October 5, 2024

ಅಮೇರಿಕಾದಲ್ಲಿ ಜೂನ್ 1 ರಿಂದ 29 ರವರೆಗೆ ನಡೆಯಲಿರುವ ಟಿ-20 ಕ್ರಿಕೆಟ್ ವಿಶ್ವಕಪ್ ಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. 20 ಜನ ಆಟಗಾರರ ತಂಡವನ್ನು ಪ್ರಕಟಿಸಿದ್ದು, ಭಾರತ ತಂಡವನ್ನು ರೋಹಿತ್​ ಶರ್ಮ ಮುನ್ನಡೆಸಲಿದ್ದಾರೆ. ಹಾರ್ದಿಕ್​ ಪಾಂಡ್ಯ ಉಪನಾಯನಾಗಿದ್ದಾರೆ. ಅಚ್ಚರಿ ಎಂದರೆ ಕನ್ನಡಿಗ ಕೆ.ಎಲ್​ ರಾಹುಲ್​ ಅವರಿಗೆ ಅವಕಾಶ ಸಿಕ್ಕಿಲ್ಲ.

ಭಾರತ ತಂಡ ಹೀಗಿದೆ : ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್​ ಕೀಪರ್​), ಸಂಜು ಸ್ಯಾಮ್ಸನ್ (ವಿಕೆಟ್​ ಕೀಪರ್​), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಅರ್ಶದೀಪ್​ ಸಿಂಗ್​, ಜಸ್​ಪ್ರೀತ್​ ಬುಮ್ರಾ, ಮೊಹಮ್ಮದ್​ ಸಿರಾಜ್. ಮೀಸಲು ಆಟಗಾರರು ಶುಭಮನ್ ಗಿಲ್, ರಿಂಕು ಸಿಂಗ್, ಖಲೀಲ್ ಅಹ್ಮದ್ ಮತ್ತು ಅವೇಶ್ ಖಾನ್

ಭಾರತ ತನ್ನ ಮೊದಲ ಪಂದ್ಯವನ್ನು ಜೂನ್‌ 5 ರಂದು ಐರ್ಲೆಂಡ್​ ವಿರುದ್ಧ ಆಡಲಿದೆ. ದ್ವಿತೀಯ ಪಂದ್ಯ ಜೂನ್‌ 9 ರಂದು ಪಾಕ್​ ವಿರುದ್ಧ ಆಡಲಿದ. ಜೂನ್ 12 ರಂದು ಅಮೇರಿಕಾ ಹಾಗೂ ಜೂನ್ 15 ರಂದು ಕೆನಡಾ ತಂಡವನ್ನು ಎದುರಿಸಲಿದೆ.

ಭಾರತ ತನ್ನ ಎಲ್ಲ ಲೀಗ್‌ ಪಂದ್ಯಗಳನ್ನು ಅಮೆರಿಕದಲ್ಲೇ ಆಡದೆ. ಇದರಲ್ಲಿ ಮೂರು ಪಂದ್ಯಗಳು ನ್ಯೂಯಾರ್ಕ್‌ ಮತ್ತು ಒಂದು ಪಂದ್ಯ ಫ್ಲೋರಿಡಾದಲ್ಲಿ ನಡೆಯಲಿದೆ. ಟೂರ್ನಿಯಲ್ಲಿ ಒಟ್ಟು 55 ಪಂದ್ಯಗಳು ನಡೆಯಲಿವೆ. ಜೂನ್ 1ರಿಂದ 18ರವರೆಗೆ ಗುಂಪು ಹಂತದಲ್ಲಿ 40 ಪಂದ್ಯಗಳು ನಡೆದರೆ, ಜೂನ್ 19 ರಿಂದ 24 ರವರೆಗೆ ಸೂಪರ್ 8 ಪಂದ್ಯಗಳು ನಡೆಯಲಿವೆ. ಜೂನ್​ 29ಕ್ಕೆ ಫೈನಲ್​ ಪಂದ್ಯ ನಡೆಯಲಿದೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ