October 5, 2024

ಮೈಸೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ವಿಭಾಗದ ನಿವೃತ್ತ ಪ್ರಾಧ್ಯಾಪಕ ಹಾಗೂ ಹೆಸರಾಂತ ಚಿಂತಕ ಪ್ರೊ. ಮಹೇಶ್ ಚಂದ್ರ ಗುರು ಅವರು ಶನಿವಾರ ನಿಧನರಾಗಿದ್ದಾರೆ.

ಕಳೆದ ಕೆಲ ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ‌ 68 ವರ್ಷದ ಪ್ರೊ. ಮಹೇಶ್ ಚಂದ್ರ ಗುರು ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶನಿವಾರ ಸಂಜೆ 7.30 ರ ಸುಮಾರಿಗೆ ಹೃದಯಘಾತದಿಂದ ನಿಧನರಾಗಿದ್ದಾರೆ.

ಮೈಸೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ವಿಭಾಗದಲ್ಲಿ ಪ್ರಾಧ್ಯಾಪಕರಾಗಿದ್ದ ಮಹೇಶ್ ಚಂದ್ರ ಗುರು ಅವರು 2019 ರಲ್ಲಿ ಸೇವೆಯಿಂದ ನಿವೃತ್ತರಾಗಿದ್ದರು.

ನಿವೃತ್ತಿ ಬಳಿಕ ಪ್ರಗತಿಪರ ಚಳವಳಿಗಳಲ್ಲಿ ಮುಂಚೂಣಿಯಲ್ಲಿ ಗುರುತಿಸಿಕೊಂಡಿದ್ದ ಪ್ರೊ.ಮಹೇಶ್‌ ಚಂದ್ರ ಗುರು ಅವರು ಎಡಪಂಥೀಯ ವಾದವನ್ನು ಪ್ರತಿಪಾದಿಸುತ್ತಿದ್ದರು. ತಮ್ಮದೇ ಆದ ಅಭಿಮಾನಿ ಬಳಗವನ್ನು ಹೊಂದಿದ್ದರು. ಅನೇಕ ಬಾರಿ ತಮ್ಮ ಹೇಳಿಕೆಗಳಿಂದ ವಿವಾದಗಳನ್ನು ಮೈಮೇಲೆ ಎಳೆದುಕೊಂಡಿದ್ದರು. ಮೈಸೂರು ದಸರ ಸಂದರ್ಭದಲ್ಲಿ ಮಹಿಷಾ ದಸರ ಎಂಬ ಹೊಸ ಆಚರಣೆಯನ್ನು ಹುಟ್ಟುಹಾಕಲು ಇವರು ಪ್ರಮುಖ ಕಾರಣರಾಗಿದ್ದರು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ