October 5, 2024

ಮೈಸೂರು ದಸರಾ-2024 ಮತ್ತು ದಸರಾ ರಜೆಗಳ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್‌ಆರ್‌ಟಿಸಿ ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಿದೆ.

ದಸರಾ ರಜೆ ಗಮನದಲ್ಲಿಟ್ಟುಕೊಂಡು ಅಕ್ಟೋಬರ್ 9-ಅಕ್ಟೋಬರ್ 12ರ ನಡುವೆ 2,000 ಹೆಚ್ಚುವರಿ ಬಸ್‌ ಕಾರ್ಯಾಚರಣೆಯನ್ನು ಕೆಎಸ್‌ಆರ್‌ಟಿಸಿ ಶುಕ್ರವಾರ ಪ್ರಕಟಿಸಿದೆ. ಇದಲ್ಲದೆ, ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮೈಸೂರಿಗೆ ‘ಫ್ಲೈ ಬಸ್’ ಮೂಲಕ ನೇರ ಸಾರಿಗೆ ಸೌಲಭ್ಯ ಕಲ್ಪಿಸಿದ್ದು, ಮೈಸೂರಿನಲ್ಲಿ ಗಿರಿದರ್ಶಿನಿ, ಜಲದರ್ಶಿನಿ, ದೇವದರ್ಶಿನಿ ವಿಶೇಷ ಪ್ರವಾಸ ಕಾರ್ಯಾಚರಣೆ ಆರಂಭಿಸಿದೆ.

ಈ ವಿಶೇಷ ಬಸ್‌ಗಳು ನಗರದ ಕೆಂಪೇಗೌಡ ಬಸ್ ನಿಲ್ದಾಣ, ಮೈಸೂರು ರಸ್ತೆ ಬಸ್ ನಿಲ್ದಾಣ ಮತ್ತು ಶಾಂತಿನಗರ ಬಿಎಂಟಿಸಿ ಬಸ್ ನಿಲ್ದಾಣದಿಂದ ಕಾರ್ಯನಿರ್ವಹಿಸಲಿವೆ. ಅಲ್ಲದೆ, ಮೈಸೂರು ಮತ್ತು ಮಡಿಕೇರಿ, ಮಂಡ್ಯ, ಮಳವಳ್ಳಿ, ಎಚ್‌ಡಿ ಕೋಟೆ, ಚಾಮರಾಜನಗರ, ಹುಣಸೂರು, ಕೆಆರ್ ನಗರ ಮತ್ತು ಗುಂಡ್ಲುಪೇಟೆ ಸುತ್ತಮುತ್ತಲಿನ ಪ್ರವಾಸಿ/ಯಾತ್ರಾ ಕೇಂದ್ರಗಳಿಗೆ ಭೇಟಿ ನೀಡುವ ಪ್ರವಾಸಿಗರ ಅಗತ್ಯತೆಗಳನ್ನು ಪೂರೈಸಲು ಮೈಸೂರಿನಿಂದ 400 ವಿಶೇಷ ಬಸ್‌ಗಳು ನಿಯೋಜನೆಗೊಳಿಸಿದೆ.

ಬಂಡೀಪುರ, ಗೋಪಾಲಸ್ವಾಮಿ ಬೆಟ್ಟ, ಬಿಆರ್ ಹಿಲ್ಸ್, ನಂಜನಗೂಡು ಮತ್ತು ಚಾಮುಂಡಿ ಬೆಟ್ಟಗಳಿಗೆ ಭೇಟಿ ನೀಡಲು ಮೈಸೂರಿನಿಂದ ಬರುವ ಪ್ರವಾಸಿಗರಿಗೆ ಒಂದು ದಿನದ ವಿಶೇಷ ಪ್ಯಾಕೇಜ್ ಟೂರ್ ಸೌಲಭ್ಯವನ್ನು ಕೂಡ ಪ್ರಕಟಿಸಿದೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ