October 5, 2024

ಸೆಪ್ಟಂಬರ್ 2 ರಿಂದ ಎನಿವೇರ್‌ ನೋಂದಣಿ ವ್ಯವಸ್ಥೆಯನ್ನು ರಾಜ್ಯಾದ್ಯಂತ ವಿಸ್ತರಿಸಲಾಗುವುದು. ರಾಜ್ಯದಲಿ 252 ಉಪ ನೋಂದಣಾಧಿಕಾರಿ ಕಚೇರಿ ಇದೆ. ಆದರೆ, ಈ ಪೈಕಿ 50 ಕಚೇರಿಗಳಲ್ಲಿ ಮಾತ್ರ ಸಿಬ್ಬಂದಿಗೆ ಹೆಚ್ಚು ಕೆಲಸದ ಒತ್ತಡ ಇದೆ. ಹೀಗಾಗಿ ಆ ಕಚೇರಿಗಳಿಗೆ ಬರುವ ಜನರಿಗೆ ಅನಾನುಕೂಲವಾಗುತ್ತಿದೆ. ಸಮಯಕ್ಕೆ ಸರಿಯಾಗಿ ಕೆಲಸ ಆಗಲ್ಲ, ಕಾಯಬೇಕು, ಮಧ್ಯವರ್ತಿಗಳ ಕಾಟ ಇದೆ ಎಂಬ ದೂರುಗಳಿವೆ. ಇದೇ ಕಾರಣಕ್ಕೆ ಎನಿವೇರ್‌ ನೋಂದಣಿ ವ್ಯವಸ್ಥೆಗೆ ಚಾಲನೆ ನೀಡಲಾಯಿತು ಎಂದರು.

ಆಸ್ತಿ ನೋಂದಣಿಗೆ ಮುಂದಾಗುವ ವ್ಯಕ್ತಿ ತನ್ನ ಜಿಲ್ಲೆ ವ್ಯಾಪ್ತಿಯ, ತನಗೆ ಅನುಕೂಲವಾಗುವ ಹಾಗೂ ಜನಸಂದಣಿ ಇಲ್ಲದ ಯಾವುದೇ ಉಪನೋಂದಣಿ ಕಚೇರಿಗೆ ತೆರಳಿ ಆನ್‌ಲೈನ್‌ ಮೂಲಕ ಸಮಯ ಕಾಯ್ದಿರಿಸಿ ತನ್ನ ಆಸ್ತಿ ನೋಂದಣಿ ಮಾಡಿಕೊಳ್ಳಲು ಎನಿವೇರ್ ಅಡಿಯಲ್ಲಿ ಅವಕಾಶ ಕಲ್ಪಿಸಲಾಗಿದೆ. ಅಲ್ಲದೆ, ಈ ಯೋಜನೆಯನ್ನು ಫೆಬ್ರವರಿಯಿಂದಲೇ ತುಮಕೂರು ಹಾಗೂ ಬೆಳಗಾವಿಯಲ್ಲಿ ಪ್ರಯೋಗಿಕವಾಗಿ ಚಾಲನೆ ನೀಡಲಾಗಿತ್ತು. ಆ ಪ್ರಯೋಗ ಯಶಸ್ವಿಯಾದ ಹಿನ್ನೆಲೆಯಲ್ಲಿ ಎನಿವೇರ್‌ ನೋಂದಣಿಯನ್ನು ಇದೀಗ ಎಲ್ಲಾ ಜಿಲ್ಲೆಯಲ್ಲೂ ವಿಸ್ತರಿಸಲು ನಿರ್ಧರಿಸಲಾಗಿದೆ. ಇದರಿಂದ ಕಚೇರಿಯಲ್ಲಿ ಜನಜಂಗುಳಿ, ಸಿಬ್ಬಂದಿಗೆ ಕೆಲಸದ ಒತ್ತಡ ಕಡಿಮೆ ಮಾಡಿ ಸುಲಲಿತವಾಗಿ ಜನರಿಗೆ ನೋದಂಣಿ ಕೆಲಸ ಆಗಲು ಈ ಯೋಜನೆ ಸಹಕಾರಿ ಆಗಲಿದೆ ಎಂದು ಮಾಹಿತಿ ನೀಡದರು.

ಕಂದಾಯ ಇಲಾಖೆಯಲ್ಲಿ ಜನಸ್ನೇಹಿ ಆಡಳಿತ ನೀಡುವ ನಿಟ್ಟಿನಲ್ಲಿ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲಾಗುತ್ತಿದೆ. ಈ ಹಿಂದೆ ಆಸ್ತಿ ನೋಂದಣಿ ಅವಧಿಯನ್ನು ಕಡಿತಗೊಳಿಸಿ ಜನರ ಕೆಲಸಗಳಿಗೆ ವೇಗ ನೀಡುವ ನಿಟ್ಟಿನಲ್ಲಿ ಕಾವೇರಿ-2 ತಂತ್ರಜ್ಞಾನವನ್ನು ಜಾರಿಗೆ ತರಲಾಗಿತ್ತು. ಇದೀಗ ಮತ್ತೊಮ್ಮೆ ಜನರಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಆರ್‌ಟಿಸಿಗೆ ‘ಆಧಾರ್‌ ಜೋಡಣೆ’ ಹಾಗೂ ‘ಎನಿವೇರ್‌ ನೋಂದಣಿ’ ವ್ಯವಸ್ಥೆಗೆ ಚಾಲನೆ ನೀಡಲಾಗುತ್ತಿದೆ ಎಂದು ಹೇಳಿದರು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ