October 5, 2024

ಪರಿಸರ ತಜ್ಞ ಡಾ. ಮಾಧವ್ ಗಾಡ್ಗೀಳ್‌ರವರ ವೈಜ್ಞಾನಿಕ ವರದಿಯನ್ನು ಯತಾವತ್ತಾಗಿ ಜಾರಿ ಮಾಡಿ, ಸಂವಿಧಾನ ಉಳಿಸಿ ಪರಿಸರ ಸಂರಕ್ಷಿಸಿ, ಬಹುರಾಷ್ಟ್ರೀಯ ಕಂಪನಿಗಳ ಲೂಟಿಕೋರ ನೀತಿಯನ್ನು ಕೈಬಿಡಿ ಎಂದು ಒತ್ತಾಯಿಸಿ ಕರ್ನಾಟಕ ಪ್ರಗತಿಪರ ಸಂಘಟನೆಯ ಚಿಕ್ಕಮಗಳೂರು ಜಿಲ್ಲಾ ಶಾಖೆ ಇಂದು ಆಜಾದ್ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಭಾರೀ ಬಂಡವಾಳಿಗರಿಂದ ಹಾಗೂ ಭೂಗಳ್ಳರಿಂದ ಪ್ರಕೃತಿಯನ್ನು ರಕ್ಷಿಸಿ, ಕೊಡಗು, ಜಿಲ್ಲೆಯ ಮಲೆನಾಡು ಭಾಗದಲ್ಲಿ, ಕೇರಳದ ವಯನಾಡಿನಲ್ಲಿ ಭೂಕುಸಿತದ ದುರಂತಗಳು ಸಂಭವಿಸದಂತೆ ಎಚ್ಚರವಹಿಸಬೇಕೆಂದು ಮನವಿಯಲ್ಲಿ ತಿಳಿಸಿದ್ದಾರೆ.

ಜೀವನೋಪಾಯಕ್ಕಾಗಿ ಸಾಗುವಳಿ ಮಾಡಿರುವ ಬಡ ಸಾಗುವಳಿದಾರರನ್ನು ಹೊರತುಪಡಿಸಿ, ಭಾರೀ ಭೂಮಾಲಿಕ ಒತ್ತುವರಿದಾರರನ್ನು ತೆರವುಗೊಳಿಸಿ ಅರಣ್ಯ ಮತ್ತು ಕಂದಾಯ ಭೂಮಿ ಜಂಟಿ ಸರ್ವೆ ನಡೆಸಿ ಗಡಿ ಗುರ್ತಿಸಿ ಗೊಂದಲಕ್ಕೆ ತೆರೆ ಎಳೆಯಬೇಕೆಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.

ಗಿರಿ ಪ್ರದೇಶ ಮತ್ತು ಮುಳ್ಳಯ್ಯನಗಿರಿ ಸುತ್ತಮುತ್ತ ಹೋಂಸ್ಟೇ, ರೆಸಾರ್ಟ್, ಕಲ್ಲುಗಣಿಗಾರಿಕೆ, ಭಾರಿ ವಾಹನಗಳ ಸಂಚಾರಕ್ಕೆ ಅನುಮತಿ ನೀಡಬಾರದು. ಈಗಾಗಲೇ ನೀಡಿರುವ ಅನುಮತಿಯನ್ನು ಕೂಡಲೇ ರದ್ದುಪಡಿಸಬೇಕು ಹಾಗೂ ಯಾವುದೇ ಪರಿಸರ ವಿರೋಧಿ ಚಟುವಟಿಕೆಗಳಿಗೆ ಅನುಮತಿ ನೀಡಬಾರದು ಎಂಬ ಈ ನಮ್ಮ ಎಲ್ಲಾ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದ್ದಾರೆ.

ಪ್ರತಿಭಟನೆಯ ನೇತೃತ್ವವನ್ನು ಕರ್ನಾಟಕ ಪ್ರಗತಿಪರ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಉಮೇಶ್ ಕುಮಾರ್, ಸದಸ್ಯರುಗಳಾದ ಸುರೇಶ್, ಪೂರ್ಣೇಶ್, ಹಂಪಯ್ಯ, ಪ್ರೇಂಕುಮಾರ್, ನಿಂಗಯ್ಯ, ಸುರೇಶ್ ಗಾಳಿಪೇಟೆ, ಸುಂದ್ರೇಶ್, ಗುರುವಯ್ಯ, ಪದ್ಮನಾಭ ಮತ್ತಿತರರು ವಹಿಸಿದ್ದರು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ