October 5, 2024

ತಂಬಾಕಿನಂತಹ ಮಾದಕ ವಸ್ತುಗಳ ಸೇವನೆಯಿಂದ ಸಮಾಜದಲ್ಲಿ ಬಹಳಷ್ಟು ಸಮಸ್ಯೆಗಳು ಸೃಷ್ಟಿಯಾಗುತ್ತಿವೆ. ಇಂದಿನ ಯುವಜನತೆ ಹೆಚ್ಚಾಗಿ ತಂಬಾಕು ಸೇವನೆಗೆ ದಾಸರಾಗುತ್ತಿದ್ದಾರೆ. ತಂಬಾಕು ಸೇವನೆ ಮಾರಕ ಕಾಯಿಲೆಗಳಿಗೆ ಕಾರಣವಾಗುತ್ತದೆ. ಈ ಮೂಲಕ ಮನುಷ್ಯನ ವೈಯುಕ್ತಿಕ, ಕೌಟುಂಬಿಕ ಮತ್ತು ಸಾಮಾಜಿಕ ಸ್ವಾಸ್ಥ್ಯ ಹಾಳಾಗುತ್ತಿದೆ. ತಂಬಾಕಿನಿಂದ ದೂರವಿದ್ದರೆ ಆರೋಗ್ಯಪೂರ್ಣ, ಸುಂದರವಾದ ಬದುಕು ನಡೆಸಬಹುದು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಡಿಗೆರೆ ತಾಲ್ಲೂಕು ಯೋಜನಾಧಿಕಾರಿ ಶಿವಾನಂದ ಹೇಳಿದರು.

ಇವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ರಿ ಮೂಡಿಗೆರೆ ಬಣಕಲ್ ವಲಯದ ತ್ರಿಪುರ ಕಾರ್ಯಕ್ಷೇತ್ರದಲ್ಲಿ ರಾಷ್ಟ್ರೀಯ ತಂಬಾಕು ವಿರೋಧಿ ದಿನಾಚರಣೆ ಪ್ರಯುಕ್ತ ಹಮ್ಮಿಕೊಂಡಿದ್ದು ಈ ಕಾರ್ಯಕ್ರಮದಲ್ಲಿ    ಪ್ರಾಸ್ತಾವಿಕವಾಗಿ ಮಾತನಾಡಿ ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ನೀಡಿದರು

ಕಾರ್ಯಕ್ರಮದಲ್ಲಿ ಸಮೃದ್ಧಿ ವ್ಯವಸಾಯ ಬ್ಯಾಂಕ್ ನಿರ್ದೇಶಕರು ಜನಜಾಗೃತಿ ವೇದಿಕೆ ಸದಸ್ಯರಾದ ಸುರೇಶ ಶೆಟ್ಟಿ ರವರು  ಮಾತನಾಡಿ ಮನೆಯ ಮಕ್ಕಳು ಮತ್ತು ಗಂಡ ಯಾರು ಕೂಡ ದುಶ್ಚಟಗಳಿಗೆ ಬಲಿಯಾಗದಂತೆ ನೋಡಿಕೊಳ್ಳುವುದು ಮಹಿಳೆಯರ ಆದ್ಯ ಕರ್ತವ್ಯ, ಮನೆಯಲ್ಲಿ ಶಾಂತಿ ನೆಮ್ಮದಿಯಿಂದ ಇರಬೇಕಾದರೆ ಮಾದಕ ವಸ್ತುಗಳಿಂದ ದೂರವಿರಬೇಕು ಎಂದು ತಿಳಿಸಿದರು,

ಕಾರ್ಯಕ್ರಮದಲ್ಲಿ ವಲಯದ ಮೇಲ್ವಿಚಾರಕರಾದ ಸಂದೀಪ್, ಜ್ಞಾನ ವಿಕಾಸ ಸಮನ್ವಯಾಧಿಕಾರಿ ಭಾರತಿ, ಒಕ್ಕೂಟದ ಪದಾಧಿಕಾರಿ ಗೋಪಿ, ಸೇವಾ ಪ್ರತಿನಿಧಿ ಉಷಾ ಹಾಗೂ ಪದ್ಮಾವತಿ ಜ್ಞಾನ ವಿಕಾಸ ಕೇಂದ್ರದ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ