October 5, 2024

ಮನೆಯೊಳಗೆ ಅಡುಗೆ ಅನಿಲ ಸೋರಿಕೆಯಾದ ಪರಿಣಾಮ ಒಂದೇ ಕುಟುಂಬದ ನಾಲ್ವರು ಪ್ರಾಣ ಕಳೆದುಕೊಂಡಿರುವ ಹೃದಯವಿದ್ರಾವಕ ಘಟನೆ ಮೈಸೂರಿನಲ್ಲಿ ನಡೆದಿದೆ.

ಕಿಟಕಿ ಬಾಗಿಲುಗಳು ಭದ್ರವಾಗಿ ಮುಚ್ಚಿದ್ದರಿಂದ, ಅಡುಗೆ ಅನಿಲ (LPG) ಹೊರಹೋಗಲು ಯಾವುದೇ ಕಿಂಡಿಯಿಲ್ಲದೆ ಬಂದ್‌ ಆಗಿದ್ದು, ನಾಲ್ವರ ಜೀವ ತೆಗೆದಿದೆ.

ಮೃತಪಟ್ಟ ನಾಲ್ವರು ಚಿಕ್ಕಮಗಳೂರು ಜಿಲ್ಲೆಯ ಸಕ್ಕರಾಯಪಟ್ಟಣ ಮೂಲದವರು ಎಂದು ತಿಳಿದುಬಂದಿದೆ. ಕುಮಾರಸ್ವಾಮಿ (45) ಅವರ ಪತ್ನಿ ಮಂಜುಳಾ (39), ಮಕ್ಕಳಾದ ಅರ್ಚನಾ (19) ಸ್ವಾತಿ (17) ಸಾವನ್ನಪ್ಪಿದ್ದಾರೆ.

ಸೋಮವಾರ ಕಡೂರಿನಲ್ಲಿ ಸಂಬಂಧಿಕರ ಮದುವೆ ಮುಗಿಸಿ ವಾಪಸ್ ಮನೆಗೆ ಬಂದಿದ್ದರು ಎನ್ನಲಾಗಿದೆ. ಸೋಮವಾರ ರಾತ್ರಿ ಮನೆಯಲ್ಲಿ ಮಲಗಿದ್ದರು. ಬುಧವಾರ ಬೆಳಗಿನ ಜಾವ ಆದರೂ ಎದ್ದಿರಲಿಲ್ಲ. ಅನುಮಾನಗೊಂಡ ಸ್ಥಳೀಯರು ಪರಿಶೀಲಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ಮೃತಪಟ್ಟ ಕುಮಾರಸ್ವಾಮಿ ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಸಖರಾಯಪಟ್ಟಣ ಮೂಲದವರು. ಅವರು ಮೈಸೂರಿನ ಎರಗನಹಳ್ಳಿ ಗ್ರಾಮದಲ್ಲಿ ಕಳೆದ ಮೂವತ್ತು ವರ್ಷಗಳಿಂದ ವಾಸವಾಗಿದ್ದರು. 10×30 ಅಡಿ ಅಳತೆಯ ಪುಟ್ಟ ಮನೆಯಲ್ಲಿ ನಾಲ್ವರ ಕುಟುಂಬ ವಾಸವಿತ್ತು. ಮನೆಯ ಹಿಂಭಾಗ ಹಾಗೂ ಮುಂಭಾಗ ಮಾತ್ರ ಕಿಟಕಿ ವ್ಯವಸ್ಥೆಯಿದೆ. ಮನೆಯ ಯಜಮಾನ ಕುಮಾರಸ್ವಾಮಿ ಇಸ್ತ್ರೀ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ಬಟ್ಟೆ ಇಸ್ತ್ರಿ ಪೆಟ್ಟಿಗೆಗೆ ಗ್ಯಾಸ್ ಬಳಸುತ್ತಿದ್ದರು ಎನ್ನಲಾಗಿದೆ. ಇದಕ್ಕಾಗಿ ಹೆಚ್ಚುವರಿ ಗ್ಯಾಸ್‌ ಸಿಲಿಂಡರ್‌ ಮನೆಯಲ್ಲಿ ಇಟ್ಟುಕೊಂಡಿದ್ದರು. ಇದರಿಂದಲೇ ಅನಿಲ ಸೋರಿಕೆಯಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಸೋಮವಾರ ರಾತ್ರಿ ಮನೆಗೆ ಬಂದವರು ಎರಡು ಕಿಟಕಿ ಬಂದ್ ಮಾಡಿಕೊಂಡು ಮಲಗಿದ್ದರು. ರೂಂನಲ್ಲಿ ಗಂಡ ಹೆಂಡತಿ, ಹಾಲ್‌ನಲ್ಲಿ ಮಕ್ಕಳಿಬ್ಬರು ಮಲಗಿದ್ದರು. ಈ ವೇಳೆ ಸೋರಿಕೆಯಾದ ಅನಿಲ ಸೇವಿಸಿ ಎಲ್ಲರೂ ಮೃತಪಟ್ಟಿದ್ದಾರೆ. ಅವರಲ್ಲಿ ಒಬ್ಬ ಮಗಳಿಂದ ಬಾಗಿಲು ತೆಗೆಯುವ ವಿಫಲ ಯತ್ನ ನಡೆಸಿದ್ದಾಳೆ. ಎಲ್ಲರ ಕಿವಿ ಮತ್ತು ಮೂಗು ಬಾಯಲ್ಲಿ ರಕ್ತ ಸೋರಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.

” ಮೊಬೈಲ್‌ ಕಾಲ್‌ ರಿಸೀವ್‌ ಮಾಡದ್ದರಿಂದ ಅನುಮಾನಪಟ್ಟ ಸಂಬಂಧಿಕರು ಸ್ಥಳೀಯರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಿಯರು ಪರಿಶೀಲಿಸಿ ನಮಗೆ ಮಾಹಿತಿ ನೀಡಿದರು. ನಾವು ಬಂದಾಗ ಗ್ಯಾಸ್ ವಾಸನೆ ಬರುತ್ತಿತ್ತು. ಮನೆಯ ಹಿಂದಿನ ಕಿಟಕಿ ತೆರೆದು ನೋಡಿದಾಗಲೂ ಗ್ಯಾಸ್  ಸ್ಮೆಲ್ ಬರ್ತಿತ್ತು. ಫೈರ್ ಡಿಪಾರ್ಟ್ಮೆಂಟ್, ಎಫ್ಎಸ್ಐಲ್ ಬಂದು ಡೋರ್ ಒಪನ್ ಮಾಡಿದೆವು. ಮನೆಯಲ್ಲಿ ಮೂರು ಸಿಲಿಂಡರ್ ಇದೆ. ಗ್ಯಾಸ್‌ ಬಳಸಿ ಐರನ್ ಮಾಡ್ತಿದ್ದರು. ಮೇಲ್ನೋಟಕ್ಕೆ ಒಂದು ಸಿಲಿಂಡರ್ ಮಾತ್ರ ಲೀಕ್ ಆಗಿದೆ. ಉಳಿದ ಎರಡು ಸಿಲಿಂಡರ್ ಖಾಲಿ ಇತ್ತು” ಎಂದು ಮೈಸೂರು ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಹೇಳಿದ್ದಾರೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ