October 5, 2024

ಅಮೆರಿಕದ ಕನ್ನಡ ಕೂಟಗಳ ಆಗರ (ಅಕ್ಕ) ನಡೆಸುವ 12ನೇ ವಿಶ್ವ ಕನ್ನಡ ಸಮೇಳನ ಅಮೆರಿಕದ ವರ್ಜಿನಿಯಾ ರಾಜ್ಯದ ಗ್ರೇಟರ್‌ ರಿಚಂಡ್‌ ಕನ್ವೆನ್ಷನ್ ಸೆಂಟರ್‌ನಲ್ಲಿ ಅದ್ಧೂರಿಯಾಗಿ ನಡೆದಿದೆ.

ಅಮೆರಿಕದಲ್ಲಿ ನೆಲೆಸಿರುವ ಕನ್ನಡಿಗರು ಒಗ್ಗೂಡಿ ನಡೆಸುತ್ತಿರುವ ಈ ವಿಶ್ವ ಕನ್ನಡ ಸಮೇಳನಕ್ಕೆ ಅತ್ಯಂತ ಉತ್ಸಾಹ ಕಂಡುಬಂದಿದ್ದು, ಕನ್ನಡ ನಾಡಿನ ಹಿರಿಮೆ, ಗರಿಮೆ, ಸಾಹಿತ್ಯ, ಸಂಗೀತದ ಮತ್ತು ಸಂಸ್ಕೃತಿ ಅನಾವರಣಗೊಂಡಿದೆ.

ಎಲ್ಲೆಡೆ ಕನ್ನಡ ಬಾವುಟ ರಾರಾಜಿಸುತ್ತಿದ್ದು, ಉದ್ಘಾಟನೆಗೆ ಮುನ್ನ ನಡೆದ ಮೆರವಣಿಗೆಯಲ್ಲಿ ಸಾಂಪ್ರದಾಯಿಕ ಉಡುಗೆ ತೊಟ್ಟು ನೂರಾರು ಮಂದಿ ಕನ್ನಡಿಗರು ಭಾಗವಹಿಸಿದ್ದು ಎಲ್ಲರನ್ನೂ ಚಕಿತಗೊಳಿಸಿತು.

ವಿಶ್ವದ ಶ್ರೀಮಂತ ರಾಷ್ಟ್ರ ಅಮೆರಿಕದಲ್ಲಿ ನಡೆಯುತ್ತಿರುವ ಮೂರು ದಿನಗಳ ಈ ಕನ್ನಡ ಸಮೇಳನದಲ್ಲಿ ರಾಜ್ಯದಿಂದಲೂ ಕಲಾವಿದರು, ಸಾಹಿತಿಗಳು, ಜನಪ್ರತಿನಿಧಿಗಳು ಭಾಗವಹಿಸಿದ್ದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ವಚನಾನಂದ ಸ್ವಾಮೀಜಿ, ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್‌ ತಂಗಡಗಿ, ಕೃಷಿ ಸಚಿವ ಚಲುವನಾರಾಯಣಸ್ವಾಮಿ, ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷ ಡಾ.ಮಹೇಶ್‌ ಜೋಷಿ, ಅಕ್ಕ ಅಧ್ಯಕ್ಷ ರವಿ ಬೋರೇಗೌಡ, ಸಂಸ್ಥಾಪಕ ಅಧ್ಯಕ್ಷ ಅಮರನಾಥ್‌ಗೌಡ ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ದರು.

 

ಕನ್ನಡದ ಕಂಪನ್ನು ಹರಿಸಿರುವ ಅಮೇರಿಕದ ವಿವಿಧ ರಾಜ್ಯಗಳಲ್ಲಿ ನೆಲೆಸಿರುವ ಕನ್ನಡಿಗರು, ಉದ್ಯಮಿಗಳು ಕೂಡ ಜೊತೆಯಾಗಿ ಸಂಭ್ರಮದಿಂದ ಚಾಲನೆ ನೀಡಲಾಯಿತು.

ಸಮ್ಮೇಳನದ ಅಂಗವಾಗಿ ನಡೆದ ಭವ್ಯ ಮೆರವಣಿಗೆಯಲ್ಲಿ ಕನ್ನಡ ಸಂಸ್ಕೃತಿಯನ್ನು ಅನಾವರಣಗೊಳಿಸಲಾಗಿತ್ತು. ಸಾರೋಟ್‌ನಲ್ಲಿ ಭುವನೇಶ್ವರಿ ದೇವಿಯ ಮೆರವಣಿಗೆ ಎಲ್ಲರ ಗಮನ ಸೆಳೆದರೆ ಇನ್ನು ಮಹಿಳೆಯರು ಸಾಂಪ್ರದಾಯಿಕ ಸೀರೆ ಉಟ್ಟು, ತಲೆ ಮೇಲೆ ಕಳಸ ಹೊತ್ತು ಹೊಸ ಮೆರಗು ನೀಡಿದರು.ಕನ್ನಡಾಂಬೆಯ ಜಯಘೋಷಗಳು, ಹಲವು ಜ್ಞಾಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿಗಳ ಚಿತ್ರಗಳನ್ನು ಹಿಡಿದು ಮಕ್ಕಳು ಕನ್ನಡ ಪ್ರೇಮವನ್ನು ಪ್ರದರ್ಶಿಸಿದರು. ಇದೇ ವೇಳೆ ಸಾಂಸ್ಕೃತಿಕ ಕಲಾ ತಂಡಗಳು ಕೂಡ ಆಕರ್ಷಿಸಿತು. ಸುಮಾರು 1 ಕಿ.ಮೀ ನಡೆದ ಈ ಮೆರವಣಿಗೆಯಲ್ಲಿ ನೂರಾರು ಮಂದಿ ಪಾಲ್ಗೊಂಡು ನಮ ಕನ್ನಡದ ಹಿರಿಮೆಯನ್ನು ಹೆಚ್ಚಿಸಿದರು.

ನಮ್ಮ ಚಿಕ್ಕಮಗಳೂರು ಜಿಲ್ಲೆಯಿಂದ ಸಾಹಿತಿ ಚಟ್ನಳ್ಳಿ ಮಹೇಶ್, ಗಾಯಕಿ ರಶ್ಮಿ ಮಂಜುನಾಥ್ ಸೇರಿದಂತೆ ಹಲವು ಕಲಾವಿದರು, ಶಾಸಕ ಹೆಚ್.ಡಿ. ತಮ್ಮಯ್ಯ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿದ್ದರು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ