October 5, 2024

ಭವ್ಯ ಭಾರತದ ಬೆಳವಣಿಗೆಯಲ್ಲಿ ಶಿಕ್ಷಿತರ ಪಾತ್ರ ಪ್ರಮುಖವಾಗಿದ್ದು ವಿಕಸಿತ ಭಾರತವನ್ನು ಕಟ್ಟುವಲ್ಲಿ ಮಹತ್ವದಾಗಿದ್ದು ಅಂತಹ ಪದವಿಧರರು ಮತ್ತು ಶಿಕ್ಷಕರು ದೇಶದ ಒಳಿತಿಗಾಗಿ ಬಿಜೆಪಿ ಕಡೆಗೆ ಒಲವು ತೋರುತ್ತಿದ್ದು, ಮುಂಬರುವ ವಿಧಾನಪರಿಷತ್ ಚುನಾವಣೆಯಲ್ಲಿ ರಾಜ್ಯದ ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿಗಳ ಗೆಲುವು ನಿಶ್ಚಿತ ಎಂದು ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭರವಸೆ ವ್ಯಕ್ತಪಡಿಸಿದ್ದಾರೆ.

ಅವರು ಭಾನುವಾರ ಮೂಡಿಗೆರೆ ಬಿ.ಜೆ.ಪಿ. ಕಛೇರಿಯಲ್ಲಿ ವಿಧಾನಪರಿಷತ್ ಚುನಾವಣೆ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ಪ್ರಧಾನಿ ನರೇಂದ್ರ ಮೋದಿಯವರು ವಿಶ್ವ ನಾಯಕನಾಗಿ ಗುರುತಿಸಿಕೊಂಡು ದೇಶದ ಏಳಿಗೆಗೆ ತಮ್ಮನ್ನು ಸಮರ್ಪಿಸಿಕೊಂಡಿದ್ದಾರೆ. ಬಿಜೆಪಿಯನ್ನು ಬೆಂಬಲಿಸುವ ಮೂಲಕ ಮೋದಿಯವರಿಗೆ ಮತ್ತಷ್ಟು ಶಕ್ತಿ ತುಂಬಬೇಕು ಎಂದು ಅವರು ಶಿಕ್ಷಕರು ಮತ್ತು ಪದವಿಧರರಿಗೆ ಕರೆ ನೀಡಿದರು.

ಕೇವಲ ವಿಧಾನ ಪರಿಷತ್ ಗೆಲುವು ಮಾತ್ರ ನಮ್ಮ ಗುರಿಯಾಗಿರಬಾರದು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ  ರಾಜ್ಯದ ಎಲ್ಲಾ ಕ್ಷೇತ್ರಗಳು ನಮ್ಮ ಶಾಸಕರು ಆಯ್ಕೆಯಾಗುವಂತಹ ವಾತಾವರಣ  ಸೃಷ್ಟಿಯಾಗಬೇಕು ಎಂಬುದು ನಮ್ಮ ಹೋರಾಟದ ಭಾಗವಾಗಿದ್ದು, ಈ ಕಾರಣದಿಂದ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ನಿರಂತರ ಸಂಘಟನೆಯನ್ನು ಕೈಗೊಳ್ಳಲು ನನ್ನ ಪ್ರೋತ್ಸಾಹ ಎಂದಿಗೂ ಇದ್ದು ಕಾರ್ಯಕರ್ತರು  ಈ ಪ್ರಯತ್ನಕ್ಕೆ ಕೈಜೋಡಿಸಿ ಮತ್ತು ಈ ಮೂಲಕ ದೇಶ ಮತ್ತು ವಿಶ್ವಕ್ಕೆ ಭಾಜಪದ ಶಕ್ತಿಯನ್ನು ಮನವರಿಕೆ ಮಾಡಿ ದೇಶ ಗೆಲ್ಲಿಸುವ ಕೆಲಸ ಮಾಡೋಣ ಎಂದರು.

ಸಭೆಯಲ್ಲಿ ವಿಧಾನಪರಿಷತ್ ಉಪಸಭಾಪತಿ ಎಂ ಕೆ ಪ್ರಾಣೇಶ್, ಪದವಿಧರ ಕ್ಷೇತ್ರದ ಬಿ.ಜೆ.ಪಿ. ಅಭ್ಯರ್ಥಿ ಡಾ. ಧನಂಜಯ ಸರ್ಜಿ, ಶಿಕ್ಷಕರ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಎಸ್.ಎಲ್. ಬೋಜೇಗೌಡ, ಬಿ.ಜೆ.ಪಿ. ರಾಜ್ಯ ಪ್ರಧಾನ ಕಾರ್ಯದರ್ಶಿ ಶಾಸಕ ಸುನಿಲ್ ಕುಮಾರ್, ಲೋಕಸಭಾ ಅಭ್ಯರ್ಥಿಗಳಾದ ಕೋಟ ಶ್ರೀನಿವಾಸ್ ಪೂಜಾರಿ, ಕಾಫಿ ಮಂಡಳಿ ಅಧ್ಯಕ್ಷ ದಿನೇಶ್ ದೇವರುಂದ, ವಿಧಾನ ಪರಿಷತ್ ಸದಸ್ಯರಾದ ಡಿ. ಎಸ್. ಅರುಣ್,  ಶಾಸಕರಾದ ಹರೀಶ್ ಪೂಂಜ, ಜಿಲ್ಲಾಧ್ಯಕ್ಷ ದೇವರಾಜ್ ಶೆಟ್ಟಿ,  ಮಂಡಲ ಅಧ್ಯಕ್ಷ ಗಜೇಂದ್ರ ಕೊಟ್ಟಿಗೆಹಾರ, ದೀಪಕ್ ದೊಡ್ಡಯ್ಯ, ಹಳಸೆ ಶಿವಣ್ಣ,  ಕಲ್ಮುರುಡಪ್ಪ, ಚೈತ್ರಾ, ಎಂ.ಆರ್. ಜಗದೀಶ್, ಬಿ.ಎನ್. ಜಯಂತ್, ಜೆ.ಎಸ್. ರಘು, ಕೆ ಸಿ ರತನ್, ನರೇಂದ್ರ,  ಪುಣ್ಯಪಾಲ್ ಮತ್ತಿತರರು ಇದ್ದರು

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ