October 5, 2024

ಪ್ಯಾರಿಸ್ ಒಲಿಂಪಿಕ್ಸ್  ಕ್ರೀಡಾಕೂಟದಲ್ಲಿ ಭಾರತ ಪುರುಷರ ಹಾಕಿ ತಂಡ  ಕ್ವಾಟರ್ ಫೈನಲ್ ಪಂದ್ಯದಲ್ಲಿ ಗ್ರೇಟ್ ಬ್ರಿಟನ್ ತಂಡವನ್ನು ಮಣಿಸಿ ಸೆಮಿಫೈನಲ್ ಗೆ ಲಗ್ಗೆ ಇಟ್ಟಿದೆ.

ಮೊದಲ ಕ್ವಾರ್ಟರ್‌ಫೈನಲ್‌ನಲ್ಲಿ ಪೆನಾಲ್ಟಿ ಶೂಟೌಟ್ ಮೂಲಕ ಬ್ರಿಟನ್‌ನನ್ನು ಸೋಲಿಸುವ ಮೂಲಕ ಭಾರತ ಸೆಮಿಫೈನಲ್‌ಗೆ ಲಗ್ಗೆ ಇಟ್ಟಿದೆ. ಭಾರತ ಸತತ ಎರಡನೇ ಬಾರಿಗೆ ಒಲಿಂಪಿಕ್ಸ್‌ನಲ್ಲಿ ಸೆಮಿಫೈನಲ್ ಪ್ರವೇಶಿಸಿದೆ. ಪಂದ್ಯವು ಪೂರ್ಣ ಸಮಯದವರೆಗೆ 1-1 ರಲ್ಲಿ ಸಮಬಲದಲ್ಲಿ ಉಳಿಯಿತು. ನಂತರ ಪೆನಾಲ್ಟಿ ಶೂಟೌಟ್‌ ನೀಡಲಾಯಿತು. ಅನುಭವಿ ಗೋಲ್ ಕೀಪರ್ ಪಿ.ಆರ್ ಶ್ರೀಜೇಶ್ ಮತ್ತೊಮ್ಮೆ ಗೋಡೆಯಾಗಿ ನಿಂತರು. ಶೂಟೌಟ್‌ನಲ್ಲಿ ಭಾರತ 4-2 ಅಂತರದಲ್ಲಿ ಜಯ ಸಾಧಿಸಿದೆ.

ಭಾರತದ ಪುರುಷರ ಹಾಕಿ ತಂಡ ಟೋಕಿಯೊ ಒಲಿಂಪಿಕ್ಸ್ ಇತಿಹಾಸವನ್ನು ಪುನರಾವರ್ತಿಸಿದೆ. 2021ರಲ್ಲಿ ಟೋಕಿಯೊದಲ್ಲಿ ನಡೆದ ಕ್ವಾರ್ಟರ್‌ ಫೈನಲ್‌ನಲ್ಲಿ ಬ್ರಿಟನ್‌ ತಂಡವನ್ನು ಸೋಲಿಸಿ ಭಾರತ ಸೆಮಿಫೈನಲ್‌ ಪ್ರವೇಶಿಸಿತ್ತು. ಆಗ ಭಾರತವು ಬ್ರಿಟನ್‌ನನ್ನು 3-1 ಗೋಲುಗಳಿಂದ ಸೋಲಿಸಿತ್ತು ಆದರೆ ಸೆಮಿಫೈನಲ್‌ನಲ್ಲಿ ಬೆಲ್ಜಿಯಂ ಕೈಯಲ್ಲಿ ಸೋಲನ್ನು ಎದುರಿಸಬೇಕಾಯಿತು. ಆದರೆ, ಕಂಚಿನ ಪದಕಕ್ಕಾಗಿ ನಡೆದ ಪಂದ್ಯದಲ್ಲಿ ಭಾರತ ತಂಡ ಜರ್ಮನಿಯನ್ನು ಮಣಿಸಿ 41 ವರ್ಷಗಳ ಬರ ನೀಗಿಸಿತ್ತು.

ಈ ಬಾರಿ ಬಲಿಷ್ಠ ತಂಡವಾಗಿ ತೋರುತ್ತಿರುವ ಭಾರತ ಈಗ ಪ್ಯಾರಿಸ್‌ನಲ್ಲಿ ಒಲಂಪಿಕ್ಸ್ ನಲ್ಲಿ ಚಿನ್ನ ಗೆಲ್ಲಲ್ಲಿ ಎಂಬುದು ಕೋಟ್ಯಾಂತರ ಭಾರತೀಯರ ಹಾರೈಕೆಯಾಗಿದೆ.

ಒಲಂಪಿಕ್ ಇತಿಹಾಸದಲ್ಲಿ ಅತಿಹೆಚ್ಚು ಪದಕ ಗೆದ್ದಿರುವ ಧಾಖಲೆ ಭಾರತದ ಹೆಸರಿನಲ್ಲಿದೆ (8 ಚಿನ್ನ, 1 ಬೆಳ್ಳಿ ಮತ್ತು 3 ಕಂಚಿನ ಪದಕ) ಇದೀಗ ಭಾರತ ತನ್ನ ಹಾಕಿ ವೈಭವವನ್ನು ಮರುಕಳಿಸುವ ಸುವರ್ಣ ಅವಕಾಶ ಪಡೆದಿದೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ