October 5, 2024

ಅನಾರೋಗ್ಯದಿಂದ ಹೆಣ್ಣಾನೆ ಸಾವನ್ನಪ್ಪಿರುವ ಘಟನೆ  ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನಲ್ಲಿ ನಡೆದಿದೆ. ಸಕಲೇಶಪುರ ತಾಲ್ಲೂಕಿನ, ವಣಗೂರು ಬಳಿ ಘಟನೆ ನಡೆದಿದ್ದು, ಕಳೆದ ಮೂರು ದಿನಗಳಿಂದ ಅನಾರೋಗ್ಯದಿಂದ ನರಳುತ್ತಿದ್ದ ಕಾಡಾನೆ  ಕೊನೆಯುಸಿರೆಳೆದಿದೆ.

ಕಳೆದ ಮೂರು ದಿನಗಳಿಂದ ಒಂದೇ ಸ್ಥಳದಲ್ಲಿ ನಿಂತಿದ್ದ ಹೆಣ್ಣಾನೆ ಯಾವುದೇ ಆಹಾರವನ್ನು ಸೇವಿಸದೇ ನಿತ್ರಾಣ ಸ್ಥಿತಿಗೆ ತಲುಪಿತ್ತು.

ಚಿಕಿತ್ಸೆಗಾಗಿ ಕಾಡಾನೆಯನ್ನು ಸ್ಥಳಾಂತರ ಮಾಡಿದರೆ ಹೃದಯಾಘಾತವಾಗುವ ಸಂಭವ ಹಿನ್ನಲೆಯಲ್ಲಿ ಸ್ಥಳದಲ್ಲಿಯೇ ಚಿಕಿತ್ಸೆ ನೀಡಲು ಅರಣ್ಯ ಇಲಾಖೆ ಮುಂದಾಗಿತ್ತು. ಚಿಕಿತ್ಸೆಗೆ ತಯಾರಿ ನಡೆಸಿದ್ದಾಗಲೇ ಅನಾರೋಗ್ಯದಿಂದ ಆನೆ ಕೊನೆಯುಸಿರೆಳೆದಿರುವುದು ಬೆಳಕಿಗೆ ಬಂದಿತ್ತು.

ಮೃತ ಹೆಣ್ಣಾನೆ ಸುಮಾರು 20 ವರ್ಷ ವಯಸ್ಸಿನದೆಂದು ಅಂದಾಜಿಸಲಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ, ಪರಿಶೀಲನೆ ನಡೆಸಿದ್ದು,

ಮರಣೋತ್ತರ ಪರೀಕ್ಷೆ ನಡೆಸಿ ಸ್ಥಳದಲ್ಲೇ ಅಂತ್ಯಕ್ರಿಯೆ ನೆರವೇರಿಸಲು ಸಿದ್ದತೆ ನಡೆಸಲಾಗಿದೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ