October 5, 2024

ಹಾಸನ ಅಶ್ಲೀಲ ವಿಡಿಯೊ ಪ್ರಕರಣಕ್ಕೆ ಸಂಬಂಧಿಸಿದಂತೆ 24 ಗಂಟೆಯ ಒಳಗಾಗಿ ವಿಚಾರಣೆಗೆ ಹಾಜರಾಗುವಂತೆ ಎಸ್.ಐ.ಟಿ. ತನಿಖಾ ತಂಡ ಹೆಚ್.ಡಿ.ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ಅವರಿಗೆ ನೋಟೀಸ್ ಜಾರಿ ಮಾಡಿದೆ.

ಹಾಸನದಲ್ಲಿ ಅಶ್ಲೀಲ ವಿಡಿಯೋ ಇರುವ ಪೆನ್ ಡ್ರೈವ್ ಗಳ ಹಂಚಿಕೆ ಮತ್ತು ಈ ವಿಡಿಯೋದ ಹಿಂದೆ ಸಂಸದ ಪ್ರಜ್ವಲ್ ರೇವಣ್ಣ ಮತ್ತು ಹೆಚ್.ಡಿ. ರೇವಣ್ಣ ಅವರ ಪಾತ್ರ ಇರುವ ಹಿನ್ನಲೆಯಲ್ಲಿ ಹಾಗೂ ಮಹಿಳೆಯೊಬ್ಬರು ನೇರವಾಗಿ ಇವರಿಬ್ಬರ ಮೇಲೆ ದೂರು ನೀಡಿರುವ ಹಿನ್ನಲೆಯಲ್ಲಿ ಈ ಪ್ರಕರಣದ  ದೇಶಾದ್ಯಂತ ಸದ್ದು ಮಾಡುತ್ತಿದೆ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗಬೇಕು ಎಂಬ ಒತ್ತಾಯಗಳು ಕೇಳಿಬರುತ್ತಿವೆ.

ಈ ನಡುವೆ ಪ್ರಕರಣದ ತನಿಖೆಗಾಗಿ ರಾಜ್ಯ ಸರ್ಕಾರ ಎಸ್‌ಐಟಿ ರಚನೆ ಮಾಡಿತ್ತು. ಇದೀಗ 24 ಗಂಟೆಯೊಳಗೆ ವಿಚಾರಣೆಗೆ ಹಾಜರಾಗುವಂತೆ ಸಿಆರ್‌ಪಿಸಿ 41a ಅಡಿಯಲ್ಲಿ ಎಸ್‌ಐಟಿಯಿಂದ ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಮಾಜಿ ಸಚಿವ ಎಚ್. ಡಿ. ರೇವಣ್ಣಗೆ ನೋಟಿಸ್ ನೀಡಿದೆ.

ಎಸ್ಐಟಿ ಸದಸ್ಯ, ತನಿಖಾಧಿಕಾರಿ ಎಸ್‌ಪಿ ಸೀಮಾ‌ ಲಾಟ್ಕರ್ ಅವರ ಮುಂದೆ ತುರ್ತು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ. ಎಚ್‌.ಡಿ. ರೇವಣ್ಣ ನಿವಾಸಕ್ಕೆ ಎಸ್ಐಟಿ ತಂಡ ನೊಟೀಸ್ ತಲುಪಿಸಿದ್ದು, ಹೊಳೆನರಸೀಪುರದಲ್ಲಿ ದಾಖಲಾದ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿದೆ.

ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಪ್ರಜ್ವಲ್‌ ರೇವಣ್ಣ ಮತ್ತು ಎಚ್‌.ಡಿ.ರೇವಣ್ಣ ವಿರುದ್ಧ ಏ.28ರಂದು ಹೊಳೆನರಸೀಪುರ ಠಾಣೆಯಲ್ಲಿ ಮನೆಗೆಲಸದಾಕೆ ದೂರು ನೀಡಿದ್ದಳು. ಈ ಸಂಬಂಧ ವಿಚಾರಣೆಗಾಗಿ ಇದೀಗ ನೋಟಿಸ್‌ ನೀಡಲಾಗಿದೆ.

3 ದಿನದಲ್ಲಿ ವರದಿ ಕೊಡಲು ಡಿಜಿಗೆ ಪತ್ರ ರಾಷ್ಟ್ರೀಯ ಮಹಿಳಾ ಆಯೋಗ ಸೂಚನೆ

ಈ ನಡುವೆ ಹಾಸನ ಸಂಸದ   ಜೆಡಿಎಸ್‌ ಮುಖಂಡ  ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ   ಅವರ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ   ಸಂಬಂಧಪಟ್ಟಂತೆ ರಾಷ್ಟ್ರೀಯ ಮಹಿಳಾ ಆಯೋಗ ಮಧ್ಯ ಪ್ರವೇಶಿಸಿದ್ದು, ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂರು ದಿನದೊಳಗೆ ವರದಿ ನೀಡುವಂತೆ ಕರ್ನಾಟಕ ಪೊಲೀಸ್‌ ಮಹಾ ನಿರ್ದೇಶಕರಿಗೆ ಸೂಚನೆ ನೀಡಿದೆ.

ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗ ಮಹಿಳಾ ಆಯೋಗವು ಸ್ವಯಂಪ್ರೇರಿತವಾಗಿ ಕೇಸ್‌ ದಾಖಲು ಮಾಡಿಕೊಂಡಿದೆ. ಜತೆಗೆ ಡಿಜಿಗೆ ಪತ್ರ ಬರೆದು ಈ ಸಂಬಂಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ. ಇನ್ನು ಕೆಲವೇ ದಿನಗಳಲ್ಲಿ ಕೇಂದ್ರ ಮಹಿಳಾ ಆಯೋಗದ ಸದಸ್ಯರು ರಾಜ್ಯಕ್ಕೆ ಆಗಮಿಸಲಿದ್ದಾರೆ ಎನ್ನಲಾಗಿದೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ