October 5, 2024

ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಮಣಿಸಿದ ಭಾರತ ಎರಡನೇ ಟಿ20 ವಿಶ್ವಕಪ್ ಅನ್ನು ಗೆದ್ದು ಬೀಗಿದೆ.

ಶನಿವಾರ ರಾತ್ರಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ್ದ ಭಾರತ ವಿರಾಟ್ ಕೊಹ್ಲಿ 76 ರನ್ ಹಾಗೂ ಅಕ್ಷರ್ ಪಟೇಲ್ 47 ರನ್ ಗಳ ನೆರವಿನಿಂದ 176 ರನ್ ಕಲೆ ಹಾಕಿತು. ಇದಕ್ಕೆ ಉತ್ತರವಾಗಿ ದಕ್ಷಿಣ ಆಫ್ರಿಕಾ 8 ವಿಕೆಟ್ ನಷ್ಟಕ್ಕೆ 169 ರನ್ ಗಳಿಸಷ್ಟೇ ಶಕ್ತವಾಗಿದ್ದು 7 ರನ್ ಗಳಿಂದ ಸೋಲು ಕಂಡಿದೆ.

ದಕ್ಷಿಣ ಆಫ್ರಿಕಾ ಪರ ಹೆಂಡ್ರಿಕ್ಸ್ 4 ರನ್ ಗಳಿಸಿ ಔಟಾದರೆ ಮಾರ್ಕ್ರಾಮ್ ಸಹ 4 ರನ್ ಗಳಿಸಿ ಔಟಾದರು. ನಂತರ ಬಂದ ಸ್ಟಬ್ಸ್ ಉತ್ತಮವಾಗಿ ಬ್ಯಾಟಿಂಗ್ ಮಾಡಿದ್ದು 31 ರನ್ ಬಾರಿಸಿ ಅಕ್ಷರ್ ಪಟೇಲ್ ಬೌಲಿಂಗ್ ನಲ್ಲಿ ಬೌಲ್ಡ್ ಆದರು. ಇನ್ನು ಡಿಕಾಕ್ 39 ರನ್ ಗಳಿಸಿದ್ದಾಗ ಅರ್ಷ ದೀಪ್ ಔಟ್ ಮಾಡಿದರು. ಈ ವೇಳೆ ಸ್ಫೋಟಕ ಬ್ಯಾಟಿಂಗ್ ಮಾಡಿದ ಕ್ಲಾಸೆನ್ 52 ರನ್ ಸಿಡಿಸಿ ತಂಡವನ್ನು ಗೆಲುವಿನ ಸನಿಹಕ್ಕೆ ತಂದಿಟ್ಟರು. ಆದರೆ ಅಂತಿಮ ಹಂತದಲ್ಲಿ ಹಾರ್ದಿಕ್ ಪಾಂಡ್ಯ ಅವರು ಕ್ಲಾಸೆನ್ ಅವರ ವಿಕೆಟ್ ಪಡೆದು ಪಂದ್ಯಕ್ಕೆ ರೋಚಕ ತಿರುವು ನೀಡಿದರು. ಕೊನೆಯ ಹಂತದಲ್ಲಿ ಪಂದ್ಯದ ಮೇಲೆ ಹಿಡಿತ ಸಾಧಿಸಿ ಭಾರತ ಪಂದ್ಯವನ್ನು ಗೆದ್ದು ಬೀಗಿದೆ. ಭಾರತದ ಪರ ಹಾರ್ದಿಕ್ ಪಾಂಡ್ಯ 3, ಅರ್ಷ್ ದೀಪ್ ಸಿಂಗ್ ಮತ್ತು ಜಸ್ ಪ್ರೀತ್ ಬುಮ್ರಾ ತಲಾ 2 ವಿಕೆಟ್ ಪಡೆದರೆ ಅಕ್ಷರ್ ಪಟೇಲ್ 1 ವಿಕೆಟ್ ಪಡೆದಿದ್ದಾರೆ.

ಮೊದಲ ಓವರ್ ನಲ್ಲಿ 15 ರನ್ ಗಳ ಭರ್ಜರಿ ಆರಂಭ ಪಡೆದರೂ ಭಾರತಕ್ಕೆ ಎರಡನೇ ಓವರ್ ನಲ್ಲಿ ಕೇಶವ್ ಮಹಾರಾಜ್ ಆಘಾತ ನೀಡಿದರು. ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದ ಮಹಾರಾಜ್ ಒಂದೇ ಓವರ್ ನಲ್ಲಿ 9 ರನ್ ಗಳಿಸಿದ್ದ ರೋಹಿತ್ ಶರ್ಮಾ ಮತ್ತು ರಿಷಬ್ ಪಂತ್ ರನ್ನು ಶೂನ್ಯಕ್ಕೆ ಔಟ್ ಮಾಡಿದರು. ಸೂರ್ಯಕುಮಾರ್ ಯಾದವ್ ಸಹ ನಿರಾಸೆ ಮೂಡಿಸಿದರು. ನಂತರ ತಾಳ್ಮೆಯ ಆಟವಾಡಿದ ಕೊಹ್ಲಿ ಹಾಗೂ ಅಕ್ಷರ್ ಪಟೇಲ್ 106 ರನ್ ಗಳ ಜೊತೆಯಾಟ ನೀಡಿದರು.

47 ರನ್ ಗಳಿಸಿದ್ದ ಅಕ್ಷರ್ ಪಟೇಲ್ ರನ್ ಔಟ್ ಗೆ ಬಲಿಯಾದರು. ನಂತರ ಬಂದ ಶಿವಂ ದುಬೆ ಬಿರುಸಿನ 27 ರನ್ ಗಳಿಸಿ ಔಟಾದರು. ಅಂತಿಮವಾಗಿ ಭಾರತ 20 ಓವರ್ ಗಳಲ್ಲಿ 176 ರನ್ ಗಳನ್ನು ಪೇರಿಸಿತು. ದಕ್ಷಿಣ ಆಫ್ರಿಕಾ ಪರ ಕೇಶವ್ ಮಹಾರಾಜ್ ಮತ್ತು ನಾರ್ಟ್ಜೆ ತಲಾ 2 ವಿಕೆಟ್ ಪಡೆದರು.

ಇದಕ್ಕೆ ಉತ್ತರವಾಗಿ ದಕ್ಷಿಣ ಆಫ್ರಿಕಾ 8 ವಿಕೆಟ್ ನಷ್ಟಕ್ಕೆ 169 ರನ್ ಗಳಿಸಷ್ಟೇ ಶಕ್ತವಾಗಿದ್ದು 7 ರನ್ ಗಳಿಂದ ಸೋಲು ಕಂಡಿತು.

ಈ ಮೂಲಕ 2007ರಲ್ಲಿ ಚೊಚ್ಚಲ ಟಿ20 ವಿಶ್ವಕಪ್ ಗೆದ್ದ ನಂತರ ಹದಿನೇಳು ವರ್ಷಗಳ ಕಾಯುವಿಕೆಯ ನಂತರ ಭಾರತ ಎರಡನೇ ಬಾರಿಗೆ ಟಿ20 ವಿಶ್ವಕಪ್ ಗೆ ಮುತ್ತಿಟ್ಟಿದೆ.

2011 ರಲ್ಲಿ ಏಕದಿನ ವಿಶ್ವಕಪ್ ಗೆದ್ದ ನಂತರ 13 ವರ್ಷಗಳ ನಂತರ ಮತ್ತೊಂದು ಐಸಿಸಿ ವಿಶ್ವಕಪ್ ಗೆದ್ದು ಬೀಗಿದೆ.

ಉತ್ತಮವಾಗಿ ಬ್ಯಾಟ್ ಮಾಡಿ 76 ರನ್ ಗಳಿಸಿದ ವಿರಾಟ್ ಕೊಹ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು. ಟೂರ್ನಿಯುದ್ದಕ್ಕೂ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ತೋರಿದ ಜಸ್ ಪ್ರೀತ್ ಬುಮ್ರಾ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದುಕೊಂಡರು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ