October 5, 2024

ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಆಯೋಜಿಸಿರುವ ದತ್ತಮಾಲಾ ಅಭಿಯಾನ ಹಾಗೂ ದತ್ತ ಜಯಂತಿ ಪ್ರಯುಕ್ತ ಸೂಕ್ಷ್ಮ ಪ್ರದೇಶವಾದ ಚಾರ್ಮಾಡಿ ಘಾಟ್ ಗಡಿ ಭಾಗದ ಕೊಟ್ಟಿಗೆಹಾರದಲ್ಲಿ ಸೂಕ್ತ ಕಾನೂನು ವ್ಯವಸ್ಥೆ ಹಿನ್ನಲೆಯಲ್ಲಿ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಸೂಕ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ’ಎಂದು ಮೂಡಿಗೆರೆ ಸರ್ಕಲ್ ಇನ್ ಸ್ಪೆಕ್ಟರ್ ಸೋಮೇಗೌಡ ಹೇಳಿದರು.

ಅವರು ಪತ್ರಿಕೆಯೊಂದಿಗೆ ಮಾತನಾಡಿ’ ಕೊಟ್ಟಿಗೆಹಾರದಲ್ಲಿ ದಕ್ಷಿಣ ಕನ್ನಡ ಭಾಗದಿಂದ ಬರುವ ವಾಹನಗಳ ಮಾಹಿತಿ ಕಲೆ ಹಾಕಿ ತಪಾಸಣೆ ಮಾಡಿ ಬಿಡಲಾಗುತ್ತಿದೆ. ಆಯಾ ಗ್ರಾಮ ಪಂಚಾಯಿತಿ ಅಧಿಕಾರಿಗಳನ್ನು ಚೆಕ್ ಪೋಸ್ಟ್ ಗಳಲ್ಲಿ ನಿಯೋಜಿಸಲಾಗಿದೆ. ವಿವಿಧ ಜಿಲ್ಲೆಯ ಪೊಲೀಸರನ್ನು ತಪಾಸಣಾ ಕೇಂದ್ರಗಳಲ್ಲಿ ಹಗಲು ಮತ್ತು ರಾತ್ರಿ ಪಾಳಿಯಲ್ಲಿ ಒಂದು ಚೆಕ್ ಪೋಸ್ಟ್ ಗೆ 10 ಪೊಲೀಸ್ ಸಿಬ್ಬಂದಿ ಹಾಗೂ 2 ಇಬ್ಬರು ಸಬ್ ಇನ್ ಸ್ಪೆಕ್ಟರ್ ಎರಡು ಪಾಳಿಯಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿದೆ.

ಮುಂಜಾಗರೂಕತೆ ಕ್ರಮವಾಗಿ ಡಿಸೆಂಬರ್ 8ರಂದು ಬೆಳಿಗ್ಗೆಯಿಂದಲೇ ಕೊಟ್ಟಿಗೆಹಾರದಲ್ಲಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಲು ಆದೇಶಿಸಲಾಗಿದೆ.ಕೊಟ್ಟಿಗೆಹಾರ,ಜನ್ನಾಪುರ,ಗೋಣಿಬೀಡು, ಕೊಲ್ಲಿಬೈಲ್, ಬಾಳೂರು ಹ್ಯಾಂಡ್ ಪೋಸ್ಟ್ ಗಳಲ್ಲಿ ತನಿಖಾ ಠಾಣಾ ತೆರೆದಿದ್ದೇವೆ. ಧಾರ್ಮಿಕ ಸ್ಥಳಗಳಿಗೆ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಕೊಟ್ಟಿಗೆಹಾರ ಚೆಕ್ ಪೋಸ್ಟ್ ನಲ್ಲಿ ಬಣಕಲ್ ಸಬ್ ಇನ್ ಸ್ಪೆಕ್ಟರ್ ಜಂಬೂರಾಜ್ ಮಹಾಜನ್ ಉಸ್ತುವಾರಿ ವಹಿಸಿದ್ದು ಅವರೊಂದಿಗೆ ಇತರ ಜಿಲ್ಲೆಯ ಎರಡು ಸಬ್ ಇನ್ ಸ್ಪೆಕ್ಟರ್ ಕರ್ತವ್ಯದಲ್ಲಿದ್ದಾರೆ ಎಂದು ಪತ್ರಿಕೆಗೆ ಮಾಹಿತಿ ನೀಡಿದರು.

ವರದಿ : ತನು ಕೊಟ್ಟಿಗೆಹಾರ

 

ನಿರಂತರ ಸುದ್ದಿಗಳಿಗಾಗಿ “ದರ್ಪಣ ನ್ಯೂಸ್” ವಾಟ್ಸಾಪ್ ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಒತ್ತಿ

https://chat.whatsapp.com/IUPyAezzcFFJtbYEeJLsM6

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ