October 8, 2024

ರಾಜ್ಯದಲ್ಲಿ ನಿವೇಶನ ಮಾರಾಟದಲ್ಲಿ ಆಗುತ್ತಿರುವ ವಂಚನೆ ತಡೆಗಟ್ಟುವ ಹಿನ್ನೆಲೆಯಲ್ಲಿ ಇ.ಖಾತೆಯನ್ನು ಕಡ್ಡಾಯಗೊಳಿಸಲಾಗಿದೆ. ಆದರೆ, ಯಾವುದೇ ಡೆಡ್ ಲೈನ್ ವಿಧಿಸಿಲ್ಲ. ಹೀಗಾಗಿ ಸಾರ್ವಜನಿಕರು ಆತುರ ಪಡುವ ಅಗತ್ಯ ಇಲ್ಲ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಹೇಳಿದ್ದಾರೆ.

ಇ-ಖಾತಾ ಬಗೆಗಿನ ಗೊಂದಲಗಳ ಬಗ್ಗೆ ಸೋಮವಾರ ಬಿಬಿಎಂಪಿ ಅಧಿಕಾರಿಗಳ ಜೊತೆ ಸಭೆ ನಡೆಸಿ ಚರ್ಚಿಸಿದ ಬಳಿಕ ವಿಕಾಸಸೌಧದಲ್ಲಿ ತುರ್ತು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಸಚಿವರು ಮಾತನಾಡಿದರು.

ರಾಜ್ಯದ ಕೆಲವು ಭಾಗದಲ್ಲಿ ಮಧ್ಯವರ್ತಿಗಳು ಇ-ಖಾತಾ ಗೆ ಸರ್ಕಾರ ಸಮಯ ನಿಗದಿ ಮಾಡಿದೆ ಎಂದು ಜನರಲ್ಲಿ ಗೊಂದಲ ಸೃಷ್ಟಿಸಿ, ಇ-ಖಾತೆ ಮಾಡಿಸಿಕೊಡುವುದಾಗಿ ಜನರನ್ನು ಸುಲಿಗೆ ಮಾಡಿರುವ ಘಟನೆ ಗಮನಕ್ಕೆ ಬಂದಿದೆ. ಆದರೆ, ಆಸ್ತಿ ಮಾಲೀಕರು ಇ-ಖಾತಾ ಮಾಡಿಸಿಕೊಳ್ಳಲು ಸರ್ಕಾರ ಯಾವುದೇ ಸಮಯ ನಿಗದಿ ಮಾಡಿಲ್ಲ. ಹೀಗಾಗಿ, ಸಾರ್ವಜನಿರಕರು ಗಾಬರಿಗೊಳಗಾಗದೆ, ಆತುರಪಡದೆ ತಮ್ಮ ಸಮಯ ನೋಡಿಕೊಂಡು ಇ-ಖಾತಾ ಮಾಡಿಸಿಕೊಳ್ಳಬಹುದು. ಊಹಾಪೋಹಗಳಿಗೆ ಕಿವಿಕೊಟ್ಟು ಆತಂಕಕ್ಕೆ ಒಳಗಾಗಬೇಡಿ ಎಂದು ಗೊಂದಲಕ್ಕೆ ತೆರೆ ಎಳೆದರು.

ನಕಲಿ ನೋಂದಣಿ ಪ್ರಕರಣಗಳನ್ನು ತಡೆಯೊಡ್ಡುವ ಸಲುವಾಗಿಯೇ ಇ-ಖಾತಾ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ಆದರೆ, ಇ-ಖಾತಾ ಪಡೆಯಲು ಆತುರ ಬೇಕಿಲ್ಲ. ನಿವೇಶನಗಳನ್ನು ಮಾರುವ ಅಥವಾ ಕೊಳ್ಳುವ ಪ್ರಕ್ರಿಯೆಯಲ್ಲಿ ಮಾತ್ರ ಇ-ಖಾತಾ ಕಡ್ಡಾಯ ಮಾಡಲಾಗಿದೆ.

ಇ-ಖಾತಾ ಪಡೆಯಲು ಸಾರ್ವಜನಿಕರು ಕಚೇರಿಗಳಿಗೆ ಬರುವ ಅಗತ್ಯ ಇಲ್ಲ. ಬದಲಾಗಿ ಮನೆಯಿಂದಲೇ ಇ-ಖಾತಾ ಡೌನ್ಲೋಡ್ ಮಾಡಿಕೊಳ್ಳಬಹುದು. ಬೆಂಗಳೂರಿನಲ್ಲಿ 21 ಲಕ್ಷ ನಿವೇಶನಗಳಿವೆ. ಈ ನಿವೇಶನಗಳ ಡ್ರಾಪ್ಟ್ಗಳನ್ನು ಬಿಬಿಎಂಪಿ ಈಗಾಗಲೇ ತನ್ನ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಿದೆ. ಆಸ್ತಿ ಮಾಲೀಕರು ಈ ಡ್ರಾಪ್ಟ್ ಗಳನ್ನು ನೋಡಿ, ಅಗತ್ಯ ದಾಖಲೆಗಳನ್ನು ವೆಬ್ಸೈಟ್ ನಲ್ಲೇ ಲಗತ್ತಿಸುವ ಮೂಲಕ ಯಾವುದೇ ಕಚೇರಿಗೆ ಹೋಗದೆ ಮನೆಯಿಂದಲೇ ಶಾಶ್ವತ ಇ-ಖಾತಾ ಪಡೆದುಕೊಳ್ಳಬಹುದು ಎಂದು ತಿಳಿಸಿದರು.

ಮಧ್ಯವರ್ತಿಗಳ ಹಾವಳಿ ತಪ್ಪಿಸಲು ಹಾಗೂ ನಕಲಿ ನೋಂದಣಿಗಳನ್ನು ತಪ್ಪಿಸಿ, ಆಸ್ತಿ ಮಾಲೀಕರ ಮಾಲೀಕತ್ವವನ್ನು ರಕ್ಷಿಸಲು ಇ-ಖಾತಾ ವ್ಯವಸ್ಥೆ ಶಾಶ್ವತ ಪರಿಹಾರ ನೀಡಲಿದೆ. ಇ-ಖಾತಾಗೆ ಸಂಬಂಧಿಸಿದಂತೆ ಕೆಲವು ಗೊಂದಲಗಳಿರುವುದು ನಿಜ. ಆದರೆ, ಆಸ್ತಿ ಮಾಲೀಕರು ಒಂದು ಬಾರಿ ಇ-ಖಾತಾ ಮಾಡಿಸಿಕೊಂಡರೆ ಯಾವ ಮಧ್ಯವರ್ತಿಗಳ ಮುಲಾಜಿಲ್ಲದೆ ಬದುಕಬಹುದು ಎಂದು ಭರವಸೆ ನೀಡಿದರು

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ