October 5, 2024

ಜೂನ್ 29ರಂದು ಮೂಡಿಗೆರೆ ರೈತಭವನದಲ್ಲಿ ಆಯೋಜಿಸಿರುವ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮಕ್ಕೆ ಶ್ರೀ ಆದಿಚುಂಚನಗಿರಿಯ ಶ್ರೀ ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಗಳನ್ನು ಆಹ್ವಾನಿಸಲಾಗಿದೆ ಎಂದು ಮೂಡಿಗೆರೆ ಕೆಂಪೇಗೌಡ ಒಕ್ಕಲಿಗರ ವೇದಿಕೆ ಅಧ್ಯಕ್ಷ ಬ್ರಿಜೇಶ್ ಗೌಡ ಕಡಿದಾಳು ತಿಳಿಸಿದ್ದಾರೆ.

ಈ ಸಂಬಂಧ ಮಾಹಿತಿ ನೀಡಿದ ಅವರು ಈ ತಿಂಗಳ 29ರಂದು ಕೆಂಪೇಗೌಡ ಒಕ್ಕಲಿಗರ ವೇದಿಕೆ ಸೇರಿದಂತೆ ವಿವಿಧ ಒಕ್ಕಲಿಗ ಸಂಘಟನೆಗಳ ಸಹಯೋಗದಲ್ಲಿ ಮೂಡಿಗೆರೆಯ ರೈತ ಭವನದಲ್ಲಿ ಕೆಂಪೇಗೌಡ ಜಯಂತಿಯನ್ನು ಅದ್ದೂರಿಯಾಗಿ ಆಯೋಜಿಸಲು ತೀರ್ಮಾನಿಸಲಾಗಿದೆ. ಈ ಸಂಬಂಧ ಈಗಾಗಲೇ ಪೂರ್ವತಯಾರಿ ನಡೆಸಲಾಗುತ್ತಿದೆ.

ಅದರ ಅಂಗವಾಗಿ ಸಮುದಾಯ ಹಿರಿಯರ ಹಾಗೂ ಪದಾಧಿಕಾರಿಗಳ ಆಶಯದಂತೆ  ಒಕ್ಕಲಿಗ ಕುಲದ ಮಠವಾದ ಶ್ರೀ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿ ಮಠಾಧೀಶರಾದ ಪರಮಪೂಜ್ಯ   ಶ್ರೀ ಶ್ರೀ ಶ್ರೀ ನಿರ್ಮಲಾನಂದ ನಾಥ ಸ್ವಾಮೀಜಿಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದು ಸ್ವಾಮೀಜಿಗಳನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಯಿತು. ಸ್ವಾಮೀಜಿಯವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದ್ದು, ಕಾರ್ಯಕ್ರಮಕ್ಕೆ ಭಾಗವಹಿಸುವ ಬಗ್ಗೆ ಭರವಸೆ ವ್ಯಕ್ತಪಡಿಸಿದ್ದಾರೆ ಎಂದು ಬ್ರಿಜೇಶ್ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಸಂಘಟನೆಯ ಸಹ ಕಾರ್ಯದರ್ಶಿ ಪವನ್ ಗೌಡ ಪಟ್ಟದೂರು ಹಾಗೂ ಸಂಘದ ಸದಸ್ಯರಾದ ಮಹೇಂದ್ರ ಗೌಡ ಬೆಳಗೂಡು  ಉಪಸ್ಥಿತರಿದ್ದರು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ