October 5, 2024

ವಿವೋ ಫ್ರೋ ಕಬ್ಬಡ್ಡಿ ಲೀಗ್ 9ನೇ ಆವೃತ್ತಿಯಲ್ಲಿ ಬೆಂಗಳೂರು ಬುಲ್ಸ್ ತಂಡದ ಅಭಿಯಾನ ಅಂತ್ಯವಾಗಿದೆ.

ನಿನ್ನೆ ರಾತ್ರಿ ನಡೆದ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಬೆಂಗಳೂರು ಬಲಿಷ್ಠ ಜೈಪುರ ಪಿಂಕ್ ಪ್ಯಾಂಥರ್ಸ್ ತಂಡದ ಎದುರು 49-29 ಅಂಕಗಳ ಅಂತರದಿಂದ ಸೋಲನುಭವಿಸಿದೆ.

ಆರಂಭದಿಂದಲೂ ಏಕಪಕ್ಷೀಯವಾಗಿ ಸಾಗಿದ ಪಂದ್ಯದಲ್ಲಿ ಬೆಂಗಳೂರು ಯಾವ ಹಂತದಲ್ಲೂ ತಿರುಗೇಟು ನೀಡಲು ಪಿಂಕ್ ಫ್ಯಾಂಥರ್ಸ್ ಆಟಗಾರರು ಅವಕಾಶ ನೀಡಲಿಲ್ಲ.

ಲೀಗ್ ಹಂತದಲ್ಲಿ ಉತ್ತಮವಾಗಿ ಆಡುತ್ತಾ ಬಂದಿದ್ದ ಬೆಂಗಳೂರು ಬುಲ್ಸ್ ಈ ಬಾರಿ ಪ್ರಶಸ್ತಿ ಗೆಲ್ಲಬಹುದು ಎಂದು ಕರ್ನಾಟಕದ ಕಬ್ಬಡ್ಡಿ ಪ್ರಿಯರು ಬಹು ನೀರಿಕ್ಷೇಯಲ್ಲಿದ್ದರು. ಆದರೆ ಆ ನಿರೀಕ್ಷೆ ಈಗ ಹುಸಿಯಾಗಿದೆ.

ಎರಡನೇ ಸೆಮಿಫೈನಲ್‍ನಲ್ಲಿ ಪುಣೇರಿ ಪಲ್ಟನ್ ತಂಡ ತಮಿಳು ತಲೈವಾಸ್ ತಂಡವನ್ನು 39-37 ಅಂಕಗಳ ಅಂತರದಿಂದ ಮಣಿಸಿದೆ. ರೋಚಕವಾಗಿ ನಡೆದ ಈ ಪಂದ್ಯದಲ್ಲಿ ಕೊನೆಯಲ್ಲಿ ಪುಣೇರಿ ಪಲ್ಟರ್ ಗೆಲುವಿನ ನಗು ಬೀರಿದೆ.

ಫೈನಲ್ ಪಂದ್ಯ ಜೈಪುರ್ ಪಿಂಕ್ ಫ್ಯಾಂಥರ್ಸ್ ಮತ್ತು ಪುಣೇರಿ ಪಲ್ಟನ್ ತಂಡಗಳ ನಡುವೆ ನಾಳೆ ಇಂದೋರ್ ಸರ್ದಾರ್ ವಲ್ಲಭಬಾಯ್ ಸ್ಟೇಡಿಯಂನಲ್ಲಿ ನಡೆಯಲಿದೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ