October 5, 2024

40 ವರ್ಷ ಸುಧೀರ್ಘ ರಾಜಕಾರಣದಲ್ಲಿ ಒಂದೇ ಒಂದು ತಪ್ಪು ಮಾಡದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಉತ್ತಮ ಆಡಳಿತ ಸಹಿಸಿಕೊಳ್ಳದೇ ಕೇಂದ್ರ ಸರಕಾರ ರಾಜ್ಯಪಾಲರ ಮೂಲಕ ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಿಲುಕಿಸುವ ಷಡ್ಯಂತ್ರ ಮಾಡಲಾಗಿದೆ ಎಂದು ಮಾಜಿ ಸಚಿವ ಬಿ.ಬಿ.ನಿಂಗಯ್ಯ ಹೇಳಿದರು.

ಅವರು ಭಾನುವಾರ ಮೂಡಿಗೆರೆ ಪಟ್ಟಣದಲ್ಲಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕೇಂದ್ರ ಹಾಗೂ ರಾಜ್ಯಪಾಲರ ವಿರುದ್ಧ ಏರ್ಪಡಿಸಿದ್ದ ಪ್ರತಿಭಟನೆಯಲ್ಲಿ ಮಾತನಾಡಿದರು.

ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪಾತ್ರವಿಲ್ಲ. ಇದನ್ನು ತನಿಖೆ ನಡೆಸಲು ಸ್ವತಃ ಮುಖ್ಯಮಂತ್ರಿಗಲೇ ಆದೇಶ ಮಾಡಿದ್ದಾರೆ. ಅಲ್ಲದೇ ಮುಡಾ ಹಗರಣದ ಬಗ್ಗೆ ಮುಖ್ಯಮಂತ್ರಿಗಳು 2 ಗಂಟೆ ಪ್ರೆಸ್ ಮೀಟ್ ಮಾಡಿ ಎಲ್ಲಾ ವಿಚಾರ ವಿವರಣೆಯಾಗಿ ನೀಡಿದ್ದಾರೆ. ಆದರೂ ಮುಖ್ಯಮಂತ್ರಿಗಳ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‍ಗೆ ಅನುಮತಿ ಕೊಟ್ಟಿರುವುದು ಒಂದು ವ್ಯವಸ್ಥಿತ ಷಡ್ಯಂತರ. ರಾಜಭವನಗಳು ಕೇಂದ್ರ ಸರಕಾರದ ಮಾತು ಕೇಳುತ್ತಿದ್ದು, ಇದು ಪ್ರಜಾಪ್ರಭುತ್ವದ ಕಗ್ಗೋಲೆಯಾಗಿದೆ ಕಿಡಿ ಕಾರಿದರು.

ಬಿಜೆಪಿಯವರು ಒಂದೇ ಒಂದು ಜನಪರವಾದ ಹೋರಾಟ ಮಾಡಿಲ್ಲ. ಬದಲಾಗಿ ಜನರ ದಿಕ್ಕು ತಪ್ಪಿಸುವ ಹೋರಾಟಗಳೇ ಹೆಚ್ಚಾಗಿ ಮಾಡಿದ್ದಾರೆ. ಇದರಿಂದ ರಾಜ್ಯದ ಜನರಿಗೆ ಯಾವುದೇ ಲಾಭವಿಲ್ಲ. ಅಲ್ಲದೇ ಇಡಿ, ಸಿಬಿಐ ಸಂಸ್ಥೆ ದುರುಪಯೋಗಪಡಸಿಕೊಂಡು ವಿರೋಧ ಪಕ್ಷದ ನಾಯಕರ ಮೇಲೆ ಬಲ ಪ್ರಯೋಗ ಮಾಡುತ್ತಿರುವುದನ್ನು ಜನರು ಗಮನಿಸುತ್ತಿದ್ದಾರೆ. ನಮ್ಮ ನಾಯಕ ರಾಹುಲ್ ಗಾಂಧಿ ಅವರು ಸಂಸತ್‍ನಲ್ಲಿ ಕೇಂದ್ರಕ್ಕೆ ಚಾಟಿ ಬೀಸುತ್ತಿರುವುದರಿಂದ ಬಿಜೆಪಿಯವರಿಗೆ ತಲೆ ನೋವಾಗಿದೆ. ಅವರ ಪಾಪದ ಕೊಡ ತುಂಬಿದೆ. ಹಾಗಾಗಿ ಬಿಜೆಪಿಯವರು ಪ್ರಾಯಶ್ಚಿತದ ಪಾದಯಾತ್ರೆ ನಡೆಸುತ್ತಿದ್ದಾರೆಂದು ಹೇಳಿದರು.

ಮಾಜಿ ಶಾಸಕ ಎಂ.ಪಿ.ಕುಮಾರಸ್ವಾಮಿ. ದೇಶದಲ್ಲಿ ಯಾವ ರಾಜ್ಯವೂ ಮಾಡದಂತಹ ಉತ್ತಮ ಆಡಳಿತ ಸಿಎಂ ಸಿದ್ದಾರಾಮಯ್ಯ ಮಾಡಿದ್ದಾರೆ. ಗ್ಯಾರಂಟಿ ಯೋಜನೆ ಎಲ್ಲಾ ಸಮುದಾಯದ ಜನರು ಪಡೆದುಕೊಳ್ಳುತ್ತಿದ್ದು, ಕಾಂಗ್ರೆಸ್ ಸರಕಾರದ ಏಳಿಗೆ ಸಹಿಸಿಕೊಳ್ಳಲು ಸಾಧ್ಯವಾಗದೇ ಬಿಜೆಪಿಯವರಿಗೆ ಭಯ ಶುರುವಾಗಿದೆ. ಹಾಗಾಗಿ ಸಿಎಂ ಸಿದ್ದರಾಮಯ್ಯ ಅವರನ್ನು ಮುಡಾ ಹಗರಣದಲ್ಲಿ ಸಿಲುಕಿಸುವ ತಂತ್ರ ನಡೆದಿದೆ. ಇದಕ್ಕೆ ನಾವು ಜಗ್ಗುವುದಿಲ್ಲ. ರಾಜ್ಯಪಾಲರು ಕೈ ಗೊಂಡಿರುವ ನಿರ್ಧಾರ ಕೂಡಲೇ ಕೈ ಬಿಡಬೇಕು. ಇಲ್ಲವಾದರೆ ಮುಂದಿನ ದಿನದಲ್ಲಿ ಉಗ್ರ ಸ್ವರೋಪದ ಹೋರಾಟ ನಡೆಸುವುದು ಅನಿವಾರ್ಯ ಎಂದು ಎಚ್ಚರಿಕೆ ನೀಡಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಜಿ.ಸುರೇಂದ್ರ, ಮುಖಂಡರಾದ ಬಿ.ಎಸ್.ಜಯರಾಂಗೌಡ, ಎಂ.ಎಸ್.ಅನಂತ್, ಮುದಾಫಿರ್, ಪೂರ್ಣೇಶ್, ಸುಬ್ಬಯ್ಯ, ಸಂಪತ್ ಬಿಳಗುಳ, ಕುಮಾರ್, ಅಕ್ರಮ್‍ಹಾಜಿ, ಎ.ಜಿ.ಸುಬ್ರಾಯಗೌಡ, ಕೆ.ಪಿ. ಶಿವಕುಮಾರ್, ಚಂದ್ರಶೇಖರ್, ಸುಬ್ರಮಣ್ಯ, ಸುರೇಶ್ ಜೈನ್,  ದೀಕ್ಷಿತ್ ಕಣಚೂರು, ರವಿ ಕುನ್ನಳ್ಳಿ, ಸಿ.ಕೆ.ಇಬ್ರಾಹಿಂ, ಷಣ್ಮುಖಾನಂದ, ಕುನ್ನಳ್ಳಿ ಶ್ರೀನಿವಾಸ್, ದೇವರಾಜ್ ಸಬ್ಲಿ, ಬಿ.ಎ.ಉಮರ್, ಸುಧೀರ್ ಚಕ್ರಮಣಿ ಮತ್ತಿತರರಿದ್ದರು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ