October 7, 2024

ಉಡುಪಿಯ ಹೆಬ್ರಿಯಲ್ಲಿ ಭಾನುವಾರ ಸಂಜೆ ಮೇಘಸ್ಫೋಟ ಸಂಭವಿಸಿದ್ದು, ಭಾರಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.

ಪಶ್ಚಿಮ ಘಟ್ಟದ ತಪ್ಪಲು ಹೆಬ್ರಿಯಲ್ಲಿ ಸಂಜೆ 4.30 ರ ಸುಮಾರಿಗೆ ಮೇಘಸ್ಫೋಟವಾಗಿದ್ದು, ಹೆಬ್ರಿ ತಾಲೂಕಿನ ಮುದ್ರಾಡಿ ಗ್ರಾಮದ ಬಲ್ಲಾಡಿ ಎಂಬಲ್ಲಿ ಹಠಾತ್ ಜಲ ಪ್ರವಾಹ ಉಂಟಾಗಿದೆ. ಬಲ್ಲಾಡಿಯ ಈಶ್ವರನಗರ ಸಮೀಪದ ಬಮ್ಮಗುಂಡಿ ಹೊಳೆ ಉಕ್ಕಿ ಹರಿದು ಮನೆ, ಕೃಷಿ ಜಮೀನಿಗೆ ನೀರು ನುಗ್ಗಿ ಭಾರೀ ಆವಾಂತರ ಸೃಷ್ಟಿಯಾಗಿದೆ.

ಭೀಕರ ಜಲ ಪ್ರವಾಹದಿಂದಾಗಿ ಹಲವು ಮನೆಗಳು, ಕಾರು ಬೈಕ್ ಗಳು ಕೊಚ್ಚಿಕೊಂಡು ಹೋಗಿದ್ದು, ಕಬ್ಬಿನಾಲೆ ಭಾಗದ ಪರ್ವತ ಸಾಲಿನಲ್ಲಿ ಮೇಘ ಸ್ಫೋಟವಾಗಿ ಈ ಭೀಕರ ಪ್ರವಾಹ ಸೃಷ್ಟಿಯಾಗಿದೆ. ಮುದ್ರಾಡಿಯ ಹೊಸ ಕಂಬ್ಲದಲ್ಲಿ 1, ಕಾಂತರಬೈಲಿನಲ್ಲಿ 4, ಕೆಲಕಿಲದಲ್ಲಿ 3 ಮನೆಗಳು ಅರ್ಧದಷ್ಟು ಮುಳುಗಿದ್ದು, ವಿಚಾರ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿದ ರಕ್ಷಣಾ ಸಿಬ್ಬಂದಿ ಹಗ್ಗಕಟ್ಟಿ ಏಣಿಯ ಸಹಾಯದಿಂದ ಮನೆಮಂದಿಯನ್ನು ರಕ್ಷಿಸಿದ್ದಾರೆ.

ಮುದ್ರಾಡಿಯ ಹೊಸ ಕಂಬ್ಲ, ಕಾಂತರಬೈಲು, ಕೆಲಕಿಲ ಎಂಬಲ್ಲಿನ ಸುಮಾರು ಎಂಟು ಮನೆಗಳಿಗೆ ಪ್ರವಾಹದ ನೀರು ನುಗ್ಗಿದೆ. ನೆರೆಯಿಂದಾಗಿ ಮುದ್ರಾಡಿ ಸಂಪರ್ಕಿಸುವ ಬಲ್ಲಾಡಿ ತುಂಡುಗುಡ್ಡೆ ರಸ್ತೆ ಸಂಪೂರ್ಣ ಬಂದ್ ಆಗಿದ್ದು ಸ್ಥಳೀಯರು ಬದಲಿ ರಸ್ತೆಯ ಮೂಲಕ ಸಂಚರಿಸುತ್ತಿದ್ದಾರೆ.

‘ಕಬ್ಬಿನಾಲೆಯ ಬೆಟ್ಟದಲ್ಲಿ ಉಂಟಾದ ಮೇಘಸ್ಫೋಟದಿಂದ ಕೇವಲ ಕೆಲವೇ ಗಂಟೆಯಲ್ಲಿ ಭಾರೀ ಮಳೆಯಾಗಿ ಜಲ ಪ್ರವಾಹ ಸೃಷ್ಠಿಯಾಗಿದೆ. ಇದರ ಪರಿಣಾಮ ನೀರು ಮನೆಗಳಿಗೆ ನುಗ್ಗಿವೆ ಎಂದು ಮುದ್ರಾಡಿ ಗ್ರಾಮ ಪಂಚಾಯತ್ ಸದಸ್ಯ ಗಣಪತಿ ಮುದ್ರಾಡಿ ತಿಳಿಸಿದ್ದಾರೆ. ಗ್ರಾಮ ಪಂಚಾಯಿತಿ ಅಧ್ಯಕ್ಷೆ ವಸಂತಿ ಪೂಜಾರಿ, ಪಂಚಾಯತಿ ಸದಸ್ಯರು, ಗ್ರಾಮ ಆಡಳಿತಾಧಿಕಾರಿ ನವೀನ್ ಕುಮಾರ್ ಕುಕ್ಕುಜೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕಳೆದ ಎರಡು ದಿನಗಳಿಂದ ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವೆಡೆ ಅನಾಹುತ ಸಂಭವಿಸುತ್ತಿದೆ. ರಾಜಧಾನಿ ಬೆಂಗಳೂರಿನಲ್ಲಿಯೂ ಸಹಿತ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ.

https://x.com/RitamAppKannada/status/1842942812280758396?ref_src=twsrc%5Etfw%7Ctwcamp%5Etweetembed%7Ctwterm%5E1842942812280758396%7Ctwgr%5E660a0b318f43e7fe8bdc2988d65cc9f8b6580d79%7Ctwcon%5Es1_c10&ref_url=https%3A%2F%2Fwww.kannadaprabha.com%2Fkarnataka%2F2024%2FOct%2F06%2Fcloudburst-in-udupi-hebri-huge-floods-in-udupi

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ