October 5, 2024

ಜಿಂಕೆ ಶಿಕಾರಿ ಮಾಡಿದ ಆರೋಪದಲ್ಲಿ ಮೂವರನ್ನು ಬಂಧಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲ್ಲೂಕಿನಲ್ಲಿ ಈ ಘಟನೆ ನಡೆದಿದೆ.

ಎನ್.ಆರ್.ಪುರ ತಾಲ್ಲೂಕಿನ ಸಾಲೂರು ಗ್ರಾಮದ ಭಕ್ತವಾನಿ ಕಿರು ಅರಣ್ಯದಲ್ಲಿ ಕಾರ್ಯಾಚರಣೆ ನಡೆಸಿದ ಅರಣ್ಯ ಅಧಿಕಾರಿಗಳು ಜಿಂಕೆ ಮಾಂಸವನ್ನು ವಶಪಡಿಸಿಕೊಂಡು ಎಂಟು ಮಂದಿಯ ಮೇಲೆ ಪ್ರಕರಣ ದಾಖಲಿಸಿದ್ದಾರೆ. ಮೂವರನ್ನು ಬಂಧಿಸಿದ್ದಾರೆ.

ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅರಣ್ಯ ಅಧಿಕಾರಿಗಳು ಅರಣ್ಯದಲ್ಲಿ ಜಿಂಕೆಯನ್ನು ಕೊಂದು ಮಾಂಸವನ್ನು ಹಸನು ಮಾಡುತ್ತಿದ್ದ 8 ಮಂದಿಯನ್ನು ಗುರುತಿಸಿದ್ದಾರೆ. ದಾಳಿಯ ಸಂದರ್ಭದಲ್ಲಿ ಐದು ಮಂದಿ ಪರಾರಿಯಾಗಿದ್ದು, ಮೂರು ಮಂದಿಯನ್ನು ವಶಕ್ಕೆ ಪಡೆಯಲಾಗಿದೆ.

ಹೊನ್ನೆಕೂಡಿಗೆ ಗ್ರಾಮ ಪಂಚಾಯಿತ ವ್ಯಾಪ್ತಿಯ ಬಿಳಾಲು ಕೊಪ್ಪದ ಲಕ್ಕುಂದ ಮಂಜುನಾಥ್, ನಂದೀಶ್ ಮತ್ತು ಮಂಜುನಾಥ್ ಬಂಧಿತ ಆರೋಪಿಗಳು, ಉಳಿದವರ ಬಂಧನಕ್ಕೆ ಬಲೆ ಬೀಸಲಾಗಿದೆ.

ಕೊಪ್ಪ ಡಿ.ಎಫ್.ಓ ನಂದೀಶ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಯಿತು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ