October 5, 2024

ಸೆಪ್ಟಂಬರ್ ಒಂದರಂದು ತರೀಕೆರೆ ಪಟ್ಟಣದ ಗೌಡಹನುಮಯ್ಯನ ಬೀದಿಯಲ್ಲಿ ಮನೆಯಲ್ಲಿಟ್ಟಿದ್ದ 3.08 ಲಕ್ಷ ಮೌಲ್ಯದ ಚಿನ್ನಾಭರಣ ಕಳವು ಮಾಡಿದ್ದ ಪ್ರಕರಣ ನಡೆದಿತ್ತು. ಈ ಬಗ್ಗೆ ತರೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತರೀಕೆರೆ ಪೊಲೀಸರು ಕಳವು ಪ್ರಕರಣವನ್ನು ಕೆಲವೇ ಗಂಟೆಗಳಲ್ಲಿ ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಮನೆಯಲ್ಲಿಟ್ಟಿದ್ದ ಚಿನ್ನಾಭರಣವನ್ನು ಮಹಿಳೆಯೊಬ್ಬಳು ಕಳುವು ಮಾಡಿರುವುದು ಪತ್ತೆಯಾಗಿದೆ. ಘಟನೆ ನಡೆದು ಕೆಲವೇ ಗಂಟೆಗಳಲ್ಲಿ ಪೊಲೀಸರು ಚಿನ್ನಾಭರಣ ಕಳ್ಳತನ ಮಾಡಿದ್ದ ಮಹಿಳೆಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಹಿಳೆಯಿಂದ ಕಳುವು ಮಾಡಿದ್ದ ಚಿನ್ನಾಭರಣಗಳನ್ನು ವಶಕ್ಕೆ ಪಡೆಯಲಾಗಿದೆ.

ಕಳವು ಪ್ರಕರಣವನ್ನು ಪತ್ತೆ ಮಾಡಿದ ಪೊಲೀಸ್ ತಂಡದಲ್ಲಿ ಇನ್ಸ್ ಪೆಕ್ಟರ್   ವೀರೇಂದ್ರ ಎನ್, ಪಿಎಸ್ಐ  ಬಸನಗೌಡ ಬಗಲಿ ಮತ್ತು ಪೊಲೀಸ್ ಸಿಬ್ಬಂದಿಗಳಾದ   ಧನಂಜಯ ಸ್ವಾಮಿ,   ರಿಯಾಜ್ ಮತ್ತು   ರಾಮು ರವರು ಕಾರ್ಯನಿರ್ವಹಿಸಿರುತ್ತಾರೆ. ತರೀಕೆರೆ ಪೊಲೀಸರ ಕಾರ್ಯಾಚರಣೆಗೆ ಜಿಲ್ಲಾ ಪೊಲೀಸ್ ಎಸ್ಪಿಯವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ