October 5, 2024

ಚಿಕ್ಕಮಗಳೂರು ಜಿಲ್ಲೆಯಲ್ಲಿ ನಿವೇಶನ ರಹಿತ ಬಡವರಿಗೆ ನಿವೇಶನ ನೀಡಬೇಕು ಎಂದು ಆಗ್ರಹಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಸಿ.ಪಿ.ಐ) ವತಿಯಿಂದ ಚಿಕ್ಕಮಗಳೂರು ನಗರದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ನಗರದ ಆಜಾದ್ ವೃತ್ತದ ಬಳಿ ಜಮಾವಣೆಗೊಂಡಿದ್ದ ನೂರಾರು ಪ್ರತಿಭಟನಾಕಾರರು ನಿವೇಶನ ನೀಡುವಂತೆ ಸರ್ಕಾರಕ್ಕೆ ಒತ್ತಾಯಿಸಿದರು. ಜಿಲ್ಲಾಧಿಕಾರಿಗಳ ಕಛೇರಿವರೆಗೆ ಮೆರವಣಿಗೆ ಸಾಗಿ ಮನವಿ ಸಲ್ಲಿಸಿದರು.

ಸಿಪಿಐ ಜಿಲ್ಲಾ ಕಾರ್ಯದರ್ಶಿ ರಾಧಾ ಸುಂದರೇಶ್ ಮಾತನಾಡಿ ಜಿಲ್ಲೆಯಲ್ಲಿ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಸ್ವಂತ ಸೂರು ಇಲ್ಲದೇ ಸಾವಿರಾರು ಜನರು ನಿವೇಶನ ರಹಿತರು ಇದ್ದಾರೆ. ಸರ್ಕಾರ ನೀಡುವ ಮನೆ ಕಟ್ಟಿಕೊಳ್ಳಲು ಸಹ ನಿವೇಶವಿಲ್ಲ. ಹಾಗಾಗಿ ಸ್ವಂತ ಮನೆ ಕಟ್ಟಿಕೊಳ್ಳಬೇಕು ಎಂಬ ಬಡವರ ಕನಸು ನುಚ್ಚುನೂರಾಗುತ್ತಿದೆ. ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿ, ಪಟ್ಟಣ ಪಂಚಾಯಿತಿ, ನಗರಸಭೆಗಳಿಗೆ ಮನವಿ ಮಾಡಿದ್ದರೂ ಯಾವುದೇ ಕ್ರಮ ಜರುಗಿಸಿಲ್ಲ. ಈ ಬಗ್ಗೆ ಜಿಲ್ಲಾಧಿಕಾರಿಗಳು ನೇರವಾಗಿ ಮಧ್ಯಪ್ರವೇಶಿಸಿ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ಸಿಪಿಐ ಮುಖಂಡ ವಿಜಯಕುಮಾರ್ ಮಾತನಾಡಿ ಗ್ರಾಮಾಂತರ ಪ್ರದೇಶದಲ್ಲಿ ಇರುವ ಕಂದಾಯ ಭೂಮಿ ಮತ್ತು ಗೋಮಾಳಗಳನ್ನು ನಿವೇಶನ ರಹಿತರಿಗೆ ನಿವೇಶನ ಹಂಚಲು ಮೀಸಲಿಡಬೇಕು. ನಿವೇಶನ ರಹಿತರನ್ನು ಗುರುತಿಸಿ ಸರ್ಕಾರ ಅವರಿಗೆ ನಿವೇಶನ ನೀಡುವ ವ್ಯವಸ್ಥೆ ಮಾಡಬೇಕು. ಈ ಬಗ್ಗೆ ಜಿಲ್ಲೆಯ ಜನಪ್ರತಿನಿಧಿಗಳು ಮುತುವರ್ಜಿ ವಹಿಸಬೇಕು, ವಸತಿ, ಆರೋಗ್ಯ, ಶಿಕ್ಷಣ ಸಹಿತ ಮೂಲ ಸೌಕರ್ಯ ಒದಗಿಸಲು ಸರ್ಕಾರ ಪ್ರಥಮ ಆದ್ಯತೆ ನೀಡಬೇಕು. ಬಡವರಿಗೆ ನಿವೇಶನ ಜಾಗ ಸಿಗುವವರೆಗೂ ಚಳವಳಿ ಮುಂದುವರಿಸುವುದಾಗಿ ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಚಿಕ್ಕಮಗಳೂರು ತಾಲ್ಲೂಕು ಕಾರ್ಯದರ್ಶಿ ಕೆರೆಮಕ್ಕಿ ರಮೇಶ್, ಮೂಡಿಗೆರೆ ತಾಲ್ಲೂಕು ಕಾರ್ಯದರ್ಶಿ ಕೆಳಗೂರು ರಮೇಶ್, ಜಿಲ್ಲಾ ಸಹಕಾರ್ಯದರ್ಶಿ ರಘು, ರವಿ ಸುಂಕಸಾಲೆ, ಜಯಾನಂದ್, ಜಾರ್ಜ್ ಮುಂತಾದವರು ಇದ್ದರು. ಕಾಂಗ್ರೇಸ್ ವಕ್ತಾರ ಹೆಚ್.ಹೆಚ್. ದೇವರಾಜು ಸಹ ಪ್ರತಿಭಟನೆಗೆ ಸಾಥ್ ನೀಡಿದ್ದರು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ