October 5, 2024

ಮಲೆನಾಡು ಭಾಗದ ರೈತಾಪಿ ವರ್ಗದಿಂದ ಪರಿಸರಕ್ಕೆ ಯಾವುದೇ ಹಾನಿ ಸಂಭವಿಸಿಲ್ಲ. ವಿಶೇಷವಾಗಿ ಕಾಫಿ ಬೆಳೆಯುವ ಪ್ರದೇಶಗಳಲ್ಲಿ ರೈತರು ಪರಿಸರ ಸಂರಕ್ಷಣೆಯಲ್ಲಿ ಹೆಚ್ಚಿನ ಪಾಲು ನೀಡಿದ್ದಾರೆ. ಸರ್ಕಾರಗಳ ಅವೈಜ್ಞಾನಿಕವಾದ ಬೃಹತ್ ಯೋಜನೆಗಳಿಂದಾಗಿ ಹವಾಮಾನ ವೈಪರೀತ್ಯ ಸಂಭವಿಸುತ್ತಿದೆ. ಈ ನಿಟ್ಟಿನಲ್ಲಿ ಪಶ್ಚಿಮ ಘಟ್ಟಗಳ ಸಂರಕ್ಷಣೆಗೆ ಸಂಬಂಧಿಸಿದಂತೆ ಕಸ್ತೂರಿ ರಂಗನ್ ವರದಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸರ್ಕಾರ ಸ್ಥಳೀಯರಿಗೆ ಸರಿಯಾದ ಮಾಹಿತಿ ನೀಡಿಬೇಕು. ಕಸ್ತೂರಿ ರಂಗನ್ ವರದಿ ವಿವರಗಳನ್ನು ಕನ್ನಡ ಭಾಷೆಯಲ್ಲಿ ಮುದ್ರಣ ಮಾಡಿ ಜನಸಾಮಾನ್ಯರಿಗೆ ತಲುಪಿಸುವ ಕಾರ್ಯ ನಡೆಸಬೇಕು. ವರದಿಯ ಬಗ್ಗೆ ಸ್ಥಳೀಯ ಮಟ್ಟದಲ್ಲಿ ಸಂವಾದಗಳು ನಡೆಯಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಗ್ರೀನ್ ಆರ್ಮಿ ಇಂಡಿಯಾ ಇದರ ಚಿಕ್ಕಮಗಳೂರು ಜಿಲ್ಲಾ ಕಾರ್ಯಾಧ್ಯಕ್ಷ ಬಿ.ಸಿ. ದಯಾಕರ್ ಆಗ್ರಹಿಸಿದ್ದಾರೆ.

ಅವರು ಶುಕ್ರವಾರ ಚಿಕ್ಕಮಗಳೂರಿನಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿ ; ಸ್ಥಳೀಯ ಜನರನ್ನು ಕತ್ತಲೆಯಲ್ಲಿಟ್ಟು ಯಾವುದೇ ಯೋಜನೆಗಳನ್ನು ಏಕಪಕ್ಷೀಯವಾಗಿ ಜಾರಿಗೆ ತರಲು ಮುಂದಾದರೆ ಅದರಿಂದ ಗೊಂದಲಗಳಿಗೆ ಕಾರಣವಾಗುತ್ತದೆ. ಪಶ್ಚಿಮ ಘಟ್ಟದ ಸಾಲಿನಲ್ಲಿ ವಾಸಿಸುತ್ತಿರುವ ನಾವುಗಳು ನಮ್ಮ ಹಿರಿಯರು ಅನಾದಿಕಾಲದಿಂದಲೂ ಪರಿಸರಕ್ಕೆ ಪೂರಕವಾಗಿ ಜೀವನ ನಡೆಸುತ್ತಾ ಬಂದಿದ್ದೇವೆ. ಇಲ್ಲಿನ ಜನಜೀವನಕ್ಕೆ ತೊಂದರೆಯಾಗದ ರೀತಿಯಲ್ಲಿ ಸರ್ಕಾರ ಯೋಜನೆಗಳನ್ನು ರೂಪಿಸಿ ಅನುಷ್ಠಾನಕ್ಕೆ ತರಬೇಕು.

ಈ ಬಗ್ಗೆ ಜಿಲ್ಲಾ ಮಟ್ಟದಲ್ಲಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು, ರೈತರು, ಪರಿಸರ ತಜ್ಞರ ಸಭೆಗಳನ್ನು ಕರೆದು ವರದಿಯ ಸಾಧಕ ಬಾಧಕಗಳ ಬಗ್ಗೆ ಚರ್ಚೆ ಸಂವಾದಗಳನ್ನು ನಡೆಸಬೇಕು. ಜನರಲ್ಲಿ ಇರುವ ಸಂಶಯಗಳನ್ನು ಹೋಗಲಾಡಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷ ಪಿ.ಕೆ. ನಾಗೇಶ್, ಚಿಕ್ಕಮಗಳೂರು ತಾಲ್ಲೂಕು ಅಧ್ಯಕ್ಷ ತುಳಸೇಗೌಡ, ಜಿಲ್ಲಾ ಸಂಚಾಲಕ ಡಿ.ಎಸ್. ರಮೇಶ್ ಉಪಸ್ಥಿತರಿದ್ದರು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ