾಂಗ್ರೇಸ್ ಪಕ್ಷದ ಶಾಲು ಹೊದಿಸಿ ಪಕ್ಷಕ್ಕೆ ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಹೆಚ್.ಜಿ. ಸುರೇಂದ್ರ, ಗೋಣಿಬೀಡು ಹೋಬಳಿ ಕಾಂಗ್ರೇಸ್ ಅಧ್ಯಕ್ಷ ಎ.ಜಿ.ಸುಬ್ರಾಯಗೌಡ, ಡಿ.ಎಲ್. ಅಶೋಕ್ ಕುಮಾರ್, ನಿಶಾಂತ್ ಪಟೇಲ್, ಗ್ರಾ.ಪಂ. ಸದಸ್ಯ ಜಿ.ಎಸ್.ಅಭಿಷೇಕ್  ಸೇರಿದಂತೆ ಪಕ್ಷದ ಅನೇಕ ಮುಖಂಡರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ