October 5, 2024

ನೈರುತ್ಯ ಪದವೀಧರ ಕ್ಷೇತ್ರಕ್ಕೆ ಜೂನ್ 3 ರಂದು ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್ ಪಕ್ಷ ಪಕ್ಷಾಂತರಿಗಳಿಗೆ ಟಿಕೆಟ್ ನೀಡಿರುವುದನ್ನು ವಿರೋಧಿಸಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಲಾಗಿದೆ ಎಂದು ನ್ಯಾಯವಾದಿ ಎಸ್.ಪಿ ದಿನೇಶ್ ತಿಳಿಸಿದರು.

ಅವರು ಚಿಕ್ಕಮಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿ ಜಿಲ್ಲೆಯ 5 ಶಾಸಕರು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, ಮಾಜಿ ವಿಧಾನ ಪರಿಷತ್ ಸದಸ್ಯರು ಸೇರಿದಂತೆ ಎಲ್ಲಾ ನಾಯಕರು ತಮಗೆ ಟಿಕೆಟ್ ನೀಡುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರನ್ನು ಮನವಿ ಮಾಡಿದ್ದರು. ಆದರೆ ಟಿಕೆಟ್ ತಿರಸ್ಕರಿಸಿರುವುದರಿಂದ ಬೇಸತ್ತು ಸ್ವತಂತ್ರ ಸ್ಪರ್ಧೆ ಮಾಡಲು ನಿರ್ಧರಿಸಿದ್ದೇನೆಂದು ತಿಳಿಸಿದರು.

ಈಗಾಗಲೇ ಕಳೆದ 10 ತಿಂಗಳುಗಳಿಂದ ನೈರುತ್ಯ ಪದವೀಧರ ಕ್ಷೇತ್ರದ ವ್ಯಾಪ್ತಿಗೆ ಬರುವ ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಕೊಡಗು ಹಾಗೂ ದಾವಣಗೆರೆ ಜಿಲ್ಲೆಯ ಹೊನ್ನಾಳಿ, ನ್ಯಾಮತಿ, ಚನ್ನಗಿರಿ ತಾಲ್ಲೂಕುಗಳಿಗೆ ಭೇಟಿ ನೀಡಿ ಪದವೀಧರ ಮತದಾರರ ಮನವೊಲಿಸಿದ್ದು ಅಪಾರವಾದ ಬೆಂಬಲ ವ್ಯಕ್ತವಾಗಿರುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು.

ಈ ಕ್ಷೇತ್ರದ ವ್ಯಾಪ್ತಿಯಲ್ಲಿ ಒಟ್ಟು 85 ಸಾವಿರ ಮತದಾರರಿದ್ದು ಜೊತೆಗೆ ಚಿಕ್ಕಮಗಳೂರು ಜಿಲ್ಲೆಯ 3 ಸಾವಿರ ಅತಿಥಿ ಉಪನ್ಯಾಸಕರ ಮತಗಳಿವೆ. 2012 ಮತ್ತು 2018 ರಲ್ಲಿ ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಅಲ್ಪ ಮತಗಳ ಅಂತರದಲ್ಲಿ ಪರಾಭವಗೊಂಡಿದ್ದು ಈ ಭಾರಿ ಅಪಾರ ಪ್ರಮಾಣದ ಬೆಂಬಲ ವ್ಯಕ್ತವಾಗುತ್ತಿರುವುದರಿಂದ ನನ್ನ ಗೆಲುವು ನಿಶ್ಚಿತ ಎಂದರು.

ಈ ಬಾರಿಯ ಚುನಾವಣೆಯಲ್ಲಿ ನಿಮ್ಮ ಸಮಸ್ಯೆಗಳಿಗೆ ಸ್ಪಂದಿಸಿ ಹೋರಾಡುವ ಭರವಸೆಯೊಂದಿಗೆ ಸ್ಪರ್ಧೆ ಮಾಡುತ್ತಿದ್ದು ತಮ್ಮ ಅಮೂಲ್ಯವಾದ ಮತವನ್ನು ನನಗೆ ನೀಡುವುದರ ಮುಲಕ ವಿಧಾನ ಪರಿಷತ್ತಿಗೆ ಆಯ್ಕೆ ಮಾಡಿ ತಮ್ಮಗಳ ಸೇವೆಗೆ ಅವಕಾಶ ಮಾಡಿಕೊಡಬೇಕೆಂದು ಮನವಿ ಮಾಡಿದರು.ಪತ್ರಿಕಾಗೋಷ್ಠಿಯಲ್ಲಿ ಡಾ. ಚಂದ್ರಶೇಖರ್, ಡಾ. ಉಮೇಶ್, ಪೂರ್ಣೇಶ್ ಇದ್ದರು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ