October 5, 2024

ನಾಳೆಯಿಂದ ರಾಜ್ಯದ ಎಲ್ಲಾ ಸರ್ಕಾರಿ  ಶಾಲೆಗಳಿಗೆ ದಸರಾ ರಜೆ ಘೋಷಣೆ ಮಾಡಲಾಗಿದೆ. ಈ ಕುರಿತಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸಾರ್ವಜನಿಕ ಶಿಕ್ಷಣ ಇಲಾಖೆ ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ಅಕ್ಟೋಬರ್ 3 ರಿಂದ 20ರ ತನಕ ದಸರಾ ರಜೆ ಘೋಷಿಸಿದ್ದು ಒಟ್ಟು 17 ದಿನ ಶಾಲಾ ವಿದ್ಯಾರ್ಥಿಗಳಿಗೆ ದಸರಾ ರಜೆ ಇರಲಿದೆ.

2024-25ನೇ ಶೈಕ್ಷಣಿಕ ಸಾಲಿನ ದಸರಾ ರಜೆ ಅಕ್ಟೋಬರ್ 3 ರಿಂದ 20 ರವರೆಗೆ ಇರಲಿದೆ. ಅಕ್ಟೋಬ‌ರ್ 21ರಿಂದ 2ನೇ ಅವಧಿ ಪ್ರಾರಂಭ ಆಗಲಿದೆ. 2025ರ ಏಪ್ರಿಲ್ 10 ತನಕ ಶಾಲೆಗಳು ನಡೆಯಲಿದ್ದು, ಸಾರ್ವಜನಿಕ ಶಿಕ್ಷಣ ಇಲಾಖೆ ಈ ಕುರಿತಂತೆ ಆದೇಶ ಹೊರಡಿಸಿದೆ. 2024- 2025ರ ಶೈಕ್ಷಣಿಕ ವರ್ಷದ ಶಾಲಾ ಅವಧಿಯ ಮಾರ್ಗದರ್ಶಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ, ಶಾಲೆಗಳು ಆರಂಭಕ್ಕೂ ಮುನ್ನ ಪ್ರಕಟಣೆ ಹೊರಡಿಸಿತ್ತು. ಅದರ ನಿಯಮಾನುಸಾರದಂತೆ ರಜೆಗಳು ಘೋಷಣೆಯಾಗಿವೆ.

ಕರ್ನಾಟಕದಲ್ಲಿ 2024-25ರ ಶೈಕ್ಷಣಿಕ ವರ್ಷವು ಮೇ 29ರಿಂದ ಪ್ರಾರಂಭವಾಗಿದ್ದು, ಮೊದಲ ಅವಧಿಯು ಅಕ್ಟೋಬರ್​​ 2ರ ತನಕ ಇತ್ತು. ಸೆಪ್ಟೆಂಬರ್​ 23ರಿಂದ ಮಧ್ಯಂತರ ಪರೀಕ್ಷೆಗಳು ಶುರುವಾಗಿ ಸೆಪ್ಟೆಂಬರ್​ 30ರ ತನಕ ನಡೆದಿವೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ