October 5, 2024

ಮೂಡಿಗೆರೆ ತಾಲ್ಲೂಕು ಕಛೇರಿಯಲ್ಲಿ ಶಿರಸ್ತೇದಾರ್ ಆಗಿ ಕಾರ್ಯನಿರ್ವಹಿಸಿ ನಿವೃತ್ತಿ ಹೊಂದಿದ  ಎಂ.ಬಿ. ಕುಮಾರ್ ಅವರಿಗೆ ಇಲಾಖೆಯ ವತಿಯಿಂದ ಇತ್ತೀಚೆಗೆ ಬೀಳ್ಕೊಡುಗೆ ಸಮಾರಂಭ ಏರ್ಪಡಿಸಲಾಗಿತ್ತು.

ಮೂಡಿಗೆರೆ ತಾಲ್ಲೂಕು ಕಛೇರಿ ಸಭಾಂಗಣದಲ್ಲಿ ನಡೆದ ಸರಳ ಸಮಾರಂಭದಲ್ಲಿ ಕುಮಾರ್ ಅರವನ್ನು ಗೌರವಿಸಿ ಬೀಳ್ಕೊಡಲಾಯಿತು. ಇದೇ ಸಂದರ್ಭದಲ್ಲಿ ತಾಲ್ಲೂಕು ಕಛೇರಿಯಲ್ಲಿ  ನೌಕರರಾಗಿ ಕಾರ್ಯನಿರ್ವಹಿಸಿ ನಿವೃತ್ತರಾಗಿರುವ ಸುಧಾಕರ್ ಅವರನ್ನು ಸಹ ಗೌರವಿಸಲಾಯಿತು.

ಕುಮಾರ್ ಅವರು ಕಂದಾಯ ಇಲಾಖೆಯಲ್ಲಿ ಗ್ರಾಮ ಲೆಕ್ಕಾಧಿಕಾರಿ ಹುದ್ದೆಯಿಂದ ವಿವಿಧ ಹುದ್ದೆಗಳನ್ನು ನಿರ್ವಹಿಸಿ ಮೂಡಿಗೆರೆ ತಾಲ್ಲೂಕು ಕಛೇರಿಯಲ್ಲಿ ಕಳೆದ ಕೆಲ ವರ್ಷಗಳಿಂದ ಶಿರಸ್ತೇದಾರ್  ಆಗಿ ಕಾರ್ಯರ್ವಹಿಸುತ್ತಿದ್ದರು.

ಬೀಳ್ಕೊಡುಗೆ ಸಮಾರಂಭದಲ್ಲಿ ಇಲಾಖೆಯ ಅಧಿಕಾರಿಗಳು ಕುಮಾರ್ ಅವರೊಂದಿಗೆ ತಮ್ಮ ಒಡನಾಟ ಮತ್ತು ಸೇವೆಯನ್ನು ಸ್ಮರಿಸಿದರು. ತಾಲ್ಲೂಕು ಬೆಳೆಗಾರರ ಸಂಘದ ಅಧ್ಯಕ್ಷ ಬಿ.ಆರ್. ಬಾಲಕೃಷ್ಣ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಹೆಚ್.ಎಂ. ಶಾಂತಕುಮಾರ್ ಕುಮಾರ್ ಮತ್ತು ಸುಧಾಕರ್ ಅವರ ಕಾರ್ಯವೈಖರಿಯನ್ನು ಸ್ಮರಿಸಿದರು. ಎಂ.ಬಿ. ಕುಮಾರ್ ಅವರ ಪುತ್ರಿ ತನ್ನ ತಂದೆಯ ಬಗ್ಗೆ ಭಾವುಕವಾಗಿ ಮಾತನಾಡಿದರು.

ತಹಸೀಲ್ದಾರ್ ರಾಜಶೇಖರ ಮೂರ್ತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಸರ್ಕಾರಿ ಸೇವೆಯಲ್ಲಿ ನಿರತರಾಗಿರುವವರು ಜನರಿಗೆ ಸೂಕ್ತವಾಗಿ ಸ್ಪಂದಿಸಿ ಕಾನೂನಿನ ಚೌಕಟ್ಟಿನಲ್ಲಿ ಕೆಲಸ ಮಾಡಿಕೊಡಬೇಕು. ಯಾವುದೇ ವಿಳಂಬಕ್ಕೆ ಅವಕಾಶ ನೀಡದೇ ಕಾರ್ಯನಿರ್ವಹಿಸಬೇಕು. ಆಗ ಮಾತ್ರ ಜನರ ಪ್ರೀತಿ ವಿಶ್ವಾಸ ಗಳಿಸಲು ಸಾಧ್ಯ ಎಂದರು.

ಗೌರವ ಸ್ವೀಕರಿಸಿ ಮಾತನಾಡಿದ ಎಂ.ಬಿ. ಕುಮಾರ್ ಅವರು ತಮ್ಮ ಸೇವಾ ಅವಧಿಯಲ್ಲಿ ಮೂಡಿಗೆರೆ ಜನತೆ ಮತ್ತು ಇಲಾಖೆಯ ಸಹೋದ್ಯೋಗಿಗಳು ನೀಡಿದ ಸಹಕಾರವನ್ನು ಸ್ಮರಿಸಿದರು.

ಇದೇ ಸಂದರ್ಭದಲ್ಲಿ ಮೂಡಿಗೆರೆ ತಾಲ್ಲೂಕು ಕಛೇರಿಯಿಂದ ಚಿಕ್ಕಮಗಳೂರಿಗೆ ವರ್ಗಾವಣೆ ಹೊಂದಿದ ನೌಕರ ದೇವರಾಜ್ ಅವರನ್ನು ಗೌರವಿಸಲಾಯಿತು.

 

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ