October 5, 2024

ಶಿಕ್ಷಣ ವ್ಯವಸ್ಥೆಯಲ್ಲಿ ಅನೇಕ ರೀತಿಯ ಗೊಂದಲಗಳು ಹಾಗೂ ಸವಾಲುಗಳನ್ನು ಶಿಕ್ಷಕರು ಎದುರಿಸುವಂತಾಗಿದೆ. ಅದನ್ನು ಬಗೆರಿಸಿಕೊಳ್ಳಲು ಶಿಕ್ಷಕರು ಸಂಘಟನಾತ್ಮಕವಾಗಿ ಸರಕಾರದ ಗಮನ ಸೆಳೆಯಬೇಕಿದೆ ಎಂದು ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಎಂ.ಕೆ.ರಾಜ್ ಹೇಳಿದರು.

ಅವರು ಭಾನುವಾರ ಮೂಡಿಗೆರೆ ಪಟ್ಟಣದ ಸಂತ ಮಾರ್ಥಾಸ್ ಶಾಲೆಯಲ್ಲಿ ಕರ್ನಾಟಕ ರಾಜ್ಯ ಆನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಮೂಡಿಗೆರೆ ಘಟಕದಿಂದ ಏರ್ಪಡಿಸಿದ್ದ ಜಿಲ್ಲಾ ಶೈಕ್ಷಣಿಕ ಕಾರ್ಯಗಾರ ಮತ್ತು ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು.

ಶಿಕ್ಷಕರ ಸಮಸ್ಯೆಗಳನ್ನು ಬಗೆಹರಿಸಲು ಶಿಕ್ಷಕ ಮತ್ತು ಮಕ್ಕಳ ಅನುಪಾತ ಆರ್‍ಟಿಐ ಆಕ್ಟ್ ಹಾಗೂ ನ್ಯಾಯಾಲಯದ ತೀರ್ಪಿನಂತೆ 30/1 ಜಾರಿಗೆ ತರಬೇಕು. ಹಳೆ ನಿಶ್ಚಿತ ಪಿಂಚಣಿ ಯೋಜನೆ, ಕಾಲ್ಪನಿಕ ವೇತನ ಅನುದಾನಿತ ಪ್ರಾಥಮಿಕ ಶಿಕ್ಷಕರಿಗೆ ಜ್ಯೋತಿ ಸಂಜೀವಿನಿ ಯೋಜನೆ ಜಾರಿಯಾಗಬೇಕು. ಅನುದಾನಿತ ಮಕ್ಕಳಿಗೆ ಮತ್ತು ಶೂ, ಸಾಕ್ಸ್ ನೀಡುವ ಜತೆಗೆ ಅನುದಾನಿತ ಪ್ರಾಥಮಿಕ ಶಾಲೆ ಶಿಕ್ಷಕರಿಗೆ ಶಿಶುಪಾಲನ ರಜೆ ಮಂಜೂರು ಮಾಡುವ ಮೂಲಕ ಶಿಕ್ಷಕರ ನ್ಯಾಯಯುತ ಬೇಡಿಕಗಳನ್ನು ಸರಕಾರ ಈಡೇರಿಸಿದರೆ ಶಿಕ್ಷಕರ ಸಮಸ್ಯೆ ಬಗೆಹರಿಯುತ್ತದೆ ಎಂದು ಹೇಳಿದರು.

ಬಿಇಒ ಹೇಮಂತ್‍ಚಂದ್ರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಶಿಕ್ಷಕರು ಧನಾತ್ಮಕ ಚಿಂತನೆಗಳನ್ನ ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು. ಮಕ್ಕಳ ಭವ್ಯ ಭವಿಷ್ಯ ರೂಪಿಸಲು ಎಲ್ಲಾ ಶಿಕ್ಷಕರು ಪ್ರಾಮಾಣಿಕವಾಗಿ ಕೆಲಸ ಮಾಡಬೇಕೆಂದು ಹೇಳಿದರು.

ಈ ಸಂದರ್ಭದಲ್ಲಿ ಉತ್ತಮ ನವೃತ್ತಿ ಹೊಂದಿದ ಹಾಗೂ ಉತ್ತಮ ಶಿಕ್ಷಕರನ್ನು ಸನ್ಮಾನಿಸಿ ಗೌರವಿಸಲಾಯಿತು. ಸನ್ಮಾನಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂತ ಮಾರ್ಥಾಸ್ ಹಿ.ಪ್ರಾ.ಶಾಲೆಯ ಮುಖ್ಯ ಶಿಕ್ಷಕಿ ಸಿಸ್ಟರ್ ಮೋಲಿ ವಹಿಸಿದ್ದರು.

ಬೆಂಗಳೂರು ದಕ್ಷಿಣ ವಲಯದ ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಾರ್ಯದರ್ಶಿ ತಿಪ್ಪೇಸ್ವಾಮಿ, ಜಿಲ್ಲಾಧ್ಯಕ್ಷೆ ಆರ್.ಎಸ್.ಶಾರದ, ತಾಲೂಕು ಅಧ್ಯಕ್ಷ ಜಿ.ಸಿ.ಜಗದೀಶ್, ಹಾಸನದ ಜಿಲ್ಲಾಧ್ಯಕ್ಷ ಮಹಮ್ಮದ್ ಅಜರುದ್ದೀನ್, ಸರಕಾರಿ ನೌಕರರ ಸಂಘದ ರಾಝ್ಯ ಪರಿಷತ್ ಸದಸ್ಯ ಬಿ.ಆರ್.ನವೀನ್, ಶಿಕ್ಷಕರಾದ ಶಾಂತಕುಮಾರ್, ಹಾ.ಬಾ.ಮಂಜುನಾಥ್ ಮತ್ತಿತರರಿದ್ದರು.

 

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ