October 5, 2024

ತಮಗೆ ಸೇವೆಯಲ್ಲಿ ಹಿಂಬಡ್ತಿ ನೀಡಿರುವುದನ್ನು ವಿರೋಧಿಸಿ ಪ್ರಾಥಮಿಕ ಶಾಲಾ ಶಿಕ್ಷಕರು ಚಿಕ್ಕಮಗಳೂರು ನಗರದ ಕ್ಷೇತ್ರ ಸಮನ್ವಯಾಧಿಕಾರಿ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿದರು,

ಕ್ಷೇತ್ರ ಸಮನ್ವಯಾಧಿಕಾರಿ ಕಚೇರಿಯಲ್ಲಿ ಶಿಕ್ಷಕರ ವರ್ಗಾವಣೆ ಕೌನ್ಸಿಲಿಂಗ್ ನಡೆಯುವ ವೇಳೆ ದಿಡೀರನೆ ಪ್ರತಿಭಟನೆ ನಡೆಸಿದ ಪ್ರಾಥಮಿಕ ಶಾಲಾ ಶಿಕ್ಷಕರು ಹಿಂಬಡ್ತಿಯನ್ನು ಹಿಂಪಡೆಯಬೇಕು ಎಂದು ರಾಜ್ಯ ಸರ್ಕಾರವನ್ನು ಆಗ್ರಹಿಸಿದರು,

ಈ ವೇಳೆ ಮಾತನಾಡಿದ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಮಾಜಿ ಅಧ್ಯಕ್ಷ. ಸುಂದರೇಶ್. 2016 ಕ್ಕಿಂತ ಮೊದಲು ನೇಮಕಾತಿ ಹೊಂದಿದ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಹಿಂಬಡ್ತಿ ನೀಡಿ ಆರು ಮತ್ತು ಎಂಟನೇ ತರಗತಿ ಬೋಧನೆಗೆ ಎಂದು ಜಿ ಪಿ ಟಿ ಎಂಬ ಹೊಸ ವೃಂದವನ್ನು ಸೃಜಿಸಿ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗಿದೆ. ಇದು ರಾಜ್ಯದ ಇತಿಹಾಸದಲ್ಲೇ ಹಿಂದೆಂದೂ ನಡೆದಿಲ್ಲ ಈ ಮೂಲಕ ಸಂವಿಧಾನದ ಆಶಯಗಳನ್ನು ಉಲ್ಲಂಘಿಸಲಾಗಿದೆ ಎಂದು ಆರೋಪಿಸಿದರು,

ರಾಜ್ಯ ಸರ್ಕಾರ ಹಿಂದಿನ ಎಲ್ಲಾ ನಿಯಮಗಳನ್ನು ಗಾಳಿಗೆ ತೂರಿ ರೂಪಿಸಿರುವ ಹೊಸ ಪದ್ಧತಿಯಿಂದಾಗಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಸೇವಾ ಜೇ?ತೆ. ಕಾಲಮಿತಿ ಬಡ್ತಿ. ಸ್ವಯಂ ಚಾಲಿತ ಬಡ್ತಿ. ಮುಖ್ಯ ಶಿಕ್ಷಕರ ಬಡ್ತಿ. ಪ್ರೌಢಶಾಲಾ ಶಿಕ್ಷಕರ ಬಡ್ತಿ. ಆಗೋ ವರ್ಗಾವಣೆಗಳಲ್ಲಿ ಅನ್ಯಾಯವಾಗುತ್ತದೆ ಎಂದು ಆರೋಪಿಸಿದರು,

2016 ಕ್ಕಿಂತ ಮುಂಚೆ ನೇಮಕ ಹೊಂದಿದ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಜಿ ಪಿ ಟಿ ವೃಂದದಲ್ಲಿ ವಿಲೀನಗೊಳಿಸಿ ಪ್ರೌಢಶಾಲೆಗೆ ಬಡ್ತಿ ನೀಡಬೇಕು. ಸಾಮಾಜಿಕ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು,

ಶಿಕ್ಷಕರ ಹುದ್ದೆಗೆ ವಿದ್ಯಾರ್ಹತೆಯನ್ನು ಪರಿಗಣಿಸದೇ ಸೇವಾ ಹಿರಿತನದ ಆಧಾರದ ಮೇಲೆ ಬಡ್ತಿ ನೀಡಬೇಕು. 2016 ರ ಮುಂಚಿನ ನಿಯಮಾವಳಿಯನ್ವಯ ಆರ್ಥಿಕ ಹಾಗೂ ಇನ್ನಿತರ ಸೌಲಭ್ಯಗಳನ್ನು ಒದಗಿಸಬೇಕು. ೨೦–೨೫ ವ?ಗಳಿಂದ ಆರನೇ ಮತ್ತು ಎಂಟನೇ ತರಗತಿಗಳಿಗೆ ಜಿಪಿಟಿ. ಟಿ ವಿ ಟಿ ಗಳಿಗೆ ಸರಿಸಮನಾಗಿ ದುಡಿಯುತ್ತಿರುವ ಪದವೀಧರ ಶಿಕ್ಷಕರಿಗೆ ವಿಶೇಷ ವೇತನ ಬಡ್ತಿಯನ್ನು ನೀಡಬೇಕು ಎಂದು ಆಗ್ರಹಿಸಿದರು,

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸದಸ್ಯ ಯೋಗಪ್ಪ. ತಾರೀಕ್ ಆಲಿ. ಜಿ. ಹೆಚ್. ಚಂದ್ರೇಗೌಡ. ಪುಷ್ಪ. ಗೀತಾ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ