October 5, 2024

ಮೂಡಿಗೆರೆ ನಳಂದಾ ವಿದ್ಯಾಸಂಸ್ಥೆಯ ಮೇಲ್ವಿಚಾರಕರಾಗಿದ್ದ ಸುರೇಸ್ (61 ವರ್ಷ) ಅವರು ಹೃದಯಘಾತದಿಂದ ನಿಧನ ಹೊಂದಿದ್ದಾರೆ.

ಮೂಡಿಗೆರೆ ಪಟ್ಟಣದ ಪ್ರತಿಷ್ಟಿತ ನಳಂದಾ ವಿದ್ಯಾಸಂಸ್ಥೆಯಲ್ಲಿ ಶಾಲೆ ಆರಂಭದಿಂದಲೂ ಮೇಲ್ವಿಚಾರಕರಾಗಿ ಕಾರ್ಯನಿರ್ವಹಿಸುತ್ತಿದ್ದ ಸುರೇಶ ಅವರು ಇಂದು ಸಂಜೆ ತಮ್ಮ ಸ್ವಗೃಹದಲ್ಲಿ ಹೃದಯಾಘಾತಕ್ಕೆ ಒಳಗಾಗಿದ್ದು, ಚಿಕಿತ್ಸೆ ಫಲಿಸದೇ ಚಿಕ್ಕಮಗಳೂರಿನ ಆಶ್ರಯ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಮೂಡಿಗೆರೆ ತಾಲ್ಲೂಕಿನ ಬಣಕಲ್ ಸಮೀಪದ ಬಿ.ಹೊಸಳ್ಳಿ ಗ್ರಾಮದರಾದ ಸುರೇಶ್ ನಳಂದಾ ವಿದ್ಯಾಸಂಸ್ಥೆಯನ್ನು ಕಟ್ಟಿ ಬೆಳೆಸುವುದರಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಸಾವಿರಾರು ವಿದ್ಯಾರ್ಥಿಗಳಿಗೆ ಉತ್ತಮ ಸಂಸ್ಕಾರ ಮತ್ತು ಮಾರ್ಗದರ್ಶನ ನೀಡುತ್ತಿದ್ದರು. ವಿದ್ಯಾರ್ಥಿಗಳಿಗೆ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದ್ದರು. ವಿದ್ಯಾರ್ಥಿಗಳಿಗೆ ಅಚ್ಚುಮೆಚ್ಚಿನ ಮಾರ್ಗದರ್ಶಕರಾಗಿದ್ದರು.

ಸುರೇಶ್ ಅವರು  ಪತ್ನಿ ಹಾಗೂ ಓರ್ವ ಪುತ್ರಿ, ಅಪಾರ ಬಂಧುಗಳನ್ನು ಅಗಲಿದ್ದಾರೆ.

ಸುರೇಶ್ ಅವರ ನಿಧನಕ್ಕೆ ನಳಂದಾ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ತೀವ್ರ ಸಂತಾಪ ಸೂಚಿಸಿದ್ದಾರೆ.

ಅವರ ಅಂತ್ಯಸಂಸ್ಕಾರ ನಾಳೆ ಬಿ.ಹೊಸಳ್ಳಿ ಗ್ರಾಮದಲ್ಲಿ ನೆರವೇರಲಿದೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ