October 5, 2024

ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಭಾನುವಾರ ಸಂಜೆ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ಸಿನ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ 9 ಮಂದಿ ಸಾವನ್ನಪ್ಪಿದ್ದಾರೆ ಮತ್ತು 33 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

53 ಆಸನಗಳ ಬಸ್, ಶಿವ ಖೋರಿ ದೇವಸ್ಥಾನದಿಂದ ಕತ್ರಾ ಮಾರ್ಗವಾಗಿ ತೆರಳುತ್ತಿದ್ದ ವೇಳೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಚಲಿಸುತ್ತಿದ್ದ ವೇಳೆಯೇ ದಾಳಿ ನಡೆಸಿದ ಪರಿಣಾಮ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಿಂದ ಆಳವಾದ ಕಮರಿಗೆ ಬಿದ್ದಿದೆ. ಪೋನಿ ಪ್ರದೇಶದ ತೇರ್ಯತ್ ಗ್ರಾಮದ ಬಳಿ ಸಂಜೆ 6.15 ರ ಸುಮಾರಿಗೆ ಈ ದಾಳಿ ನಡೆದಿದೆ.

ಘಟನೆಯಲ್ಲಿ ಒಂಬತ್ತು ಯಾತ್ರಾರ್ಥಿಗಳು ಸಾವನ್ನಪ್ಪಿದ್ದಾರೆ ಮತ್ತು 33 ಮಂದಿ ಗಾಯಗೊಂಡಿದ್ದಾರೆ ಎಂದು ರಿಯಾಸಿಯ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಮೋಹಿತಾ ಶರ್ಮಾ ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.

ಭಯೋತ್ಪಾದಕರನ್ನು ಪತ್ತೆಹಚ್ಚಲು ಭದ್ರತಾ ಪಡೆಗಳು ಸೋಮವಾರ ಪ್ರದೇಶಗಳನ್ನು ಸುತ್ತುವರೆದು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭಾರತೀಯ ಸೇನೆ, ಪೊಲೀಸ್ ಮತ್ತು ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್  ಸೇರಿದಂತೆ ಭದ್ರತಾ ಪಡೆಗಳು ರಾಜೌರಿ ಜಿಲ್ಲೆಯ ಗಡಿಯಲ್ಲಿರುವ ತೆರಿಯಾತ್-ಪೋನಿ-ಶಿವ್ ಖೋರಿ ಪ್ರದೇಶದಲ್ಲು ಸುತ್ತುವರೆದು ಶೋಧಕಾರ್ಯ ನಡೆಸುತ್ತಿವೆ. ಡ್ರೋನ್‌ಗಳು ಮತ್ತು ಸ್ನಿಫರ್ ಡಾಗ್‌ಗಳು ಸೇರಿದಂತೆ ಕಣ್ಗಾವಲು ಉಪಕರಣಗಳೊಂದಿಗೆ ಶಸ್ತ್ರಸಜ್ಜಿತರಾಗಿದ್ದಾರೆ ಎಂದು ಹೇಳಿದರು. ಜಿಲ್ಲೆಯ ಪ್ರದೇಶ ಮತ್ತು ಅಕ್ಕಪಕ್ಕದ ಪ್ರದೇಶಗಳಲ್ಲಿ ಬೃಹತ್ ಶೋಧ ಕಾರ್ಯಾಚರಣೆ ಆರಂಭವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಮಾಣವಚನದಂತೆ ದುಷ್ಕೃತ್ಯ

ಇತ್ತ ಕೇಂದ್ರದಲ್ಲಿ ನರೇಂದ್ರ ಮೋದಿಯವರ ನೇತೃತ್ವದ ಎನ್.ಡಿ.ಎ. ಸರ್ಕಾರ ಮೂರನೇ ಅವಧಿಗೆ ಪ್ರಮಾಣ ವಚನ ಸ್ವೀಕಾರ ಸಮಾರಂಭ ಆಯೋಜನೆ ಗೊಂಡಿದ್ದ ಸಮಯದಲ್ಲಿಯೇ ಅತ್ತ ಭಯೋತ್ಪಾದಕರು ಕಾಶ್ಮೀರದಲ್ಲಿ ತಮ್ಮ ಅಟ್ಟಹಾಸ ಮೆರೆದಿದ್ದಾರೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ