October 5, 2024

ಕರ್ನಾಟಕ ವಿಧಾನಸಭೆಯಿಂದ ವಿಧಾನಪರಿಷತ್​ ಗೆ ನಡೆಯಲಿರುವ ಚುನಾವಣೆಗೆ ನಾಪಮತ್ರ ಸಲ್ಲಿಸಲು ನಾಳೆ ಕೊನೆದಿನವಾಗಿದ್ದು, ನಾಮಪತ್ರ ಸಲ್ಲಿಸಲು ಕೊನೆ ದಿನಕ್ಕೆ ಒಂದು ದಿನ ಬಾಕಿ ಇರುವಾಗಲೇ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಬಿಜೆಪಿಯಿಂದ ಸ್ಪರ್ಧೆಗೆ ಮಾಜಿ ಸಚಿವ ಸಿ.ಟಿ ರವಿ, ಎನ್. ರವಿಕುಮಾರ್ ಮತ್ತು ಎಂ.ಜಿ ಮೂಳೆ ಅವರಿಗೆ ಅವಕಾಶ ಸಿಕ್ಕಿದೆ. ಒಟ್ಟು 11 ಕ್ಷೇತ್ರಗಳ ಪೈಕಿ ಬಿಜೆಪಿ ಸಂಖ್ಯಾಬಲದ ಆಧಾರದ ಮೇಲೆ ಮೂರು ಸ್ಥಾನಗಳಲ್ಲಿ ಮಾತ್ರ ಗೆಲ್ಲಲು ಸಾಧ್ಯವಿದೆ. ಹೀಗಾಗಿ ಮೂರು ಅಭ್ಯರ್ಥಿಗಳನ್ನು ಘೋಷಿಸಿದ್ದು, ಹಾಲಿ ಎಂ.ಎಲ್.ಸಿ. ಎನ್​ ರವಿ ಕುಮಾರ್ ಅವರಿಗೆ ಮತ್ತೊಮ್ಮೆ ಅವಕಾಶ ನೀಡಲಾಗಿದೆ.

ವಿಧಾನಸಭೆ ಚುನಾವಣೆಯಲ್ಲಿ ಸೋಲುಕಂಡಿರುವ ಸಿಟಿ ರವಿ ಒಂದು ರೀತಿಯಲ್ಲಿ ರಾಜಕೀಯ ಅಜ್ಞಾತವಾಸ ಅನುಭವಿಸುತ್ತಿದ್ದರು. ಲೋಕಸಭಾ ಚುನಾವಣೆ ಸಂದರ್ಭದಲ್ಲಿಯೂ ಅವರ ಹೆಸರು ಚರ್ಚೆಗೆ ಬಂದಿತ್ತು. ಇದೀಗ ಅವರನ್ನು ವಿಧಾನ ಪರಿಷತ್​ಗೆ ಕಳುಹಿಸುವ ಬಗ್ಗೆ ವ್ಯಾಪಕ ಚರ್ಚೆ ನಡೆದಿತ್ತು. ಈ ಬಗ್ಗೆ ಪರೋಕ್ಷವಾಗಿ ಇತ್ತೀಚೆಗೆ ಸ್ವತಃ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರೇ ಹೇಳಿದ್ದರು. ಅಲ್ಲದೇ ಕೋರ್​ ಕಮಿಟಿ ಸಭೆಯಲ್ಲೂ ಸಹ ಪಟ್ಟಿಯಲ್ಲಿ ಸಿಟಿ ರವಿ ಹಾಗೂ ಲೋಕಸಭಾ ಟಿಕೆಟ್​ ವಂಚಿತ ಸದಾನಂದಗೌಡ, ನಳಿನ್ ಕುಮಾರ್ ಕಟೀಲ್ ಸೇರಿದಂತೆ ಹಲವರ ಹೆಸರುಗಳನ್ನು ಸಹ ಹೈಕಮಾಂಡ್​ಗೆ ಕಳುಹಿಸಲಾಗಿತ್ತು. ಅಂತಿಮವಾಗಿ ಹೈಕಮಾಂಡ್​ ಸಿ.ಟಿ ರವಿಗೆ ಅವರಿಗೆ ಅವಕಾಶ ನೀಡಿದೆ ಎನ್ನಲಾಗಿದೆ.

ಇದರೊಂದಿಗೆ ಸಿ.ಟಿ.ರವಿಯವರ ರಾಜಕೀಯ ಬದುಕಿನ ಮತ್ತೊಂದು ಇನ್ನಿಂಗ್ಸ್ ಆರಂಭವಾದಂತಾಗಿದೆ. ತಮ್ಮ ಪ್ರಖರ ಮಾತುಗಳಿಂದ ಬಿ.ಜೆ.ಪಿ. ಪಕ್ಷದ ಮುಂಚೂಣಿ ನಾಯಕನಾಗಿ ಗುರುತಿಸಿಕೊಂಡಿರುವ ಸಿ.ಟಿ.ರವಿಯವರ ಧ್ವನಿ ಈಗ ಮತ್ತೊಮ್ಮೆ ವಿಧಾನಮಂಡಲದಲ್ಲಿ ಪ್ರತಿಧ್ವನಿಸಲು ಅವಕಾಶ ಸಿಕ್ಕಂತಾಗಿದೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ