October 5, 2024

ಬೆಂಗಳೂರಿನ  ವೈಯಾಲಿಕಾವಲ್ ನ ಮನೆಯೊಂದರಲ್ಲಿ ಮಹಾಲಕ್ಷ್ಮೀ ಎನ್ನುವ ಮಹಿಳೆಯನ್ನು ಕೊಲೆ ಮಾಡಿ ದೇಹವನ್ನು ತುಂಡರಿಸಿ ಫ್ರಿಡ್ಜ್ ನಲ್ಲಿ ಇಟ್ಟಿದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಮಹಿಳೆಯನ್ನು ಕೊಲೆ ಮಾಡಿದ್ದನೆಂದು ಶಂಕಿಸಲಾಗಿದ್ದ ವ್ಯಕ್ತಿ ತನ್ನೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.   ಮಹಾಲಕ್ಷ್ಮಿಯನ್ನು ಕೊಂದ ಕೊಲೆಗಾರನ ಜಾಡನ್ನು ಪತ್ತೆ ಮಾಡಿ ಇನ್ನೇನು ಹಿಡಿಯಬೇಕು ಎನ್ನುವಾಗಲೇ ಕೊಲೆ ಆರೋಪಿ ಮುಕ್ತಿರಂಜನ್ ರಾಯ್ ಎಂಬಾತ ಒಡಿಶಾದಲ್ಲಿ ನಿನ್ನೆ (ಬುಧವಾರ) ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಪೊಲೀಸರಿಗೆ ಸಿಗುವ ಮುನ್ನವೆ ಆರೋಪಿ ಮುಕ್ತಿ ರಂಜನ್‌ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದರಿಂದಾಗಿ ತನಿಖಾಧಿಕಾರಿಗಳಿಗೆ ಮುಂದಿರುವ ಸಾಕಷ್ಟು ಪ್ರಶ್ನೆಗಳಿಗೆ ಉತ್ತರ ಸಿಗದಂತಾಗಿದೆ. ಪ್ರಕರಣದ ಆರೋಪಿಯಾಗಿದ್ದ ಒಡಿಶಾ ಮೂಲದ ಮುಕ್ತಿರಂಜನ್ ಪ್ರತಾಪ್ ರಾಯ್ ನಿನ್ನೆ ಬುಧವಾರ ಬೆಳಗ್ಗೆ ಒಡಿಶಾದ ಭದ್ರಕ್ ಜಿಲ್ಲೆಯ ಭೂನಿಪುರದಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಮಹಾಲಕ್ಷ್ಮಿಯ ಭೀಕರ ಹತ್ಯೆಗೆ ಕಾರಣವೇನು? ಆರೋಪಿ ಹತ್ಯೆಗೈದಿದ್ದು ಹೇಗೆ ಎಂಬ ಪ್ರಶ್ನೆಗಳಿಗೆ ಸೂಕ್ತ ಉತ್ತರಗಳು ಸಿಗುವ ಮುನ್ನವೇ ಆರೋಪಿ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣು

ಮುಕ್ತಿರಂಜನ್ ಆತ್ಮಹತ್ಯೆಗೆ ಶರಣಾಗುವ ಮುನ್ನ ಡೆತ್ ನೋಟ್ ಒಂದನ್ನು ಬರೆದಿಟ್ಟಿದ್ದಾನೆ ಎಂದು ತನಿಖೆಯಿಂದ ತಿಳಿದುಬಂದಿದೆ. ಅದರಲ್ಲಿ ಆತ ಸೆಪ್ಟಂಬರ್‌ 3 ರಂದು ಆಕೆಯ ಮನೆಗೆ ಹೋದಾಗ ಕೃತ್ಯ ಎಸಗಿದ್ದಾಗಿ ಬರೆದಿದ್ದಾನೆ. ಅಲ್ಲದೆ, ಹತ್ಯೆ ಬಳಿಕ ಹೆಬ್ಬಗೋಡಿಯಲ್ಲಿ ನೆಲೆಸಿರುವ ತನ್ನ ಸಹೋದರನಿಗೆ ಕರೆ ಮಾಡಿರುವುದಾಗಿಯೂ ಹೇಳಿಕೊಂಡಿದ್ದಾನೆ. ಆರೋಪಿ ರಂಜನ್ ಅವಿವಾಹಿತನಾಗಿದ್ದು, ಮಹಾಲಕ್ಷ್ಮೀಯನ್ನು ಮದುವೆಯಾಗುವ ಉದ್ದೇಶವನ್ನು ಹೊಂದಿರಲಿಲ್ಲ. ಆದರೆ, ಮಹಾಲಕ್ಷ್ಮೀ ಮದುವೆಯಾಗುವಂತೆ ನಿರಂತರವಾಗಿ ಪೀಡಿಸುತ್ತಿದ್ದು ಇದೇ ವಿಚಾರಕ್ಕೆ ಇಬ್ಬರ ನಡುವೆ ಜಗಳವಾಗಿದೆ. ಅಲ್ಲದೆ, ಮಹಾಲಕ್ಷ್ಮೀ ರಂಜನ್ ಮೇಲೆ ಕೈ ಮಾಡಿದ್ದು, ಇದರಿಂದ ಕೋಪಗೊಂಡು ಆಕೆಯನ್ನು ಹತ್ಯೆ ಮಾಡಿರುವುದಾಗಿ ಹಾಗೂ ಹತ್ಯೆ ಬಳಿಕ ಮೃತದೇಹವನ್ನು 59 ತುಂಡು ಮಾಡಿ ಫ್ರಿಡ್ಜ್ ನಲ್ಲಿ ಇರಿಸಿರುವುದಾಗಿ ಬಹಿರಂಗಪಡಿಸಿದ್ದಾನೆ.

ಏನಿದು ಪ್ರಕರಣ ?

ನೇಪಾಳಿ ಮೂಲದ ಮಹಾಲಕ್ಷ್ಮೀ ಎಂಬ ಮಹಿಳೆ ಬೆಂಗಳೂರಿನಲ್ಲಿ ಪ್ಯಾಕ್ಟರಿ ಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಐದು ವರ್ಷಗಳ ಹಿಂದೆ ಪತಿ ಹೇಮಂತ್ ದಾಸ್ ನಿಂದ ಬೇರ್ಪಟ್ಟಿದ್ದ ಮಹಾಲಕ್ಷ್ಮಿ ಒಂಟಿಯಾಗಿ ಜೀವನ ನಡೆಸುತ್ತಿದ್ದರು ಮತ್ತು ವೀರಣ್ಣ ಭವನ ಸಮೀಪದ ಪೈಪ್ ಲೈನ್ ರಸ್ತೆಯ 6ನೇ ಕ್ರಾಸ್ ನಲ್ಲಿರುವ ಮೂರು ಅಂತಸ್ತಿನ ಕಟ್ಟಡದ ಮೊದಲ ಮಹಡಿಯಲ್ಲಿ ವಾಸವಾಗಿದ್ದರು. ಅವರ ನಾಲ್ಕು ವರ್ಷದ ಮಗಳು ತಂದೆಯೊಂದಿಗೆ ವಾಸಿಸುತ್ತಿದ್ದಳು. ಮಗಳು ತಾಯಿಯೊಂದಿಗೆ ಸಮಯ ಕಳೆಯಲು ಪ್ರತಿ ಹದಿನೈದು ದಿನಗಳಿಗೊಮ್ಮೆ ಮಹಾಲಕ್ಷ್ಮಿ ಭೇಟಿಗೆ ದಾಸ್ ಆಗಮಿಸುತ್ತಿದ್ದರು. ಆದರೆ ಸೆಪ್ಟೆಂಬರ್ 2 ರ ನಂತರ, ಮಹಾಲಕ್ಷ್ಮಿ ಅವರ ಫೋನ್ ಸ್ವಿಚ್ ಆಫ್ ಆಗಿತ್ತು, ಮತ್ತು ದಾಸ್ ಶನಿವಾರ ತಮ್ಮ ಮಗಳೊಂದಿಗೆ ಪತ್ನಿಯನ್ನು ನೋಡಲು ಬಂದಿದ್ದರು. ಈ ವೇಳೆ ನೆರೆಹೊರೆಯವರು ಮಹಾಲಕ್ಷ್ಮಿ ಅವರ ಫ್ಲಾಟ್‌ನಿಂದ ದುರ್ವಾಸನೆ ಬರುತ್ತಿರುವುದು ಅವರ ಗಮನಕ್ಕೆ ಬಂದಿದೆ. ತಕ್ಷಣ ಮಹಾಲಕ್ಷ್ಮಿ ಅವರ ತಾಯಿ ಮತ್ತು ಸಹೋದರಿಗೆ ಮಾಹಿತಿ ನೀಡಿದ್ದಾರೆ.

ನಂತರ ದಾಸ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅಧಿಕಾರಿಗಳು ಮನೆಗೆ ಆಗಮಿಸಿ ಬಾಗಿಲನ್ನು ಒಡೆದು ನೋಡಿದಾಗ, ರೆಫ್ರಿಜರೇಟರ್‌ನಲ್ಲಿ ಮೃತದೇಹ ಪತ್ತೆಯಾಗಿತ್ತು. ದೇಹವನ್ನು ಸುಮಾರು 50ಕ್ಕೂ ಅಧಿಕ ತುಂಡುಗಳನ್ನಾಗಿ ಕತ್ತರಿಸಿ ಫ್ರಿಜ್ಡ್ ನಲ್ಲಿ ಇರಿಸಲಾಗಿತ್ತು.

ಪೊಲೀಸರು ಪ್ರಕರಣ ದಾಖಲಿಸಿ ಆರೋಪಿಯ ಪತ್ತೆಗಾಗಿ ಬಲೆ ಬೀಸಿದ್ದರು. ಈ ಕೊಲೆಯಲ್ಲಿ ಮಹಾಲಕ್ಷ್ಮೀಯೊಂದಿಗೆ ಕೆಲಸ ಮಾಡುತ್ತಿದ್ದ ಟೀಮ್ ಹೆಡ್ ಮುಕ್ತಿರಂಜನ್ ದಾಸ್ ಎಂಬಾತನ ಕೈವಾಡ ಇರುವ ಬಗ್ಗೆ ಶಂಕಿಸಿದ್ದರು. ಆತನ ಪತ್ತೆಗಾಗಿ ಪೊಲೀಸ್ ತಂಡ ಒಡಿಸ್ಸಾಕ್ಕೆ ತೆರಳಿತ್ತು. ಈ ನಡುವೆ ಆರೋಪಿ ಆತ್ಮಹತ್ಯೆಗೆ ಶರಣಾಗಿದ್ದ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ