October 5, 2024

ಬೆಳ್ತಂಗಡಿ ಕ್ಷೇತ್ರದ ಮಾಜಿ ಶಾಸಕ, ದಕ್ಷಿಣ ಕನ್ನಡ ಜಿಲ್ಲೆಯ ಪ್ರಭಾವಿ ರಾಜಕಾರಣಿಯಾಗಿದ್ದ  ಕೆ. ವಸಂತ ಬಂಗೇರ (79) ಇಂದು ನಿಧನರಾದರು.

ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ವಸಂತ ಬಂಗೇರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಇಂದು ಮಧ್ಯಾಹ್ನ ನಿಧನ ಹೊಂದಿದ್ದಾರೆ. ಗುರುವಾರ ಬೆಳಿಗ್ಗೆ ಬಂಗೇರ ಅವರ ಪಾರ್ಥಿವವನ್ನು ಶರೀರ ಬೆಳ್ತಂಗಡಿಗೆ ಕೊಂಡೊಯ್ಯುವ ಬಗ್ಗೆ ಮಾಹಿತಿ ಇದ್ದು, ಸಾರ್ವಜನಿಕರ ಅಂತಿಮ ದರ್ಶನದ ಬಳಿಕ ಅಂತ್ಯಕ್ರಿಯೆ ನಡೆಯಲಿದೆ.

1946 ರ ಜನವರಿ 15 ರಲ್ಲಿ ಬೆಳ್ತಂಗಡಿಯಲ್ಲಿ ಸುಬ್ಬ ಪೂಜಾರಿ-ದೇವಕಿ ದಂಪತಿಯ ಕುಟುಂಬದಲ್ಲಿ ವಸಂತ ಬಂಗೇರ ಜನಿಸಿದ್ದರು. ವಸಂತ ಬಂಗೇರ ಅವರು ಬಿ.ಜೆ.ಪಿ.ಯಿಂದ ತಮ್ಮ ರಾಜಕೀಯ ಜೀವನ ಆರಂಭಿಸಿ ನಂತರ ಜೆ.ಡಿ.ಎಸ್. ಆ ನಂತರ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದರು. ಅವರು ಬೆಳ್ತಂಗಡಿ ಕ್ಷೇತ್ರದಿಂದ 5 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು.

1983 ಮತ್ತು 1985 ರಲ್ಲಿ ಬಿ.ಜೆ.ಪಿ.ಯಿಂದ ಶಾಸಕರಾಗಿದ್ದರು. 1994 ರಲ್ಲಿ ಜೆ.ಡಿ.ಎಸ್. ನಿಂದ ಶಾಸಕರಾಗಿದ್ದರು. 2008 ಮತ್ತು 2013 ರಲ್ಲಿ ಕಾಂಗ್ರೇಸ್ ಅಭ್ಯರ್ಥಿಯಾಗಿ ಬೆಳ್ತಂಗಡಿ ಕ್ಷೇತ್ರದ ಶಾಸಕರಾಗಿದ್ದರು.

1983 ರಲ್ಲಿ ಮೊದಲ ಬಾರಿಗೆ ಬಿ.ಎಸ್. ಯಡಿಯೂರಪ್ಪನವರೊಂದಿಗೆ ವಸಂತ ಬಂಗೇರ ಬಿ.ಜೆ.ಪಿ. ಶಾಸಕರಾಗಿ ವಿಧಾನಸಭೆ ಮೆಟ್ಟಿಲೇರಿದರು. ಯಡಿಯೂರಪ್ಪನವರು ಏಕಪಕ್ಷ ನಿಷ್ಟೆಯಿಂದ ಮುಖ್ಯಮಂತ್ರಿ ಸ್ಥಾನದವರೆಗೆ ಏರಿದರು. ಆದರೆ ವಸಂತ ಬಂಗೇರ ನಿರಂತರ ಪಕ್ಷ ಬದಲಾವಣೆಯಿಂದಾಗಿ ಕೊನೆಯವರೆಗೂ ಶಾಸಕರಾಗಿಯೇ ಉಳಿದರು.

ವಸಂಗ ಬಂಗೇರ ಅವರ ರಾಜಕೀಯ ಬದುಕಿನುದ್ದಕ್ಕೂ ಬಹುತೇಕ ಇವರ ಸಹೋದರ ಪ್ರಭಾಕರ ಬಂಗೇರ ಎದುರಾಳಿಯಾಗಿದ್ದರು.

2013ರಲ್ಲಿ ಐದನೇ ಬಾರಿಗೆ ವಿಧಾನಸಭೆ ಪ್ರವೇಶಿಸಿದ್ದಂತ ಅವರು ಸಿದ್ದರಾಮಯ್ಯ ಸರ್ಕಾರದಲ್ಲಿ ಸಣ್ಣ ಕೈಗಾರಿಕಾ ನಿಗಮದ ಅಧ್ಯಕ್ಷರಾಗಿ ಕೆಲಸ ಮಾಡಿದ್ದರು. ಬೆಳ್ತಂಗಡಿ ಕ್ಷೇತ್ರದಲ್ಲಿ ಎಂಟು ಬಾರಿ ಸ್ಪರ್ಧಿಸಿ ಐದು ಬಾರಿ ಶಾಸಕರಾಗಿ, ಸರ್ಕಾರದ ಮುಖ್ಯ ಸಚೇತಕರಾಗಿ ಸೇವೆಸಲ್ಲಿಸಿದ್ದ ಬಂಗೇರರು, ಶ್ರೀ ಗುರುನಾರಾಯಣ ಸೇವಾ ಸಂಘದ ಗೌರವಾಧ್ಯಕ್ಷರಾಗಿ, ಗುರುದೇವ ಕಾಲೇಜಿನ ಅಧ್ಯಕ್ಷರಾಗಿ, ಗುರುದೇವ ಸಹಕಾರಿ ಸಂಘದ ಸ್ಥಾಪಕರಲ್ಲಿ ಒಬ್ಬರಾಗಿದ್ದಾರೆ.

ವಸಂತ ಬಂಗೇರ ದಕ್ಷಿಣ ಕನ್ನಡ ಜಿಲ್ಲೆಯ ಪ್ರಭಾವಿ ರಾಜಕೀಯ ನಾಯಕರಾಗಿದ್ದರು. ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಪ್ತರಾಗಿದ್ದರು.

ವಸಂತ ಬಂಗೇರ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಟ್ವಿಟರ್ ನಲ್ಲಿ ಸಂತಾಪ ಸಂದೇಶ ಪ್ರಕಟಿಸಿದ್ದು, ಬಂಗೇರ ಅವರನ್ನು ನೇರ, ನಿಷ್ಠುರ ನಡೆ-ನುಡಿಯ ಆಂತರ್ಯದಲ್ಲಿ ಅಪಾರವಾದ ಜನಪರ ಕಾಳಜಿ ಮತ್ತು ಸ್ನೇಹನಿಷ್ಠೆಯನ್ನು ಹೊಂದಿದ್ದ ದೊಡ್ಡ ಮನುಷ್ಯ ಎಂದು ಬಣ್ಣಿಸಿದ್ದಾರೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ