October 5, 2024

ಕರ್ನಾಟಕದಲ್ಲಿ ಮುಂಗಾರು ಚುರುಕುಗೊಳ್ಳುತ್ತಿದ್ದು, ಕರ್ನಾಟಕದ ಕರಾವಳಿ ಹಾಗೂ ಉತ್ತರ, ದಕ್ಷಿಣ ಒಳನಾಡಿನ ಕೆಲವೆಡೆ ಭಾರಿ ಮಳೆಯಾಗಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದೆ.

ಮುಂದಿನ ಐದು ದಿನಗಳ ಕಾಲ ಕರ್ನಾಟಕದ 15ಕ್ಕೂ ಅಧಿಕ ಜಿಲ್ಲೆಗಳಲ್ಲಿ ಅಧಿಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದೆ. ಬೆಳಗಾವಿ, ಧಾರವಾಡ, ಹಾವೇರಿ, ಚಾಮರಾಜನಗರ, ದಾವಣಗೆರೆ, ಮಂಡ್ಯ, ಮೈಸೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.

ಇನ್ನುಳಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ಮಳೆಯಾಗುವ ಸಾಧ್ಯತೆ ಇದೆ.  ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

About Author

Leave a Reply

Your email address will not be published. Required fields are marked *