October 5, 2024

ಮೂಡಿಗೆರೆ ಪಟ್ಟಣದ ಹ್ಯಾಂಡ್ ಪೋಸ್ಟ್ ಸರ್ಕಲ್ ನಲ್ಲಿ ಫಾರ್ಚುನರ್ ಕಾರೊಂದು ಸ್ವಿಫ್ಟ್ ಕಾರಿಗೆ ಅಪಘಾತ ಮಾಡಿ ನಿಲ್ಲಿಸದೇ ಪರಾರಿಯಾಗಿದೆ.

ಇಂದು ಸಂಜೆ ಸುಮಾರು 6 ಗಂಟೆಯ ಹೊತ್ತಿಗೆ  ಬೇಲೂರು ಕಡೆಯಿಂದ ಬರುತ್ತಿದ್ದ ಕೇರಳ ಮೂಲದ ಸ್ವಿಫ್ಟ್ ಕಾರಿಗೆ ಹಿಂದಿನಿಂದ ವೇಗವಾಗಿ ಬಂದ ಫಾರ್ಚುನರ್ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಇದರಿಂದ ಸ್ವಿಫ್ಟ್ ಕಾರು ಆಯಾತಪ್ಪಿ ಎದರಿನಿಂದ ಬರುತ್ತಿದ್ದ ಟ್ರಾಕ್ಟರ್ ಟ್ರಾಲಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಹೊಡೆದ ರಭಸಕ್ಕೆ ಸ್ವಿಫ್ಟ್ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ

ಕಾರಿನಲ್ಲಿ ಕೇರಳ ಮೂಲದವರು ಎನ್ನಲಾದ ಒಬ್ಬರೇ ಪ್ರಯಾಣಿಸುತ್ತಿದ್ದರು. ಕಾರಿನ ಮುಂಭಾಗದ ಎರಡು ಬಲೂನ್ ಗಳು ಓಪನ್ ಆಗಿದ್ದು ಇದರಿಂದ ಕಾರನ್ನು ಚಾಲನೆ ಮಾಡುತ್ತಿದ್ದ ವ್ಯಕ್ತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಹಿಂದಿನಿಂದ ಡಿಕ್ಕಿಹೊಡೆದ ಫಾರ್ಚುನರ್ ಡ್ರೈವರ್ ಕಾರು ನಿಲ್ಲಿಸದೇ ವೇಗವಾಗಿ ಕೊಟ್ಟಿಗೆಹಾರ ರಸ್ತೆಯಲ್ಲಿ ಪರಾರಿಯಾಗಿದ್ದಾರೆ. ಕೂಡಲೇ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು ಪರಾರಿಯಾಗಿರುವ ಫಾರ್ಚುನರ್ ಪತ್ತೆಗಾಗಿ ಬಲೆ ಬೀಸಿದ್ದಾರೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ