October 5, 2024

ಮಕ್ಕಳನ್ನು ಎಲ್‌ಕೆಜಿ, ಯುಕೆಜಿ (LKG, UKG) ಹಾಗೂ ಒಂದನೇ ತರಗತಿಗೆ ದಾಖಲಿಸಲು ರಾಜ್ಯ ಸರ್ಕಾರವು   ಈಗಾಗಲೇ ಕನಿಷ್ಠ ವಯೋಮಿತಿಯನ್ನು ನಿಗದಿಪಡಿಸಿತ್ತು. ಇದೀಗ ರಾಜ್ಯ ಸರ್ಕಾರ  ಗರಿಷ್ಠ ವಯೋಮಿತಿಯನ್ನು ನಿಗದಿಪಡಿಸಿದೆ. ಅದರಂತೆ, 2023-24ನೇ ಶೈಕ್ಷಣಿಕ ವರ್ಷದಿಂದ ಅನ್ವಯವಾಗುವಂತೆ ಎಲ್‌ಕೆಜಿ, ಯುಕೆಜಿ ಹಾಗೂ 1ನೇ ತರಗತಿಗೆ ದಾಖಲಿಸುವ ಮಕ್ಕಳ ಗರಿಷ್ಠ ವಯೋಮಿತಿಯನ್ನು ಪರಿಷ್ಕರಣೆ ಮಾಡಲಾಗಿದೆ.

ಮಕ್ಕಳನ್ನು ಎಲ್‌ಕೆಜಿಗೆ ಸೇರಿಸಲು 4  ವರ್ಷ ಕನಿಷ್ಠ ವಯೋಮಿತಿಯಾದರೆ, ಈಗ ಗರಿಷ್ಠ ವಯೋಮಿತಿಯು 6 ವರ್ಷ ಆಗಿದೆ. ಯುಕೆಜಿಗೆ 5 ವರ್ಷ ಕನಿಷ್ಠ ವಯೋಮಿತಿಯಾದರೆ, 7 ವರ್ಷ ಗರಿಷ್ಠ ವಯೋಮಿತಿಯಾಗಿದೆ. ಹಾಗೆಯೇ, ಒಂದನೇ ತರಗತಿಗೆ ಕನಿಷ್ಠ 6 ವರ್ಷ ಇದ್ದರೆ, ಗರಿಷ್ಠ 8 ವರ್ಷ ಇರಬೇಕಾಗುತ್ತದೆ. ಎಲ್‌ಕೆಜಿಗೆ 2023-24, ಯುಕೆಜಿಗೆ 2024-25 ಹಾಗೂ ಒಂದನೇ ತರಗತಿಗೆ 2025-26ನೇ ಶೈಕ್ಷಣಿಕ ಸಾಲಿನಿಂದ ಹೊಸ ಆದೇಶವು ಅನ್ವಯವಾಗಲಿದೆ. ಡ್ರಾಪ್‌ ಔಟ್‌ ಆಗುವ ಮಕ್ಕಳ ಸಂಖ್ಯೆಯನ್ನು ತಗ್ಗಿಸುವ ಉದ್ದೇಶದಿಂದ ಸರ್ಕಾರವು ಹೊಸ ಆದೇಶ ಹೊರಡಿಸಿದೆ.

ಸಾರ್ವಜನಿಕ ಶಿಕ್ಷಣ ಇಲಾಖೆಯು 2025-26 ನೇ ಸಾಲಿನ ಶೈಕ್ಷಣಿಕ ಸಾಲಿನಿಂದ ಜೂನ್‌ 1ನೇ ತಾರೀಖಿಗೆ ಕಡ್ಡಾಯವಾಗಿ 6 ವರ್ಷ ಪೂರ್ಣಗೊಂಡಿರುವ ಮಗುವನ್ನು ಮಾತ್ರ 1ನೇ ತರಗತಿಗೆ ದಾಖಲಿಸಿಕೊಳ್ಳುವಂತೆ ಕಳೆದ ವರ್ಷವೇ ಆದೇಶ ಹೊರಡಿಸಿದೆ. ಹೀಗಾಗಿ ಈ ಶೈಕ್ಷಣಿಕ ಸಾಲಿನಿಂದಲೇ ಎಲ್‌ಕೆಜಿ ತರಗತಿಗೆ ದಾಖಲು ಮಾಡಿಕೊಳ್ಳಲು ಜೂನ್‌ 01ನೇ ತಾರೀಖಿಗೆ ಅನ್ವಯವಾಗುವಂತೆ ನಾಲ್ಕು (4) ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

2022 ಜುಲೈ 26ರಂದು ಆದೇಶ ಹೊರಡಿಸಿದ್ದ ಶಿಕ್ಷಣ ಇಲಾಖೆ ಇನ್ನು ಮುಂದೆ ಒಂದು ಮಗುವಿಗೆ ಒಂದನೇ ತರಗತಿಗೆ ಪ್ರವೇಶ ನೀಡಬೇಕಾದರೆ ಜೂನ್‌ ಒಂದನೇ ತಾರೀಖಿಗೆ ಅನ್ವಯವಾಗುವಂತೆ ಆರು ವರ್ಷ ತುಂಬಿರಲೇಬೇಕು ಎಂದು ಸೂಚಿಸಿತ್ತು. ಈ ಆದೇಶವನ್ನು 2023-24 ನೇ ಸಾಲಿನಿಂದಲೇ ಜಾರಿಗೆ ತರಬೇಕೆಂದು ಸೂಚಿಸಲಾಗಿತ್ತಾದರೂ ಪೋಷಕರು ಮತ್ತು ಶಾಲೆಗಳ ಆಡಳಿತ ಮಂಡಳಿಗಳು ಆಕ್ಷೇಪಣೆ ವ್ಯಕ್ತಪಡಿಸಿದ್ದರಿಂದ ಇದನ್ನು 2025-26 ನೇ ಸಾಲಿನ ಶೈಕ್ಷಣಿಕ   ಸಾಲಿನಿಂದ ಜಾರಿಗೆ ತರಲಾಗುವುದು ಎಂದು ಪ್ರಕಟಿಸಿದೆ.

ಹೊಸ ನಿಯಮದಂತೆ 2025-26ನೇ ಸಾಲಿನಲ್ಲಿ ಒಂದನೇ ತರಗತಿಗೆ ನಿಮ್ಮ ಮಗುವನ್ನು ಸೇರಿಸಿಬೇಕೆಂದರೆ ಎಲ್‌ಕೆಜಿ ಸೇರ್ಪಡೆ ವಿಷಯದಲ್ಲಿ ಈಗಿನಿಂದಲೇ ಎಚ್ಚರಿಕೆ ವಹಿಸಬೇಕಾಗುತ್ತದೆ. ಅಂದರೆ 2025-26ನೇ ಸಾಲಿಗೆ ಬರುವಾಗ ಒಂದನೇ ತರಗತಿ ಸೇರುವ ಮಗುವಿಗೆ ಆರು ವರ್ಷ ತುಂಬಿರುವುದು ಕಡ್ಡಾಯ. ಹಾಗಾಗಿ, ಈ ವರ್ಷ ಎಲ್‌ಕೆಜಿಗೆ ಸೇರಿಸುವಾಗ ನಿಮ್ಮ ಮಗು ಕಡ್ಡಾಯವಾಗಿ ನಾಲ್ಕು ವರ್ಷ ಪೂರ್ಣಗೊಳಿಸಿರಬೇಕು. ಇಲ್ಲದೇ ಇದ್ದಲ್ಲಿ ಎಲ್‌ಕೆಜಿ ಅಥವಾ ಯುಕೆಜಿಯಲ್ಲಿಯೇ ಮಗು ಒಂದು ವರ್ಷ ಹೆಚ್ಚಾಗಿ ಉಳಿದುಕೊಳ್ಳುವ ಅನಿವಾರ್ಯತೆ ಸೃಷ್ಟಿಯಾಗಲಿದ್ದು, ಈ ಬಗ್ಗೆ ಪೋಷಕರು ಎಚ್ಚರಿಕೆ ವಹಿಸಬೇಕು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ