ಮೂಡಿಗೆರೆ ಪಟ್ಟಣ ಪಂಚಾಯತಿ ಮಾಜಿ ಉಪಾಧ್ಯಕ್ಷ ಇಲಿಯಾಸ್ (50 ವರ್ಷ) ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.
ಸೋಮವಾರ ರಾತ್ರಿ ಇಲಿಯಾಸ್ ಹಠಾತ್ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.
ಮೂಡಿಗೆರೆ ಪಟ್ಟಣ ಪಂಚಾಯತಿ ಉಪಾಧ್ಯಕ್ಷರಾಗಿ ಒಂದು ಅವಧಿಗೆ ಸೇವೆ ಸಲ್ಲಿಸಿದ್ದ ಇಲಿಯಾಸ್ ಮೂಡಿಗೆರೆ ಪಟ್ಟಣದಲ್ಲಿ ಮೀನು ವ್ಯಾಪಾರ ನಡೆಸುತ್ತಿದ್ದರು.
ಇಲಿಯಾಸ್ ನಿಧನಕ್ಕೆ ಮೂಡಿಗೆರೆ ಪಟ್ಟಣ ಪಂಚಾಯತಿ ಸದಸ್ಯರುಗಳು ಸೇರಿದಂತೆ ವಿವಿಧ ಸಂಘಸಂಸ್ಥೆಗಳವರು ತಮ್ಮ ಸಂತಾಪ ವ್ಯಕ್ತಪಡಿಸಿದ್ದಾರೆ