October 5, 2024

ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರದಲ್ಲಿರುವ ಅತ್ತಿಗೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದ ಒಳಗೆ ಕಾಳಿಂಗ ಸರ್ಪವೊಂದನ್ನು ಸೆರೆಹಿಡಿಯಲಾಗಿದೆ.

ಶುಕ್ರವಾರ  ಸಂಜೆ ಶಾಲೆ ಬಿಟ್ಟ ನಂತರ ಕಾಳಿಂಗ ಸರ್ಪ ಶಾಲೆಯ ಶೌಚಾಲಯ ಬಳಿ ಅಡಗಿದ್ದನ್ನು ಸಾರ್ವಜನಿಕರು ನೋಡಿ ಉರಗ ಪ್ರೇಮಿ ಬಣಕಲ್ ಮೊಹಮ್ಮದ್ ಆರೀಫ್ ಅವರಿಗೆ ಸುದ್ದಿ ಮುಟ್ಟಿಸಿದ್ದಾರೆ. ಕೂಡಲೇ ಸ್ಥಳಕ್ಕೆ ಬಂದ ಸ್ನೇಕ್ ಆರೀಫ್ ಗಂಟೆಗೂ ಅಧಿಕ ಕಾಲ ಕಾರ್ಯಾಚರಣೆ ನಡೆಸಿದ ಬಳಿಕ 15 ಅಡಿ ಉದ್ದ ಕಾಳಿಂಗ ಸರ್ಪ ಸೆರೆ ಹಿಡಿದರು.

ಶಾಲೆಯ ಮಕ್ಕಳಿದ್ದ ಸಮಯದಲ್ಲಿ ಕಾಳಿಂಗ ಸರ್ಪ ಆವರಣದಲ್ಲಿ ಕಾಣಿಸದ ಕಾರಣ ದೊಡ್ಡ ಅಪಾಯ ಸಂಭವಿಸುವುದು ತಪ್ಪಿದಂತಾಗಿದೆ. ಕಾಳಿಂಗ ಸರ್ಪವನ್ನು ಅರಣ್ಯ ಸಿಬ್ಬಂದಿಗೆ ಮಾಹಿತಿ ನೀಡಿ ಸೆರೆ ಹಿಡಿದು ಚಾರ್ಮಾಡಿ ಅರಣ್ಯಕ್ಕೆ ಬಿಡಲಾಯಿತು. ಕಾರ್ಯಾಚರಣೆ ವೇಳೆ ನೂರಾರು ಮಂದಿ ಜಮಾಯಿಸಿ ಕಾಳಿಂಗ ಸರ್ಪವನ್ನು ವೀಕ್ಷಿಸಿದರು.

ವರದಿ : ಆಶಾ ಸಂತೋಷ್, ಅತ್ತಿಗೆರೆ

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ