October 5, 2024

ಮೂಡಿಗೆರೆ ತಾಲ್ಲೂಕಿನ ಬಣಕಲ್ ನಜರೆತ್ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಬಿ ಎಸ್ ಜಯರಾಮ್ ಗೌಡ ಮಾಜಿ ಅಧ್ಯಕ್ಷರು ರಾಜ್ಯ ಬೆಳೆಗಾರರ ಸಂಘ ಇವರು ಭಾಗವಹಿಸಿ ವಿದ್ಯಾರ್ಥಿಗಳಿಗೆ ಪರಿಸರ ಸಂರಕ್ಷಣೆಯ ಮಹತ್ವದ ಬಗ್ಗೆ ಮಾಹಿತಿ ನೀಡಿದರು. ಪರಿಸರ ಮಾಲಿನ್ಯದಿಂದ ಜಾಗತಿಕ ತಾಪಮಾನ ಏರಿಕೆಯಾಗಿ ಅನೇಕ ದುಷ್ಪರಿಣಾಮಗಳನ್ನು ಎದುರಿಸಬೇಕಾಗಿದೆ. ವಿದ್ಯಾರ್ಥಿಗಳು ಪರಿಸರದ ಬಗ್ಗೆ ಕಾಳಜಿ ವಹಿಸಿ ಆದಷ್ಟು ಗಿಡಮರಗಳನ್ನು ಬೆಳೆಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು ಎಂದು ಕಿವಿಮಾತು ಹೇಳಿದರು.

ವಿದ್ಯಾರ್ಥಿಗಳು ಪರಿಸರ ಜಾಗೃತಿಯ ಕಿರು ನಾಟಕ ಹಾಗೂ ನೃತ್ಯವನ್ನು ಪ್ರದರ್ಶಿಸಿದರು.  ಪ್ರಾಂಶುಪಾಲರಾದ ಸಿಸ್ಟರ್ ಹಿಲ್ಡ ಲೋಬೋ ಅಧ್ಯಕ್ಷತೆ ವಹಿಸಿದ್ದರು. ಸಮಾರಂಭದಲ್ಲಿ ಲವ ಕುಮಾರ್, ಶಿಕ್ಷಕಿಯರಾದ ಅಬಿದಾ, ಚಂದನ, ಯಾಸ್ಮಿನ್, ಹಲೀಮಾ, ಅನುಶ್ರೀ, ಕೇಸರಿ, ಲಕ್ಷ್ಮಿ ದೇವಿ, ಸಿಸ್ಟರ್ ಅಮಲ್ ರಾಣಿ ಉಪಸ್ಥಿತರಿದ್ದರು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ