October 5, 2024

ಮೂಡಿಗೆರೆ ಪಟ್ಟಣ ಪಂಚಾಯಿತಿ ಜೆಡಿಎಸ್ ಸದಸ್ಯೆ ಶ್ರೀಮತಿ ಗೀತಾ ರಂಜನ್ ಅಜಿತ್ ಕುಮಾರ್ ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷವನ್ನು ಸೇರಿದ್ದಾರೆ.

ಶುಕ್ರವಾರ ಸಂಜೆ ಕಾಂಗ್ರೆಸ್ ಕಚೇರಿಯಲ್ಲಿ ಗೀತಾ ಅವರಿಗೆ ಶಾಸಕಿ ನಯನಾ ಮೋಟಮ್ಮ ಅವರು ಕಾಂಗ್ರೆಸ್ ಪಕ್ಷದ ಧ್ವಜವನ್ನು ನೀಡಿ ಪಕ್ಷಕ್ಕೆ ಬರಮಾಡಿಕೊಂಡರು

ಜೆಡಿಎಸ್ ಜಿಲ್ಲಾಧ್ಯಕ್ಷ ರಂಜನ್ ಅಜಿತ್ ಕುಮಾರ್ ಅವರ ಪತ್ನಿ ಗೀತಾ ಮೂಡಿಗೆರೆ ಪಟ್ಟಣ ಪಂಚಾಯತಿಯ ಏಕೈಕ ಜೆಡಿಎಸ್ ಪಕ್ಷದ ಸದಸ್ಯರಾಗಿ ಆಯ್ಕೆಯಾಗಿದ್ದರು.ಇದೀಗ ಅವರು ಕಾಂಗ್ರೆಸ್ ಪಕ್ಷವನ್ನು ಸೇರಿದ್ದಾರೆ.

ಮೂಡಿಗೆರೆ ಪಟ್ಟಣ ಪಂಚಾಯಿತಿ ಅಧ್ಯಕ್ಷ ಸ್ಥಾನವನ್ನು ಪಡೆಯಲು ಆಡಳಿತ ಕಾಂಗ್ರೆಸ್ ಪಕ್ಷ ಕಸರತ್ತು ನಡೆಸುತ್ತಿದ್ದು ಅದರ ಅಂಗವಾಗಿ ಇಂದು ಜೆಡಿಎಸ್ ಪಕ್ಷದ ಸದಸ್ಯೆಯನ್ನು ತನ್ನತ್ತ ಸೆಳೆದಿದೆ.

ಮೂಡಿಗೆರೆ ಪಟ್ಟಣ ಪಂಚಾಯಿತಿ ಅಧ್ಯಕ್ಷ ಸ್ಥಾನ ಸಾಮಾನ್ಯ ಸ್ಥಾನಕ್ಕೆ ಮೀಸಲಾಗಿದ್ದು ಪ್ರಸ್ತುತ ಪಟ್ಟಣ ಪಂಚಾಯಿತಿ ಯಲ್ಲಿ ಬಿಜೆಪಿ ತನ್ನ ಪ್ರಾಬಲ್ಯವನ್ನು ಹೊಂದಿದ್ದು ಬಿಜೆಪಿ ಅಧಿಕಾರ ಹಿಡಿಯದಂತೆ ತಡೆಯಲು ಕಾಂಗ್ರೆಸ್ ಶತಪ್ರಯತ್ನ ಮಾಡುತ್ತಿದೆ.

ಪ್ರಸ್ತುತ ಮೂಡಿಗೆರೆ ಪಟ್ಟಣ ಪಂಚಾಯಿತಿಯಲ್ಲಿ 6 ಮಂದಿ ಬಿಜೆಪಿ ಸದಸ್ಯರು 4 ಮಂದಿ ಕಾಂಗ್ರೆಸ್ ಸದಸ್ಯರು ಹಾಗೂ ಓರ್ವ ಜೆಡಿಎಸ್ ಸದಸ್ಯರು ಇದ್ದರು. ಇದೀಗ ಗೀತಾ ಅವರ ಸೇರ್ಪಡೆಯೊಂದಿಗೆ ಕಾಂಗ್ರೆಸ್ ಪಕ್ಷದ ಬಲ 5 ಏರಿದೆ  ಇನ್ನೂ ಇಬ್ಬರು ಬಿಜೆಪಿ ಸದಸ್ಯರುಗಳನ್ನು ತನ್ನತ್ತ ಸೆಳೆಯಲು ಕಾಂಗ್ರೆಸ್ ಕಸರತ್ತು ನಡೆಸುತ್ತಿದೆ ಎನ್ನಲಾಗಿದೆ.

ಇದೀಗ ಗೀತಾ ರಂಜನ್ ಅಜಿತ್ ಕುಮಾರ್ ಅವರ ಕಾಂಗ್ರೆಸ್ ಸೇರ್ಪಡೆಯಿಂದ ಮೂಡಿಗೆರೆ ಪಟ್ಟಣ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನದ ಚುನಾವಣೆ ಕುತೂಹಲಕ್ಕೆ ಎಡೆಮಾಡಿದೆ.

ಗೀತಾ ಅವರಿಗೆ ಅಧ್ಯಕ್ಷ ಸ್ಥಾನದ ಭರವಸೆಯನ್ನು ನೀಡಿ ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಂಡಿದೆ ಎನ್ನಲಾಗಿದೆ. ಇತ್ತ ಗೀತಾ ಅವರ ಪತಿ ರಂಜನ್ ಅಜಿತ್ ಕುಮಾರ್ ಅವರು ಜೆಡಿಎಸ್ ಜಿಲ್ಲಾಧ್ಯಕ್ಷರಾಗಿದ್ದು ಅವರ ಮುಂದಿನ ರಾಜಕೀಯ ನಡೆ ಏನೆಂಬುದು ಕುತೂಹಲ ಕೆರಳಿಸಿದೆ.

ರಂಜನ್ ಅಜಿತ್ ಅವರ ಸಹೋದರನ ಪತ್ನಿ ದಾರದಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯೆ ಶ್ರೀಮತಿ ನವೀನಾ ಅಶ್ವಥ್ ಅವರು ಸಹ ಗೀತಾ ಅವರೊಂದಿಗೆ ಕಾಂಗ್ರೇಸ್ ಪಕ್ಷವನ್ನು ಸೇರ್ಪಡೆಯಾದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್ ಜಿ ಸುರೇಂದ್ರ  ಕಾಂಗ್ರೆಸ್ ಹಿರಿಯ ಸದಸ್ಯ ಕೆ ವೆಂಕಟೇಶ್ ಸೇರಿದಂತೆ ಪಕ್ಷದ ಅನೇಕ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ