October 5, 2024

ಮೂಡಿಗೆರೆ ತಾಲ್ಲೂಕಿನ ಗೋಣಿಬೀಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಿ.ಹೋಸಳ್ಳಿ- ಪಡಿಯ ಕಾಲೋನಿ ರಸ್ತೆಯು ಮಳೆಯಿಂದ ಹಾನಿಯಾಗಿದ್ದು ರಸ್ತೆಯು ಸಂಪೂರ್ಣ ಕುಸಿಯುವ ಹಂತಕ್ಕೆ ತಲುಪಿದ್ದು, ಹತ್ತಾರು ಮನೆಗಳು ಸಂಪರ್ಕ ಕಳೆದುಕೊಳ್ಳುವ ಭೀತಿ ಎದುರಿಸುತ್ತಿವೆ. ಒಂದು ವೇಳೆ ಈ ರಸ್ತೆ ಕುಸಿದು ಬಿದ್ದರೆ ಇಲ್ಲಿನ ನಿವಾಸಿಗಳು ಹೊರಪ್ರಪಂಚದೊಂದಿಗಿನ ಸಂಪರ್ಕವನ್ನು ಕಳೆದುಕೊಳ್ಳಲಿವೆ.

ಪಡಿಯಾ ಕಾಲೋನಿಯಲ್ಲಿ ಪ್ರಮುಖವಾಗಿ ಪರಿಶಿಷ್ಟ ಪಂಗಡದ 30ಕ್ಕೂ ಅಧಿಕ ಮನೆಗಳಿದ್ದು, ಅಲ್ಲಿನ ಜನರು ರಸ್ತೆ ಕುಸಿಯುವ ಭೀತಿ ಎದುರಿಸುತ್ತಿದ್ದಾರೆ. ಸಂಬಂಧಿಸಿದ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಈ ಬಗ್ಗೆ ಗಮನ ಹರಿಸಿ ರಸ್ತೆಗೆ ರಿವಿಟ್ ಮೆಂಟ್ ನಿರ್ಮಿಸಿ ಸಂಪರ್ಕಕ್ಕೆ ಅನುವುಮಾಡಿಕೊಡಬೇಕಾಗಿ ಸ್ಥಳೀಯರು ಆಗ್ರಹಿಸಿದ್ದಾರೆ.

ಸ್ಥಳಕ್ಕೆ ಗೋಣಿಬೀಡು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ   ದಿನೇಶ್ ಜಿ ಎಸ್. ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಾದ ಕುಮಾರಿ ಸಿಂಚನ. ಗೋಣಿಬೀಡು ಗ್ರಾಮದ. ರಾಜಸ್ವ ನಿರೀಕ್ಷಕರು, ಗ್ರಾಮ ಆಡಳಿತ ಅಧಿಕಾರಿಗಳು ಹಾಗೂ ಜಿ.ಹೊಸಹಳ್ಳಿ ಭಾಗದ ಗ್ರಾಮ ಪಂಚಾಯತಿ ಸದಸ್ಯರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ದಿನೇಶ್ ಅವರು ಮಾತನಾಡಿ ಗೋಣಿಬೀಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅನೇಕ ಕಡೆ ಅತಿವೃಷ್ಟಿಯಿಂದ ಹಾನಿ ಸಂಭವಿಸಿದೆ. ಗ್ರಾಮೀಣ ಭಾಗಗಳಿಗೆ ತೆರಳುವ ರಸ್ತೆ ಮತ್ತು ಮೋರಿಗಳು ಭೂಕುಸಿತದಿಂದ ಹಾನಿಯಾಗಿವೆ. ಅನೇಕ ಕಡೆ ಮನೆಗಳು ಹಾನಿಯಾಗಿದ್ದು, ಮನೆಗಳ ಮೇಲೆ ಮಣ್ಣು ಕುಸಿಯುವ ಹಂತಕ್ಕೆ ಕೆಲವು ಕಡೆ ಅಪಾಯ ಎದುರಾಗಿದೆ. ಈ ಬಗ್ಗೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಸೂಕ್ತ ಕ್ರಮ ಜರುಗಿಸಬೇಕು ಮತ್ತು ಮನೆ ಹಾನಿಯಾಗಿರುವವರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ