October 5, 2024

ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಮುಂಗಾರು ಪೂರ್ವ ಮಳೆ ಅಬ್ಬರಿಸುತ್ತಿದ್ದು, ಬಿರುಗಾಳಿ ಮಳೆಗೆ ಮರಬಿದ್ದು ಓರ್ವ ಮಹಿಳೆ ಪ್ರಾಣ ಕಳೆದುಕೊಂಡಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಮಹಿಳೆ ಮೇಲೆ ಮರ ಬಿದ್ದು ಸಾವು ಕೊಪ್ಪ ಮೂಲದ ಸವಿತಾ (48) ಎಂಬುವವರು ಮೃತ ಪಟ್ಟಿರುತ್ತಾರೆ. ಎನ್.ಆರ್.ಪುರ ತಾಲೂಕಿನ ಕಟ್ಟಿನಮನೆ ಗ್ರಾಮದಲ್ಲಿ ಇಂದು ಸಂಜೆ ಈ ದುರ್ಘಟನೆ ನಡೆದಿದೆ.

ಎನ್.ಆರ್.ಪುರ ತಾಲ್ಲೂಕಿನ ಕಾನೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕಟ್ಟಿನಮನೆ ಬಳಿ ಬೃಹತ್ ಮರವೊಂದು ರಸ್ತೆಗೆ ಉರುಳಿ ಬಿದ್ದಿದ್ದು, ಏಕಕಾಲದಲ್ಲಿ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ  ಮಹಿಳೆ ಮೇಲೆ ಮತ್ತು ರಸ್ತೆಯಲ್ಲಿ ಹಾದುಹೋಗುತ್ತಿದ್ದ ಕಾರೊಂದರ ಮೇಲೆ ಮರ ಬಿದ್ದಿದೆ.

ಭಾರೀ ಗಾಳಿ-ಮಳೆಗೆ ಮಹಿಳೆ  ಮತ್ತು ಕಾರಿನ ಮೇಲೆ ಏಕಕಾಲಕ್ಕೆ ಬಿದ್ದ ಮರ, ಮರಬಿದ್ದ ರಭಸಕ್ಕೆ ಮಹಿಳೆ ತೀವ್ರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿರುತ್ತಾರೆ. ಕಾರಿನ ಮೇಲೆ ಮರ ಬಿದ್ದು ಕಾರಿನಲ್ಲಿದ್ದ ಮೂವರಿಗೂ ಗಂಭೀರ ಗಾಯಗಳಾಗಿವೆ. ಕಾರಿನ ಮೇಲೆ ಬೃಹತ್ ಮರ ಬಿದ್ದು ಕಾರು ಸಂಪೂರ್ಣ ಜಖಂಗೊಂಡಿದೆ.

ಮೃತರನ್ನ ಕೊಪ್ಪ ತಾಲೂಕಿನ ಮೇಲಿನಪೇಟೆ ಮೂಲದ 48 ವರ್ಷದ ಸವಿತಾ ಎಂದು ಗುರುತಿಸಲಾಗಿದೆ. ಮೃತ ಸವಿತಾ ಅವರ ತೋಟ ಕಟ್ಟಿನಮನೆ ಬಳಿ ಇತ್ತು. ತೋಟಕ್ಕೆ ಬಂದಿದ್ದ ಮಹಿಳೆ ರಸ್ತೆ ಬದಿ ನಡೆದುಕೊಂಡು ಹೋಗುವಾಗ ಮರಬಿದ್ದು ಸ್ಥಳದಲ್ಲೇ ಮೃತಪಟ್ಟಿರುತ್ತಾರೆ.

ಸ್ಥಳಕ್ಕೆ ಮಾಜಿ ಸಚಿವ ಡಿ.ಎನ್. ಜೀವರಾಜ್ ಭೇಟಿ ನೀಡಿದ್ದು, ಮೃತ ಮಹಿಳೆಯ ಕುಟುಂಬಕ್ಕೆ ಹಾಗೂ ಗಾಯಾಳುಗಳಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಗಾಯಾಳುಗಳು ಬಾಳೆಹೊನ್ನೂರು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಎನ್.ಆರ್.ಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ