October 5, 2024

ವಿವಾಹಿತ ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ವರದಕ್ಷಿಣೆ ಕಿರುಕುಳ ಪ್ರಕರಣ ದಾಖಲಾಗಿದೆ. ಮೂಡಿಗೆರೆ ತಾಲ್ಲೂಕಿನ ಬಾಳೂರು ಪೊಲೀಸ್ ಠಾಣಾ ವ್ಯಾಪ್ತಿಯ ಮಾವಿನಕೂಡಿಗೆ ಗ್ರಾಮದಲ್ಲಿ ಸೋಮವಾರ ಈ ಘಟನೆ ನಡೆದಿದೆ.

ಸೋಮವಾರ ಸಂಜೆ ವಿವಾಹಿತ ಮಹಿಳೆ ಸುಬೀಕ್ಷಾ (26 ವರ್ಷ) ತನ್ನ ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಸಾವನ್ನಪ್ಪಿದ್ದು, ಈ ಸಾವಿನ ಬಗ್ಗೆ ಆಕೆಯ ತವರು ಮನೆಯವರು ಅನುಮಾನ ವ್ಯಕ್ತಪಡಿಸಿ ಬಾಳೂರು ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮೃತ ಸುಭೀಕ್ಷಾ ತಂದೆ ಚಿನ್ನೇಗೌಡ ತನ್ನ ಮಗಳಿಗೆ ಪತಿ, ಮಾವ ಮತ್ತು ಅತ್ತೆ ನಿರಂತರವಾಗಿ ವರದಕ್ಷಿಣೆ ಕಿರುಕುಳ ನೀಡುತ್ತಿದ್ದರು, ತನ್ನ ಮಗಳ ಸಾವಿನ ಬಗ್ಗೆ ಅನುಮಾನವಿದ್ದು ತಪ್ಪಿತಸ್ತರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ದೂರು ನೀಡಿದ್ದಾರೆ.

ದೂರಿನ ಆಧಾರದ ಮೇಲೆ ಬಾಳೂರು ಪೊಲೀಸರು ಮೃತ ಸುಭೀಕ್ಷಾ ಪತಿ ಎಂ.ಸಿ.ಪ್ರವೀಣ, ಮಾವ ಚಂದ್ರೇಗೌಡ ಮತ್ತು ಅತ್ತೆ ಲಕ್ಷ್ಮೀ ವಿರುದ್ಧ ಪ್ರಕರಣ ದಾಖಲಿಸಿ ವಶಕ್ಕೆ ಪಡೆದು ವಿಚಾರಣೆ ಕೈಗೊಂಡಿದ್ದಾರೆ.

ಸಾವಿನ ಬಗ್ಗೆ ಅನುಮಾನ ಇರುವ ಹಿನ್ನಲೆಯಲ್ಲಿ ಮೂಡಿಗೆರೆ ತಹಸೀಲ್ದಾರ್ ಮತ್ತು ಡಿವೈಎಸ್ಪಿ ಅವರ ಸಮ್ಮುಖದಲ್ಲಿ ಬೆರಳಚ್ಚು ತಜ್ಞರು ಪರಿಶೀಲನೆ ನಡೆಸಿದ ನಂತರ ಮೃತದೇಹವನ್ನು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕೊಂಡೊಯ್ಯಲಾಗುತ್ತದೆ ಎಂದು ತಿಳಿದುಬಂದಿದೆ. ಸುಬೀಕ್ಷಾ ಸಾವಿನ ಬಗ್ಗೆ ಸಂಬಂಧಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ನೂರಾರು ಮಂದಿ ಮನೆ ಮುಂದೆ ಜಮಾಯಿಸಿದ್ದಾರೆ.

ಕಳಸ ತಾಲ್ಲೂಕು ಸಂಸೆ ಸಮೀಪದ ಮಲವಂತಿಗೆ ಗ್ರಾಮದ ಚಿನ್ನೇಗೌಡ ಅವರ ಮಗಳು ಸುಬೀಕ್ಷಾ (ಬಣಕಲ್ ಹೋಬಳಿ ಬಿನ್ನಡಿ ಗ್ರಾಮದ ವೆಂಕಟೇಶ್ ಅವರ ಅಕ್ಕನ ಮಗಳು) ಅವರನ್ನು 2020ರ ಮೇ 29ರಂದು ಬಾಳೂರು ಹೋಬಳಿ ಮರ್ಕಲ್ ಗ್ರಾಮದ ಚಂದ್ರೇಗೌಡ ಅವರ ಪುತ್ರ ಪ್ರವೀಣ್ ಗೆ ವಿವಾಹ ಮಾಡಿಕೊಡಲಾಗಿತ್ತು. ದಂಪತಿಗಳಿಗೆ 3 ವರ್ಷದ ಮಗುವಿದೆ.

ಸುಬೀಕ್ಷಾ ಸಾವಿಗೆ ಕುಟುಂಬದವರ ಕಿರುಕುಳವೇ ಕಾರಣ ಎಂದು ಆಕೆಯ ತಂದೆ ಚಿನ್ನೇಗೌಡ, ಸಹೋದರ ನಿರಂಜನ್ ಮತ್ತು ಸಂಬಂಧಿಕರು ಆರೋಪಿಸುತ್ತಿದ್ದು, ತಪ್ಪಿತಸ್ತರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದಾರೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ