October 5, 2024

ಸುಪ್ರೀಂ ಕೋರ್ಟ್ ಆದೇಶದನ್ವಯ ಪರಿಶಿಷ್ಟ ಜಾತಿಯೊಳಗಿನ ಉಪಜಾತಿಗಳಿಗೆ ಒಳ ಮೀಸಲಾತಿಯನ್ನು ಶೀಘ್ರವೇ ಜಾರಿಗೊಳಿಸಲು ರಾಜ್ಯ ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿ ದಸಂಸ ಮುಖಂಡರುಗಳು ಚಿಕ್ಕಮಗಳೂರು ನಗರದ ಆಜಾದ್‌ಪಾರ್ಕ್ ವೃತ್ತದಲ್ಲಿ ಗುರುವಾರ ತಮಟೆ ಬಾರಿಸುವ ಮೂಲಕ ಚಳುವಳಿ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ದಸಂಸ ಜಿಲ್ಲಾ ಸಂಚಾಲಕ ಎಲ್.ಎಸ್.ಶ್ರೀಕಾಂತ್ ಸುಪ್ರೀಂ ಕೋರ್ಟ್‌ನ ತೀರ್ಪು ಐತಿಹಾಸಿಕವಾಗಿದೆ. ಕೂಡಲೇ ರಾಜ್ಯ ಸರ್ಕಾರ ಅನುಷ್ಟಾನ ಹಾಗೂ ಹಕ್ಕೋತ್ತಾಯಗಳನ್ನು ಈಡೇರಿಕೆಗೆ ಆಗ್ರಹಿಸಿ ರಾಜ್ಯಾದ್ಯಂತ ಜಿಲ್ಲಾ ಕೇಂದ್ರಗಳಲ್ಲಿ ಏಕಕಾಲ ಚಳುವಳಿ ಹಮ್ಮಿಕೊಂಡು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗುತ್ತಿದೆ ಎಂದರು.

ಕಳೆದ ಮೂವತ್ತು ವರ್ಷಗಳಿಂದ ದಸಂಸ ಹೋರಾಟಕ್ಕೆ ಜಯ ಸಿಕ್ಕಿದೆ. ಅಲ್ಲದೇ ಮೀಸಲಾತಿ ವ್ಯವಸ್ಥೆ ಯಲ್ಲಿ ಬಹಳ ಮುಖ್ಯವಾದ ಹೆಜ್ಜೆಯಾಗಿದೆ. ಹಿಂದೆ ಈ ವಿಚಾರವಾಗಿ ಪರಸ್ಪರ ವಿರುದ್ಧವಾದ ತೀರ್ಪು ಗಳನ್ನು ನ್ಯಾಯಾಲಯಗಳು ನೀಡಿದ್ದವು. ಇದೀಗ ಸಿಜೆಐ ಡಿ.ವೈ.ಚಂದ್ರಚೂಡ್ ನೇತೃತ್ವದ ಏಳು ನ್ಯಾಯ ಮೂರ್ತಿಗಳ ಸಂವಿಧಾನಿಕ ಪೀಠವು ಈ ವಿಚಾರದಲ್ಲಿ ಗೊಂದಲ ಪರಿಹರಿಸಿದೆ ಎಂದು ತಿಳಿಸಿದರು.

ಪ್ರಸ್ತುತ ಪರಿಶಿಷ್ಟ ಜಾತಿಗಳಲ್ಲಿ ನೂರಾರು ಉಪಜಾತಿಗಳಿವೆ. ಒಪ್ಪಿತವಾದ ಮಾನದಂಡಗಳು ಮತ್ತು ವಿಧಾನಗಳ ಮೂಲಕ ತುಲನಾತ್ಮಕವಾಗಿ ಜಾತಿಗಳ ಹಿಂದುಳಿದಿರುವಿಕೆಯನ್ನು ನಿರ್ಣಯಿಸಬೇಕು. ಈ ಮಾನ ದಂಡಗಳು ಸರ್ಕಾರದಲ್ಲಿನ ಪ್ರಾತಿನಿಧ್ಯ ಮತ್ತು ಶಿಕ್ಷಣಕ್ಕೆ ಸೀಮಿತವಾಗಿರಬಾರದು. ಸಾಮಾಜಿಕ ಸ್ಥಾನಮಾನ ವನ್ನು ಗಣನೆಗೆ ತೆಗೆದುಕೊಳ್ಳಬೇಕು ಎಂದು ನ್ಯಾಯಾಲಯದ ತೀರ್ಪಿನಲ್ಲಿ ಎಂದು ಹೇಳಿದರು.

ಒಳ ಮೀಸಲಾತಿ ನೀಡುವ ಸಂಬಂಧ ಸಂವಿಧಾನಕ್ಕೆ ತಿದ್ದುಪಡಿ ತರಬೇಕು ಎಂದು ಹಿಂದೆ ಮುಖ್ಯ ಮಂತ್ರಿಗಳು ಆಗ್ರಹಿಸಿದ್ದರು. ಆದರೆ ಒಳಮೀಸಲಾತಿ ಕುರಿತು ಇದ್ಧ ಗೊಂದಲಗಳಿಗೆ ಸುಪ್ರೀಂ ಕೋರ್ಟ್ ತೆರೆ ಎಳೆದದೆ. ಹೀಗಾಗಿ ಕೋರ್ಟ್ ಆದೇಶ ಹೊರಡಿಸಿ ತಿಂಗಳು ಕಳೆದರೂ ರಾಜ್ಯ ಸರ್ಕಾರ ಆದೇಶವನ್ನು ಅನು ಷ್ಟಾಗೊಳಿಸದೇ ಬೇಜವಾಬ್ದಾರಿ ತೋರುತ್ತಿದೆ ಎಂದು ದೂರಿದರು.

ದಸಂಸ ಸಂಸ್ಥಾಪಕ ಪ್ರೊ.ಕೃಷ್ಣಪ್ಪನವರ ಜನ್ಮದಿನವನ್ನು ರಾಜ್ಯಸರ್ಕಾರ ಸರ್ಕಾರಿ ಕಾರ್ಯಕ್ರಮವಾಗಿ ಆಚರಿಸಬೇಕು. ಜೊತೆಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಬೇಕು. ಬಾಕಿ ಉಳಿದಿರುವ ಬ್ಯಾಕ್ ಲಾಗ್ ಹುದ್ದೆಗಳನ್ನು ತಕ್ಷಣವೇ ಭರ್ತಿ ಮಾಡಬೇಕು. ಒಳಮೀಸಲಾತಿ ಜಾರಿಯಾಗುವವರೆಗೂ ಎಲ್ಲಾ ಹೊಸ ನೇಮಕಾತಿ ಪ್ರಕ್ರಿಯೆಗಳನ್ನು ತಡೆಹಿಡಿಯಬೇಕು ಎಂದು ಒತ್ತಾಯಿಸಿದರು.

ಬಗರ್‌ಹುಕುಂ ಸಾಗುವಳಿಯನ್ನು ಸಕ್ರಮಗೊಳಿಸಿ ಹಕ್ಕುಪತ್ರ ನೀಡಬೇಕು. ಕಳೆದ ಎರಡ್ಮೂರು ತಲೆ ಮಾರುಗಳಿಂದ ಮೂರ್‍ನಾಲ್ಕು ಎಕರೆ ಅರಣ್ಯ ಭೂಮಿ ಸಾಗುವಳಿ ಮಾಡುತ್ತಾ ಜೀವನ ಸಾಗಿಸುತ್ತಿರುವ ಕೃಷಿ ಕಾರ್ಮಿಕರನ್ನು ದೌರ್ಜನ್ಯದಿಂದ ಒಕ್ಕಲೆಬ್ಬಿಸದೇ ಪರ್ಯಾಯ ಭೂಮಿ ನೀಡಬೇಕು. ಸಮಾಜ ಕಲ್ಯಾಣ ಇ ಲಾಖೆ ವಿದ್ಯಾರ್ಥಿ ವಸತಿ ನಿಲಯ ಮತ್ತು ವಸತಿ ಶಾಲೆಗಳಲ್ಲಿ ಹೊರ ಸಂಪನ್ಮೈಲದಡಿ ಕೆಲಸ ನಿರ್ವಹಿಸು ತ್ತಿರುವ ನೌಕರರನ್ನು ಖಾಯಂಗೊಳಿಸಬೇಕು ಎಂದು ಆಗ್ರಹಿಸಿದರು.

ಇದೇ ವೇಳೆ ಆಜಾದ್‌ಪಾರ್ಕ್ ವೃತ್ತದಿಂದ ಜಿಲಾಧಿಕಾರಿ ಕಚೇರಿವರೆಗೆ ದಸಂಸ ಮುಖಂಡರುಗಳು ತಮಟೆ ಬಾರಿಸುವ ಮೂಲಕ ಶಿರಸ್ತೇದಾರ್ ಹೇಮಂತ್‌ಕುಮಾರ್ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ದಸಂಸ ರಾಜ್ಯ ವಿಭಾಗೀಯ ಸಂಚಾಲಕ ಟಿ.ಮಂಜಪ್ಪ, ಜಿಲ್ಲಾ ಸಂಘಟನಾ ಸಂಚಾಲಕ ನ.ರಾ.ಪುರ ರಾಮು, ಸಂಚಾಲಕಿ ಲತಾ, ತಾಲ್ಲೂಕು ಸಂಚಾಲಕಿ ಪವಿತ್ರ, ಶೃಂಗೇರಿ ಕಾರ್ಯದರ್ಶಿ ಜಾರ್ಜ್, ಜಿಲ್ಲಾ ಮಾದಿಗ ಮಹಾಸಭಾ ಜಿಲ್ಲಾಧ್ಯಕ್ಷ ರಮೇಶ್, ದೌರ್ಜನ್ಯಸಮಿತಿ ಸದಸ್ಯ ರಮೇಶ್, ಮುಖಂಡರುಗಳಾದ ವಕೀಲ ಅನಿಲ್‌ಕುಮಾ ರ್, ಮರ್ಲೆಅಣ್ಣಯ್ಯ, ಲಾರೆನ್ಸ್, ರಾಗಿಣಿ, ಸುಧಾಕರ್, ಬಾಬು, ಗೋವಿಂದಪ್ಪ, ಅಣ್ಣಯ್ಯ, ಪರಮೇಶ್ ಮತ್ತಿತರರಿದ್ದರು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ