October 5, 2024

ರಾಜ್ಯದಲ್ಲಿ ಕಾಫಿ ಬೆಳಗಾರರಿಗಾಗಿ ಕರ್ನಾಟಕ ಭೂಕಂದಾಯ ಕಾಯ್ದೆಗೆ ತಿದ್ದುಪಡಿ ತರಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.

ಅವರು ನಿನ್ನೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಡಿಸೆಂಬರ್‍ ನಲ್ಲಿ ಬೆಳಗಾವಿಯಲ್ಲಿ ನಡೆಯಲಿರುವ ವಿಧಾನಮಂಡಲ ಅಧಿವೇಶನದಲ್ಲಿ ತಿದ್ದುಪಡಿ ಕಾಯ್ದೆ ಮಂಡಿಸಲಾಗುವುದು ಎಂದರು.

ರಾಜ್ಯದಲ್ಲಿ ಸುಮಾರು 1 ಲಕ್ಷ ಎಕರೆಯಷ್ಟು ಸರ್ಕಾರಿ ಜಮೀನನ್ನು ಕಾಫಿ ಎಸ್ಟೇಟ್ ಮಾಲೀಕರು ಒತ್ತುವರಿ ಮಾಡಿಕೊಂಡಿದ್ದಾರೆ. ಆ ಜಮೀನನ್ನು ಅವರಿಗೆ ದೀರ್ಘಾವಧಿಗೆ ಗುತ್ತಿಗೆ ನೀಡಲು ಕಂದಾಯ ಇಲಾಖಾ ಹಂತದಲ್ಲಿ ಈಗಾಗಲೇ ತೀರ್ಮಾನ ಮಾಡಲಾಗಿದೆ. ತಿದ್ದುಪಡಿ ಮಸೂದೆ ಸದನದಲ್ಲಿ ಮಂಡನೆಯಾಗಿ ಅನುಮೋದನೆ ಪಡೆದ ನಂತರ ಗುತ್ತಿಗೆ ಪ್ರಕ್ರಿಯೆ ಆರಂಭವಾಗಲಿದೆ ಎಂದರು.

***************

ನಮ್ಮ ಚಿಕ್ಕಮಗಳೂರು ಸೇರಿದಂತೆ ರಾಜ್ಯದ ಹಾಸನ, ಕೊಡಗು ಜಿಲ್ಲೆಗಳಲ್ಲಿ ಕಾಫಿ ಬೆಳೆಗಾರರು ತಮ್ಮ ತೋಟಕ್ಕೆ ಹೊಂದಿಕೊಂಡಂತೆ ಇರುವ ಸರ್ಕಾರಿ ಜಮೀನಿನಲ್ಲಿ ಕಾಫಿ ತೋಟವನ್ನು ವಿಸ್ತರಣೆ ಮಾಡಿದ್ದು ಈ ಜಮೀನನ್ನು ಗುತ್ತಿಗೆ ಆಧಾರದಲ್ಲಿ ನೀಡಬೇಕು ಎಂದು ಬೆಳೆಗಾರರ ಸಂಘಟನೆಗಳು ಸರ್ಕಾರಕ್ಕೆ ಮನವಿ ಸಲ್ಲಿಸಿ ಒತ್ತಾಯಿಸಿದ್ದವು.

******

ಸಾಕುಪ್ರಾಣಿಗಳೆಂದರೆ ಪಂಚಪ್ರಾಣ : ಕರುಣಾಮಯಿ ಜೀವಕ್ಕೆ ಎರವಾದ ಕಾಡಾನೆ

 

ಚಿಕ್ಕಮಗಳೂರು ‌ದರ್ಪಣ ವಾಟ್ಸಾಪ್ ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಒತ್ತಿ
https://chat.whatsapp.com/EPix3ar9qizEtDUS0amt5B

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ