October 5, 2024

ತಮ್ಮ ಶಾಲೆಗೆ ಶಿಕ್ಷಕರನ್ನು ನೇಮಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಎದುರಿಗೆ ಬಂದು ಕುಳಿತು ಪ್ರತಿಭಟನೆ ನಡೆಸಿದ ಅಪರೂಪದ ಘಟನೆ ಚಿಕ್ಕಮಗಳೂರಿನಲ್ಲಿ ಸೋಮವಾರ ನಡೆಯಿತು.

ಚಿಕ್ಕಮಗಳೂರು ತಾಲೂಕಿನ ಮೇಲು ಹುಲುವತ್ತಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮಕ್ಕಳು  ಇದ್ದ ಒಬ್ಬ ಶಿಕ್ಷಕರು ವರ್ಗಾವಣೆಗೊಂಡಿದ್ದು ಯಾರನ್ನೂ ಇನ್ನೂ ನಿಯೋಜನೆ ಮಾಡಿಲ್ಲ, ಇದರಿಂದ ನಮ್ಮ ಶಿಕ್ಷಣಕ್ಕೆ ತೊಂದರೆಯಾಗಿದೆ ಎಂದು  ಬಿ.ಇ.ಓ. ಕಛೇರಿಗೆ ಬಂದು ಕುಳಿತು ಪ್ರತಿಭಟನೆ ನಡೆಸಿದರು.

ಮೇಲು ಹುಲುವತ್ತಿ ಕಿರಿಯ ಪ್ರಾಥಮಿಕ ಶಾಲೆಯ 9 ಮಕ್ಕಳು ಬಂದು ಚಿಕ್ಕಮಗಳೂರು ಬಿಇಓ ಕಚೇರಿಯಲ್ಲಿ ಕುಳಿತು ಪ್ರತಿಭಟನೆ ನಡೆಸಿದರು.

ಇದ್ದ ಒಬ್ಬರು ಟೀಚ‌ರ್ ಕೂಡ ವರ್ಗಾವಣೆ ಮಾಡಿಕೊಂಡು ಹೋಗಿದ್ದಾರೆ ಆ ಸ್ಥಳಕ್ಕೆ ಹೊಸಬರು ಬರೋದಕ್ಕೆ 15 ದಿನ ಆಗುತ್ತೆ ಎಂದು ಹೇಳಲಾಗಿದ್ದು, ಒಬ್ಬರೂ ಟೀಚರ್ ಇಲ್ಲದ ಕಾರಣ ಪೋಷಕರ ಜೊತೆ ಸೇರಿ ಬಿಇಓ ಕಚೇರಿಗೆ ಬಂದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.

ಹೊಸ ಶಿಕ್ಷಕರು ಬರುವ ಮುನ್ನವೇ ಹಳಬರನ್ನ ಹೇಗೆ ರಿಲೀವ್ ಮಾಡಿದ್ರು ಎಂದು ಪೋಷಕರ ಪ್ರಶ್ನೆ ಮಾಡುತ್ತಿದ್ದು, ಮೇಲಿನ ಹುಲುವತ್ತಿ ಮುತ್ತೋಡಿ ಅರಣ್ಯ ವ್ಯಾಪ್ತಿಯ ಕುಗ್ರಾಮವಾಗಿದೆ.

ಶಿಕ್ಷಕರ ವರ್ಗಾವಣೆ ಖಂಡಿಸಿ ವಿದ್ಯಾರ್ಥಿಗಳು ನಡೆಸಿದ ಮುಷ್ಕರ ರಾತ್ರಿ ಅಂತ್ಯ ಕಂಡಿದೆ. ಚಿಕ್ಕಮಗಳೂರು ತಾಲೂಕು ಮೇಲು ಹುಲುವತ್ತಿ, ಕಸ್ಕೆ ಶಾಲೆಯಲ್ಲಿ ಇದ್ದ ಒಬ್ಬರು ಶಿಕ್ಷಕರು ವರ್ಗಾವಣೆಯಾಗಿ ಹೋಗಿದ್ದು, ಶಿಕ್ಷಕರು ಏಳೆಂಟು ದಿನಗಳಿಂದ ಬದಲಿ ಶಿಕ್ಷಕರು ಬಾರದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದರು.

ಶಿಕ್ಷಕರ ವರ್ಗಾವಣೆಯಿಂದ ಶಾಲೆಯಲ್ಲಿ ಪಾಠ ಮತ್ತು ಬಿಸಿ ಊಟ ವ್ಯವಸ್ಥೆ ಇಲ್ಲದ ಹಿನ್ನೆಲೆಯಲ್ಲಿ ಪೋಷಕರೊಂದಿಗೆ ಆಗಮಿಸಿದ ಮಕ್ಕಳು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಾನಕಿರಾಮ್ ನೇತೃತ್ವದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬಳಿ ಪ್ರತಿಭಟನೆ ನಡೆಸಿದ್ದರು.

ರಾತ್ರಿಯಾದರೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ಬಾರದೇ ಇದ್ದು ಅಹೋರಾತ್ರಿ ಧರಣಿಗೆ ಮುಂದಾಗಿದ್ದು ,ಇದನ್ನು ಅರಿತ ಕ್ಷೇತ್ರ ಶಿಕ್ಷಣಾಧಿಕಾರಿಗಳು ರಾತ್ರಿ 8 ಗಂಟೆಗೆ ಬಂದು ಸಮಸ್ಯೆ ಆಲಿಸಿ ಲಿಖಿತ ಭರವಸೆ ನೀಡಿದ ಹಿನ್ನೆಲೆಯಲ್ಲಿ ಮುಷ್ಕರ ಕೈ ಬಿಡಲಾಯಿತು .

ಬಂದ ಮಕ್ಕಳು ಮತ್ತು ಪೋಷಕರಿಗೆ ರಾತ್ರಿ ಊಟ ಮತ್ತು ರಾತ್ರಿ ಮಲಗುವ ವ್ಯವಸ್ಥೆಯನ್ನೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ಕಲ್ಪಿಸಿದರು. ಈ ಸಂದರ್ಭದಲ್ಲಿ ಕೋಟೆ ಸೋಮಣ್ಣ ಇತರರು ಉಪಸ್ಥಿತರಿದ್ದರು

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ