October 5, 2024

ರೈತರ ಸಾಗುವಳಿ ಭೂಮಿಯನ್ನು ಖುಲ್ಲಾ ಮಾಡಲು ಮುಂದಾಗಿರುವ ಅರಣ್ಯ ಇಲಾಖೆ ಕ್ರಮ ಮತ್ತು ಕಸ್ತೂರಿ ರಂಗನ್ ವರದಿ ಅಧಿಸೂಚನೆಗೆ ವಿರೋಧ ವ್ಯಕ್ತಪಡಿಸಿ ನೂರಾರು ಬೆಳೆಗಾರರು ಸಭೆ ನಡೆಸಿದರು.

ಪಟ್ಟಣದ ಅಡ್ಯಂತಾಯ ರಂಗಮಂದಿರದ ಆವರಣದಲ್ಲಿ ತಾಲ್ಲೂಕು ಬೆಳೆಗಾರರ ಸಂಘ ಮತ್ತು ವಿವಿಧ ಸಂಘಸಂಸ್ಥೆಗಳ ಸಹಯೋಗದಲ್ಲಿ ಸಭೆ ನಡೆಸಲಾಯಿತು.

ಸಭೆಯಲ್ಲಿ ವಿಧಾನಪರಿಷತ್ ಉಪಸಭಾಪತಿ ಎಂ.ಕೆ. ಪ್ರಾಣೇಶ್ ಅವರು ಮಾತನಾಡಿ ; ಅರಣ್ಯ ಭೂಮಿ ಮತ್ತು ಕಂದಾಯ ಭೂಮಿ ವರ್ಗೀಕರಣವೇ ಆಗಿಲ್ಲ. ಇಲಾಖೆಗಳಿಗೆ ತಮ್ಮ ಭೂಮಿ ಯಾವುದು ಎಂಬುದರ ಬಗ್ಗೆ ಸ್ಪಷ್ಟತೆ ಇಲ್ಲ. ಈ ವಿಷಯದಲ್ಲಿ ಸರ್ಕಾರದ ಮಟ್ಟದಲ್ಲಿ ತೀರ್ಮಾನಗಳು ಆಗಬೇಕು. ಕೇವಲ ಅರಣ್ಯ ಅಧಿಕಾರಿಗಳನ್ನು ದೂಷಿಸಿದರೆ ಸಮಸ್ಯೆ ಬಗೆಹರಿಯುವುದಿಲ್ಲ. ಅಧಿಕಾರಿಗಳು ಸರ್ಕಾರದ ತೀರ್ಮಾನವನ್ನು ಪಾಲಿಸಲು ಮುಂದಾಗುವುದು ಸಹಜ. ಹಾಗಾಗಿ ಎಲ್ಲಾ ಪಕ್ಷದವರು ಒಟ್ಟಾಗಿ ಈ ವಿಚಾರದಲ್ಲಿ ಒಮ್ಮತದಿಂದ ಸರ್ಕಾರದ ಮೇಲೆ ಒತ್ತಡ ತರಬೇಕು ಎಂದರು.

ಮಾಜಿ ಶಾಸಕ ಎಂ.ಪಿ. ಕುಮಾರಸ್ವಾಮಿ ಮಾತನಾಡಿ ; ಕಸ್ತೂರಿ ರಂಗನ್  ವರದಿ ಜಾರಿಯಾದರೆ ಆ ಪ್ರದೇಶಗಳ ಜನರು    ಬಹಳಷ್ಟು ನಿರ್ಬಂಧಗಳ ಅಡಿಯಲ್ಲಿ ಜೀವನ ಮಾಡಬೇಕಾಗುತ್ತದೆ. ಈಗಿರು ಕಾನೂನುಗಳಲ್ಲಿಯೇ ಪರಿಸರ ಉಳಿಸಲು ಸಾಕಷ್ಟು ಅವಕಾಶಗಳು ಇವೆ. ಹೊಸ ಕಾನೂನುಗಳ ಅವಶ್ಯಕತೆ ಇಲ್ಲ. ಆದ್ದರಿಂದ ಕಸ್ತೂರಿ ರಂಗನ್ ವರದಿಯನ್ನು ಪೂರ್ಣ ಪ್ರಮಾಣದಲ್ಲಿ ತಿರಸ್ಕರಿಸಬೇಕು ಎಂದರು.

ಮೂಡಿಗೆರೆ ಬೆಳೆಗಾರರ ಸಂಘದ ಅಧ್ಯಕ್ಷ ಬಿ.ಆರ್. ಬಾಲಕೃಷ್ಣ ಮಾತನಾಡಿ ; ರೈತರು ಕಷ್ಟಪಟ್ಟು ಸಾಗುವಳಿ ಮಾಡಿರುವ ಭೂಮಿಯನ್ನು ಅರಣ್ಯ ಇಲಾಖೆ ಒತ್ತಾಯಪೂರ್ವಕವಾಗಿ ತೆರವುಗೊಳಿಸಲು ಮುಂದಾಗಿದೆ. ಸರ್ಕಾರ ಒತ್ತುವರಿ ಭೂಮಿ ಗುತ್ತಿಗೆ ಆಧಾರದಲ್ಲಿ ನೀಡಲು ಕಾಯ್ದೆ ರೂಪಿಸಿ ಅರ್ಜಿ ಆಹ್ವಾನಿಸಿದೆ. ಇಂತಹ ಸಂದರ್ಭದಲ್ಲಿ ಅರಣ್ಯ ಮತ್ತು ಕಂದಾಯ ಭೂಮಿ ಗಡಿಗುರುತು ಸರಿಯಾಗಿ ಮಾಡದೇ ಸಾಗುವಳಿ ತೆರವು ಮಾಡಲು ಮುಂದಾಗಿರುವುದನ್ನು ಒಟ್ಟಾಗಿ ವಿರೋಧಿಸಬೇಕು. ಸೆಪ್ಟಂಬರ್ 19ರಂದು ಮುಖ್ಯಮಂತ್ರಿಗಳು ಬೆಳೆಗಾರರ ಸಂಘಟನೆಗಳ ಪ್ರತಿನಿಧಿಗಳ ಸಭೆ ಕರೆದಿದ್ದಾರೆ. ಅಲ್ಲಿ ನಮಗೆ ಸಮರ್ಪಕ ಪರಿಹಾರ ಸಿಗದೇ ಇದ್ದರೆ ಮುಂದಿನ ದಿನಗಳಲ್ಲಿ ಮೂಡಿಗೆರೆ ಮತ್ತು ಚಿಕ್ಕಮಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದಿದ್ದಾರೆ.

ಸಭೆಯಲ್ಲಿ ಕೆಜಿಎಫ್ ಮಾಜಿ ಅಧ್ಯಕ್ಷ ಬಿ.ಎಸ್. ಜಯರಾಂ, ಕೋಮಾರ್ಕ್ ಮಾಜಿ ಅಧ್ಯಕ್ಷ ಡಿ.ಎಸ್. ರವಿ, ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟ ಸಮಿತಿ ಮುಖಂಡ ವಿಜಯಕುಮಾರ್, ರೈತ ಮುಖಂಡ ದಯಾಕರ್ ಬಾಳೆಹಳ್ಳಿ ಮುಂತಾದವರು ಮಾತನಾಡಿದರು.

ಈ ಸಂದರ್ಭದಲ್ಲಿ ವಿವಿಧ ರಾಜಕೀಯ ಪಕ್ಷಗಳ ಮುಖಂಡರು, ವಿವಿಧ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು, ಕೆಂಪೇಗೌಡ ಒಕ್ಕಲಿಗರ ವೇದಿಕೆ, ಒಕ್ಕಲಿಗರ ಹಿತರಕ್ಷಣಾ ವೇದಿಕೆ ಸೇರಿದಂತೆ ವಿವಿಧ ಸಂಘಸಂಸ್ಥೆಗಳ, ರೈತ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ